ಕ್ರೀಡೆ

ಮಲೇಷಿಯಾ ಓಪನ್: ಮೊದಲ ಸುತ್ತಿನಲ್ಲೇ ಸೈನಾಗೆ ಸೋಲು, ಎರಡನೇ ಸುತ್ತಿಗೆ ಸಿಂಧು, ಶ್ರೀಕಾಂತ್

ಭಾರತದ ಬ್ಯಾಡ್ಮಿಂಟನ್ ತಾರೆ ಸೈನಾ ನೆಹ್ವಾಲ್ ಮಲೇಶಿಯಾ ಓಪನ್ ಪಂದ್ಯಾವಳಿಯ ಮೊದಲ ಸುತ್ತಿನಲ್ಲೇ ಸೋಲು ಅನುಭವಿಸಿ ಹಿಂದೆ ಸರಿಸಿದ್ದಾರೆ.

ಮಲೇಷಿಯಾ ಓಪನ್: ಮೊದಲ ಸುತ್ತಿನಲ್ಲೇ ಸೈನಾಗೆ ಸೋಲು, ಎರಡನೇ ಸುತ್ತಿಗೆ ಸಿಂಧು, ಶ್ರೀಕಾಂತ್
ಸೈನಾ ನೆಹ್ವಾಲ್
Published On :
ಕೌಲಾಲಾಂಪುರ್: ಭಾರತದ ಬ್ಯಾಡ್ಮಿಂಟನ್ ತಾರೆ ಸೈನಾ ನೆಹ್ವಾಲ್ ಮಲೇಶಿಯಾ ಓಪನ್ ಪಂದ್ಯಾವಳಿಯ ಮೊದಲ ಸುತ್ತಿನಲ್ಲೇ ಸೋಲು ಅನುಭವಿಸಿ ಹಿಂದೆ ಸರಿಸಿದ್ದಾರೆ.
ಥಾಯ್ ಲ್ಯಾಂಡಿನ ಪೋರ್ನ್ಪ್ವಿ ಚೋಚುವೋಂಗ್ ಅವರ ವಿರುದ್ಧ  22-20, 15-21, 10-21 ಸೆಟ್ ಗಳಿಂದ ಸೈನಾ ಸೋಲು ಕಂಡರು.
ಇನ್ನು ಇದೇ ಪಂದ್ಯಾವಳಿಯಲ್ಲಿ ಭಾರತದ ಪಿವಿ ಸಿಂಧು ಹಾಗೂ ಕಿಡಂಬಿ ಶ್ರೀಕಾಂತ್ ತಮ್ಮ ಆರಂಭಿಕ ಸುತ್ತಿನಲ್ಲಿ ಜಯ ಗಳಿಸಿ ಮುಂದಿನ ಸುತ್ತು ಪ್ರವೇಶಿಸಿದ್ದಾರೆ. 
ಒಲಂಪಿಕ್ ಬೆಳ್ಳಿ ಪದಕ ವಿಜೇತೆಯಾದ ಸಿಂಧು ತನ್ನ ಎದುರಾಳಿ ವಿಶ್ವ 20ನೇ ಶ್ರೇಯಾಂಕಿತ ಜಪಾನ್ ನ ಅಯಾ ಒಹೋರಿ ವಿರುದ್ಧ  22-20, 21-12 ಸೆಟ್ ಗಳಿಂದ ಜಯ ಗಳಿಸಿದರು.
ಪುರುಷರ ವಿಭಾಗದಲ್ಲಿ ಭಾರತದ ಕಿಡಂಬಿ ಶ್ರೀಕಾಂತ್ ಇಂಡೋನೇಷಿಯಾದ ಇಹ್ಸಾನ್ ಮೌಲಾನಾ ಮುಸ್ತಫಾ ವಿರುದ್ಧ 21-18, 21-16. ಸೆಟ್ ನಿಂದ ಜಯ ಗಳಿಸಿ ಎರಡನೇ ಸುತ್ತು ಪ್ರವೇಶಿಸಿದ್ದಾರೆ.
ಭಾರತದ ಎಚ್.ಎಸ್. ಪ್ರಣಯ್ ಥಾಯ್ ಲ್ಯಾಂಡಿನ  ಸಿಥಿಕೊನ್ ಥಮಸ್ಸಿನ್ ವಿರುದ್ಧ ಕಠಿಣ ಹೋರಾಟ ನಡೆಸಿ ಸೋಲನುಭವಿಸಿದರೆ ಭಾರತದ ಪುರುಷರ ಡಬಲ್ಸ್ ಜೋಡಿ ಮನು ಆಟ್ರಿ ಮತ್ತು ಬಿ ಸುಮೀತ್ ರೆಡ್ಡಿ  ಸಹ ಪಂದ್ಯಾವಳಿಯ ಮೊದಲ ಸುತ್ತಿನಲ್ಲೇ ಸೋತು ನಿರ್ಗಮಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.