ಆಮ್ಸ್ಟರ್ಡ್ಯಾಮ್ ನಲ್ಲಿ ಪಾಸ್ಪೋರ್ಟ್ ಕಳೆದುಕೊಂಡು ಶಟ್ಲರ್ ಕಶ್ಯಪ್: ಸುಷ್ಮಾ ಬಳಿ ನೆರವು ಕೋರಿಕೆ
ಭಾರತದ ಪುರುಷರ ಸಿಂಗಲ್ಸ್ ವಿಭಾಗದ ಶಟ್ಲರ್ ಪರುಪಲ್ಲಿ ಕಶ್ಯಪ್ ಅವರು ಆಮ್ಸ್ಟರ್ಡ್ಯಾಮ್ ನಲ್ಲಿ ಪಾಸ್ಪೋರ್ಟ್ ಕಳೆದುಕೊಂಡಿದ್ದು, ಸಂಕಷ್ಟಕ್ಕೆ ಸಿಲುಕಿದ್ದಾರೆ.

Published On :
ಭಾರತದ ಪುರುಷರ ಸಿಂಗಲ್ಸ್ ವಿಭಾಗದ ಶಟ್ಲರ್ ಪರುಪಲ್ಲಿ ಕಶ್ಯಪ್ ಅವರು ಆಮ್ಸ್ಟರ್ಡ್ಯಾಮ್ ನಲ್ಲಿ ಪಾಸ್ಪೋರ್ಟ್ ಕಳೆದುಕೊಂಡಿದ್ದು, ಸಂಕಷ್ಟಕ್ಕೆ ಸಿಲುಕಿದ್ದಾರೆ.
ಡೆನ್ಮಾರ್ಕ್ ಓಪನ್ ಗಾಗಿ ಒಡೆನ್ಸ್ ಗೆ ತೆರಳುತ್ತಿದ್ದ ಪರುಪಲ್ಲಿ ಕಶ್ಯಪ್ ಆಮ್ಸ್ಟರ್ಡ್ಯಾಮ್ ನಲ್ಲಿ ಪಾಸ್ಪೋರ್ಟ್ ಕಳೆದುಕೊಂಡಿದ್ದು, ಸಹಾಯಕ್ಕಾಗಿ ವಿದೇಶಾಂಗ ಇಲಾಖೆ ಸಚಿವೆ ಸುಷ್ಮಾ ಸ್ವರಾಜ್ ಮೊರೆ ಹೋಗಿದ್ದಾರೆ. ಪಾಸ್ಪೋರ್ಟ್ ಕಳೆದುಕೊಂಡಿರುವುದರಿಂದ ಆಮ್ಸ್ಟರ್ಡ್ಯಾಮ್ ವಿಮಾನದಲ್ಲೇ ಸ್ಥಗಿತಗೊಂಡಿರುವ ಕಶ್ಯಪ್ ಡೆನ್ಮಾರ್ಕ್ ಓಪನ್ ಗಾಗಿ ಭಾನುವಾರ ಒಡೆನ್ಸ್ ಗೆ ತೆರಳಬೇಕಿತ್ತು. ಟ್ವಿಟರ್ ನಲ್ಲಿ ತಮ್ಮ ಪರಿಸ್ಥಿತಿಯನ್ನು ವಿವರಿಸಿರುವ ಕ್ರೀಡಾಪಾಟು, ತಮ್ಮ ಪೋಸ್ಟ್ ನಲ್ಲಿ ಪ್ರಧಾನಿ ಮೋದಿ, ಕ್ರೀಡಾ ಸಚಿವ ರಾಜ್ಯವರ್ಧನ್ ಸಿಂಗ್ ರಾಥೋಡ್ ಅವರನ್ನು ಟ್ಯಾಗ್ ಮಾಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


