ಇಂಡೋನೇಷಿಯಾ ಮಾಸ್ಟರ್ಸ್: ಸೆಮಿಫೈನಲ್ ಪ್ರವೇಶಿಸಿದ ಸೈನಾ ನೆಹ್ವಾಲ್
ಭಾರತದ ಅನುಭವಿ ಆಟಗಾರ್ತಿ ಸೈನಾ ನೆಹ್ವಾಲ್ ಇಂಡೋನೇಷಿಯಾ ಮಾಸ್ಟರ್ಸ್ ಬ್ಯಾಡ್ಮಿಂಟನ್ ಪಂದ್ಯಾವಳಿಯ ಮಹಿಳಾ ಸಿಂಗಲ್ಸ್ ವಿಭಾಗದಲ್ಲಿ ಅಂತಿಮ ನಾಲ್ಕರ ಹಂತಕ್ಕೆ ಪ್ರವೇಶಿಸಿದ್ದಾರೆ.

Published On :
ಜಕಾರ್ತಾ: ಭಾರತದ ಅನುಭವಿ ಆಟಗಾರ್ತಿ ಸೈನಾ ನೆಹ್ವಾಲ್ ಇಂಡೋನೇಷಿಯಾ ಮಾಸ್ಟರ್ಸ್ ಬ್ಯಾಡ್ಮಿಂಟನ್ ಪಂದ್ಯಾವಳಿಯ ಮಹಿಳಾ ಸಿಂಗಲ್ಸ್ ವಿಭಾಗದಲ್ಲಿ ಅಂತಿಮ ನಾಲ್ಕರ ಹಂತಕ್ಕೆ ಪ್ರವೇಶಿಸಿದ್ದಾರೆ.
ಶುಕ್ರವಾರ ನಡೆದ ಪಂದ್ಯದಲ್ಲಿ ಸೈನಾ ಥೈಲ್ಯಾಂಡಿನ ಪೊರ್ನಾಪಾಯಿ ಚೋಚುವಾಂಗ್ ವಿರುದ್ಧ 21-7, 21-18 ಸೆಟ್ ಗಳಿಂದ ಗೆಲುವು ಸಾಧಿಸಿ ಸೆಮಿಫೈನಲ್ ಸುತ್ತಿಗೇರಿದ್ದಾರೆ.
ಪರುಪ್ಪಳ್ಳಿ ಕಶ್ಯಪ್ ಅವರನ್ನು ವಿವಾಹವಾಗಿದ್ದ ಸೈನಾ ಮತ್ತೆ ಬ್ಯಾಡ್ಮಿಂಟನ್ ಲೋಕದಲ್ಲಿ ತಮ್ಮ ಪ್ರಾಬಲ್ಯ ಮುಂದುವರಿಸಿದ್ದಾರೆ.
ಇನ್ನೊಂದೆಡೆ ಇದೇ ಪಂದ್ಯಾವಳಿಯ ಕ್ವಾರ್ಟರ್ ಫೈನಲ್ ಪ್ರವೇಶಿಸಿರುವ ಭಾರತದ ಕಿಡಂಬಿ ಶ್ರೀಕಾಂತ್ ಮತ್ತು ಪಿವಿ ಸಿಂಧೂ ಸಹ ಮುಂದಿನ ಸುತ್ತಿನ ಪಂದ್ಯಗಳಲ್ಲಿ ಉತ್ತಮ ಪ್ರದರ್ಶನ ನೀಡುವ ವಿಶ್ವಾಸ ಹೊಂದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Badmintonಬ್ಯಾಡ್ಮಿಂಟನ್Saina Nehwalಸೈನಾ ನೆಹ್ವಾಲ್Semifinalsಸೆಮಿಫೈನಲ್ಸ್Indonesia Mastersಇಂಡೋನೇಷಿಯಾ ಮಾಸ್ಟರ್ಸ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


