ದಕ್ಷಿಣ ಏಷ್ಯನ್ ಕ್ರೀಡಾಕೂಟ: ಭಾರತದ ಖಾತೆಗೆ 214 ಪದಕಗಳು
ಆರನೇ ದಿನವೂ ಪಾರಮ್ಯ ಸಾಧಿಸಿದ ಭಾರತದ ಕ್ರೀಡಾಪಟುಗಳು ಇಲ್ಲಿ ನಡೆಯುತ್ತಿರುವ 13ನೇ ದಕ್ಷಿಣ ಏಷ್ಯನ್ ಕ್ರೀಡಾಕೂಟದ ಪದಕಗಳ ಸಂಖ್ಯೆಯನ್ನು 200ರ ಗಡಿ ದಾಟಿಸಿದ್ದಾರೆ.

ಕಠ್ಮಂಡು: ಆರನೇ ದಿನವೂ ಪಾರಮ್ಯ ಸಾಧಿಸಿದ ಭಾರತದ ಕ್ರೀಡಾಪಟುಗಳು ಇಲ್ಲಿ ನಡೆಯುತ್ತಿರುವ 13ನೇ ದಕ್ಷಿಣ ಏಷ್ಯನ್ ಕ್ರೀಡಾಕೂಟದ ಪದಕಗಳ ಸಂಖ್ಯೆಯನ್ನು 200ರ ಗಡಿ ದಾಟಿಸಿದ್ದಾರೆ. ಪದಕ ಪಟ್ಟಿಯಲ್ಲಿ ಭಾರತ ಅಗ್ರ ಸ್ಥಾನವನ್ನು ಇನ್ನಷ್ಟು ಗಟ್ಟಿಮಾಡಿಕೊಂಡಿದೆ.
ಶನಿವಾರ ಭಾರತ 29 ಚಿನ್ನದ ಪದಕಗಳು ಸೇರಿದಂತೆ ಒಟ್ಟು 49 ಪದಕಗಳನ್ನು ಮುಡಿಗೇರಿಸಿಕೊಂಡಿತು. ಆರನೇ ದಿನದ ಮುಕ್ತಾಯಕ್ಕೆ ಭಾರತ 214 ಪದಕಗಳನ್ನು ತನ್ನ ಖಾತೆಗೆ ಸೇರಿಸಿಕೊಂಡಿದೆ. ಇದರಲ್ಲಿ 110 ಚಿನ್ನ, 69 ಬೆಳ್ಳಿ ಹಾಗೂ 35 ಕಂಚಿನ ಪದಕಗಳು ಒಳಗೊಂಡಿವೆ. ಎರಡನೇ ಸ್ಥಾನದಲ್ಲಿರುವ ನೇಪಾಳ 142 ಪದಕಗಳನ್ನು ತನ್ನ ಖಾತೆಗೆ ಸೇರಿಸಿದೆ. ಇದರಲ್ಲಿ 43 ಚಿನ್ನ, 34 ಬೆಳ್ಳಿ ಹಾಗೂ 65 ಕಂಚಿನ ಪದಕಗಳು ಇವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


