ವಿಂಬಲ್ಡನ್ ಫೈನಲ್: ಗ್ರ್ಯಾನ್ ಸ್ಲ್ಯಾಮ್ ಪ್ರಶಸ್ತಿಗಾಗಿ ಫೆಡರರ್ - ಜೊಕೊವಿಚ್ ಹಣಾಹಣಿ
ವಿಶ್ವದ ನಂಬರ್ 1 ಆಟಗಾರ ಸರ್ಬಿಯಾದ ನೋವಾಕ್ ಜೊಕೊವಿಚ್ ಅವರು ವರ್ಷದ ಮೂರನೇ ಗ್ರ್ಯಾನ್ ಸ್ಲ್ಯಾಮ್ ವಿಂಬಲ್ಡನ್ ಟೆನಿಸ್ ಟೂರ್ನಿಯ..

Published On :
ಲಂಡನ್: ವಿಶ್ವದ ನಂಬರ್ 1 ಆಟಗಾರ ಸರ್ಬಿಯಾದ ನೋವಾಕ್ ಜೊಕೊವಿಚ್ ಅವರು ವರ್ಷದ ಮೂರನೇ ಗ್ರ್ಯಾನ್ ಸ್ಲ್ಯಾಮ್ ವಿಂಬಲ್ಡನ್ ಟೆನಿಸ್ ಟೂರ್ನಿಯ ಫೈನಲ್ ಪ್ರವೇಶಿಸಿದ್ದಾರೆ. ಈ ಮೂಲಕ ಆರನೇ ಬಾರಿ ವಿಂಬಲ್ಡನ್ ಟೂರ್ನಿಯ ಫೈನಲ್ ಗೆ ಅರ್ಹತೆ ಪಡೆದಿದ್ದಾರೆ.
ಶುಕ್ರವಾರ ನಡೆದ ಪುರುಷರ ಸಿಂಗಲ್ಸ್ ಸೆಮಿಫೈನಲ್ಸ್ ಪಂದ್ಯದಲ್ಲಿ ಜೊಕೊವಿಚ್ ಅವರು 6-2, 4-6, 6-3, 6-2 ರಿಂದ 23ನೇ ಶ್ರೇಯಾಂಕದ ಆಟಗಾರ ಸ್ಪೇನ್ನ ರಾಬರ್ಟ್ ಬೌಟಿಸ್ಟಾ ಅಗುಟ್ ಅವರನ್ನು ಮಣಿಸಿ ಪ್ರಶಸ್ತಿ ಸುತ್ತು ಪ್ರವೇಶಿಸಿದರು.
ಮತ್ತೊಂದು ಸೆಮಿಫೈನಲ್ ಮುಖಾಮುಖಿಯಲ್ಲಿ ಎಂಟು ಬಾರಿಯ ಚಾಂಪಿಯನ್ ಸ್ವಿಜರ್ಲೆಂಡ್ನ ರೋಜರ್ ಫೆಡರರ್ ಫೈನಲ್ಗೆ ಪ್ರವೇಶಿಸಿದ್ದಾರೆ.
ಪುರುಷ ಸಿಂಗಲ್ಸ್ ವಿಭಾಗದಲ್ಲಿ ನಡೆದ ಜಿದ್ದಾಜಿದ್ದಿನ ಸೆಮಿಫೈನಲ್ ಪಂದ್ಯದಲ್ಲಿ ವಿಶ್ವ ನಂ.3 ರ್ಯಾಂಕ್ನ ಫೆಡರರ್, ತಮ್ಮ ಬದ್ಧ ವೈರಿ ವಿಶ್ವ ನಂ.2 ರ್ಯಾಂಕ್ನ ಸ್ಪೇನ್ನ ರಾಫೆಲ್ ನಡಾಲ್ ವಿರುದ್ಧ 7-6 (7-3), 1-6, 6-3, 6-4ರ ಅಂತರದ ಗೆಲುವು ದಾಖಲಿಸಿ ಪ್ರಶಸ್ತಿ ಸುತ್ತಿಗೆ ಲಗ್ಗೆಯಿಟ್ಟರು.
37ರ ಹರೆಯದ ಫೆಡರರ್ ಅವರು 21ನೇ ಗ್ರ್ಯಾನ್ಸ್ಲಾಮ್ ಪ್ರಶಸ್ತಿಗಾಗಿ ಅಗ್ರ ಶ್ರೇಯಾಂಕಿತ ಸೆರ್ಬಿಯಾದ ನೊವಾಕ್ ಜೊಕೊವಿಕ್ ವಿರುದ್ಧ ಹೋರಾಡಲಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Novak Djokovicನೊವಾಕ್ ಜೊಕೊವಿಚ್Roberto Bautista AgutWimbledon finalವಿಂಬಲ್ಡನ್ ಫೈನಲ್ರಾಬರ್ಟ್ ಬೌಟಿಸ್ಟಾ ಅಗುಟ್
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


