ಏಷ್ಯನ್ ಬಾಕ್ಸಿಂಗ್ ಪಂದ್ಯಾವಳಿ: ಅಮಿತ್ ಪಂಗಲ್ ಗೆ ಸ್ವರ್ಣ ಪದಕ
ಇಲ್ಲಿ ನಡೆಯುತ್ತಿರುವ ಏಷ್ಯನ್ ಬಾಕ್ಸಿಂಗ್ ಚಾಂಪಿಯನ್ ಶಿಪ್ ನಲ್ಲಿ ಬಾರತೀಯ ಬಾಕ್ಸರ್ ಅಮಿತ್ ಪಂಗಲ್ ಪುರುಷರ 52 ಕೆಜಿ ವಿಭಾಗದಲ್ಲಿ ಚಿನ್ನದ ಪದಕ ಗಳಿಸಿಕೊಂಡಿದ್ದಾರೆ.

Published On :
ಬ್ಯಾಂಕಾಕ್: ಇಲ್ಲಿ ನಡೆಯುತ್ತಿರುವ ಏಷ್ಯನ್ ಬಾಕ್ಸಿಂಗ್ ಚಾಂಪಿಯನ್ ಶಿಪ್ ನಲ್ಲಿ ಬಾರತೀಯ ಬಾಕ್ಸರ್ ಅಮಿತ್ ಪಂಗಲ್ ಪುರುಷರ 52 ಕೆಜಿ ವಿಭಾಗದಲ್ಲಿ ಚಿನ್ನದ ಪದಕ ಗಳಿಸಿಕೊಂಡಿದ್ದಾರೆ.
ಕಳೆದ ವರ್ಷ ಏಷ್ಯನ್ ಗೇಮ್ಸ್ ನಲ್ಲಿ ಚಿನ್ನದ ಪದಕ ಗಳಿಸಿದ್ದ ಪಂಗಲ್ ಕೊರಿಯಾದ ಕಿಮ್ ಇನ್ಕ್ಯೂ ಕೊರುಇಯಾ ಅವರನ್ನು ಸೋಲಿಸಿ ಈ ಸಾಧನೆ ಮಾಡಿದ್ದಾರೆ. ಇದಕ್ಕೆ ಮುನ್ನ ಕಳೆದ ಫೆಬ್ರವರಿಯಲ್ಲಿ ಸ್ಟ್ರಾಂಡ್ಜಾ ಮೆಮೋರಿಯಲ್ ಪಂದ್ಯಾವಳಿಯಲ್ಲಿ ಸಹ ಚಿನ್ನದ ಸಾಧನೆ ಮಾಡಿದ್ದರು.
ಇದು ಪಂಗಲ್ 49 ಕೆಜಿ ನಿಂದ 52 ಕೆಜಿಗೆ ಭಡ್ತಿ ಪಡೆದ ನಂತರ ನಡೆದ ಮುಖ್ಯ ಕ್ರೀಡಾಕುಟವಾಗಿದ್ದು ಇದರಲ್ಲೇ ಅವರು ಬಂಗಾರದ ಸಾಧನೆ ಮಾಡಿ ದೇಶಕ್ಕೆ ಹೆಮ್ಮೆಯ ಗರಿ ಮೂಡಿಸಿದ್ದಾರೆ.
ಇದಲ್ಲದೆ 49 ಕೆ.ಜಿ ವಿಭಾಗದಲ್ಲಿ ರಾಷ್ಟ್ರೀಯ ಚಾಂಪಿಯನ್ ಆಗಿರುವ ದೀಪಕ್ ಸಿಂಗ್ ಉಜ್ಬೇಕಿಸ್ತಾನ್ ಸ್ಪರ್ಧಿ ಎದುರಿಗೆ ಸೋತು ಬೆಳ್ಳಿ ಪದಕಕ್ಕೆ ತೃಪ್ತಿಪಟ್ಟುಕೊಂಡರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


