ಕ್ರೀಡೆ

2026 ಅಥವಾ 2030ರ ಕಾಮನ್‌ವೆಲ್ತ್‌ ಆತಿಥ್ಯಕ್ಕೆ ಬಿಡ್ ಸಲ್ಲಿಕೆಗೆ ಭಾರತ ನಿರ್ಧಾರ

ಮುಂದಿನ 2026 ಅಥವಾ 2030ರ ಆವೃತ್ತಿಯ ಕಾಮನ್ ವೆಲ್ತ್ ಕ್ರೀಡಾಕೂಟದ ಆತಿಥ್ಯ ವಹಿಸಲು ಬಿಡ್ ಸಲ್ಲಿಸಲಾಗುವುದು ಹಾಗೂ 2022ರಲ್ಲಿ ಬರ್ಮಿಂಗ್ ಹ್ಯಾಮ್ ನಲ್ಲಿ ನಡೆಯುವ ಕಾಮನ್ ವೆಲ್ತ್ ಕ್ರೀಡಾಕೂಟದಲ್ಲಿ ಭಾರತ ಭಾಗವಹಿಸಲಿದೆ ಎಂದು ಭಾರತೀಯ ಒಲಿಂಪಿಕ್ಸ್ ಅಸೋಸಿಯೇಷನ್ ತಿಳಿಸಿದೆ.

2026 ಅಥವಾ 2030ರ ಕಾಮನ್‌ವೆಲ್ತ್‌ ಆತಿಥ್ಯಕ್ಕೆ ಬಿಡ್ ಸಲ್ಲಿಕೆಗೆ ಭಾರತ ನಿರ್ಧಾರ
ಕಾಮನ್ ವೆಲ್ತ್ ಕ್ರೀಡಾಕೂಟ
Published On :

ನವದೆಹಲಿ: ಮುಂದಿನ 2026 ಅಥವಾ 2030ರ ಆವೃತ್ತಿಯ ಕಾಮನ್ ವೆಲ್ತ್ ಕ್ರೀಡಾಕೂಟದ ಆತಿಥ್ಯ ವಹಿಸಲು ಬಿಡ್ ಸಲ್ಲಿಸಲಾಗುವುದು ಹಾಗೂ 2022ರಲ್ಲಿ ಬರ್ಮಿಂಗ್ ಹ್ಯಾಮ್ ನಲ್ಲಿ ನಡೆಯುವ ಕಾಮನ್ ವೆಲ್ತ್ ಕ್ರೀಡಾಕೂಟದಲ್ಲಿ ಭಾರತ ಭಾಗವಹಿಸಲಿದೆ ಎಂದು ಭಾರತೀಯ ಒಲಿಂಪಿಕ್ಸ್ ಅಸೋಸಿಯೇಷನ್ ತಿಳಿಸಿದೆ.

ಸೋಮವಾರ ನಡೆದ ವಾರ್ಷಿಕ ಸಾಮಾನ್ಯ ಸಭೆಯಲ್ಲಿ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ. ಇದೇ ವೇಳೆ ಭಾರತ ರಾಷ್ಟ್ರೀಯ ರೈಫಲ್ ಅಸೋಸಿಯೇಷನ್ ಮನವಿ ಮೇರೆಗೆ 2022ರ ಕಾಮನ್ ವೆಲ್ತ್ ಕ್ರೀಡಾಕೂಟದಲ್ಲಿ ಶೂಟಿಂಗ್ ಭಾರತ ತಂಡ ಭಾಗವಹಿಸದ ಕಾರಣ ಪ್ರತ್ಯೇಕವಾಗಿ ಕಾಮನ್ ವೆಲ್ತ್ ಕ್ರೀಡಾಕೂಟ ನಡೆಸಲು ನಿರ್ಧರಿಸಲಾಗಿದೆ.

ನವದೆಹಲಿಯ ಒಲಿಂಪಿಕ್ ಭವನದಲ್ಲಿ ಇಂದು ಒಲಿಂಪಿಕ್ಸ್ ಅಸೋಸಿಯೇಷನ್ ನ ವಾರ್ಷಿಕ ಸಾಮಾನ್ಯ ಸಭೆ ಹಮ್ಮಿಕೊಳ್ಳಲಾಗಿತ್ತು. ಆಡಳಿತ ವಿಷಯಗಳು ಹಾಗೂ ಬರ್ಮಿಂಗ್ ಹ್ಯಾಮ್ ಕಾಮನ್ ವೆಲ್ತ್ ಕ್ರೀಡಾಕೂಟದಲ್ಲಿ ಭಾಗವಹಿಸುವ ವಿಚಾರದ ಬಗ್ಗೆಯೂ ಸುದೀರ್ಘ ಚರ್ಚೆ ನಡೆಸಲಾಯಿತು ಎಂದು ಐಒಎ ಟ್ವೀಟ್ ಮಾಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.