ಕ್ರೀಡೆ

ಶೂಟಿಂಗ್ ವಿಶ್ವಕಪ್: ಚಿನ್ನ ಗೆದ್ದು ವಿಶ್ವದಾಖಲೆ ನಿರ್ಮಿಸಿದ 16 ವರ್ಷದ ಸೌರಬ್

ಐಎಸ್ ಎಸ್ ಎಫ್ ವಿಶ್ವಕಪ್ ಟೂರ್ನಿಯಲ್ಲಿ ಭಾರತದ ಯುವ ಆಟಗಾರ ಸೌರಬ್ ಚೌದರಿ ಚಿನ್ನದ ಪದಕ ಗೆಲ್ಲುವ ಮೂಲಕ ವಿಶ್ವ ದಾಖಲೆ ನಿರ್ಮಿಸಿದ್ದಾರೆ.

ಶೂಟಿಂಗ್ ವಿಶ್ವಕಪ್:  ಚಿನ್ನ ಗೆದ್ದು ವಿಶ್ವದಾಖಲೆ ನಿರ್ಮಿಸಿದ 16 ವರ್ಷದ ಸೌರಬ್
ಸೌರಬ್ ಚೌದರಿ
Published On :

ನವದೆಹಲಿ: ಐಎಸ್ ಎಸ್ ಎಫ್ ವಿಶ್ವಕಪ್ ಟೂರ್ನಿಯಲ್ಲಿ ಭಾರತದ ಯುವ ಆಟಗಾರ ಸೌರಬ್ ಚೌದರಿ  ಚಿನ್ನದ ಪದಕ ಗೆಲ್ಲುವ ಮೂಲಕ ವಿಶ್ವ ದಾಖಲೆ ನಿರ್ಮಿಸಿದ್ದಾರೆ.

16 ವರ್ಷದ ಸೌರಬ್ ಚೌದರಿ, 10 ಮೀಟರ್ ಏರ್ ಪಿಸ್ತೂಲ್ ಪುರುಷರ ವಿಭಾಗದಲ್ಲಿ  ಒಟ್ಟಾರೇ 245 ಅಂಕಗಳೊಂದಿಗೆ ಚಿನ್ನದ ಪದಕಕ್ಕೆ ಮುತ್ತಿಟ್ಟರು.

ಸೆರ್ಬಿಯಾದ ಡಾಮಿ ಮೈಕೆಕ್  239. 3 ಅಂಕಗಳೊಂದಿಗೆ ದ್ವಿತೀಯ ಸ್ಥಾನ ಪಡೆದು ಬೆಳ್ಳಿಯ ಪದಕ ಪಡೆದರೆ,  ಚೀನಾದ ವೈ ಪಾಂಗ್ 215.2 ಅಂಕಗಳೊಂದಿಗೆ ತೃತೀಯ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡು  ಕಂಚಿನ ಪದಕ ಪಡೆದುಕೊಂಡಿದ್ದಾರೆ.

ಬೆಳ್ಳಿ ಪದಕ ವಿಜೇತ ಡಾಮಿ ಮೈಕೆಕ್ ಅವರ ವಿರುದ್ಧ ಪ್ರಾಬಲ್ಯ ಸಾಧಿಸಿದ ಸೌರಬ್ 5.7 ಅಂಕಗಳೊಂದಿಗೆ ಪಂದ್ಯ ಮುಕ್ತಾಯಗೊಳಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.