ಕಾಮನ್ವೆಲ್ತ್ ಟಿಟಿ ಚಾಂಪಿಯನ್ಶಿಪ್: ಪುರುಷ, ಮಹಿಳಾ ವಿಭಾಗದಲ್ಲಿ ಭಾರತಕ್ಕೆ ಚಿನ್ನ!
ಆತಿಥೇಯ ಭಾರತದಲ್ಲಿ ನಡೆಯುತ್ತಿರುವ ಕಾಮನ್ವೆಲ್ತ್ ಟಿಟಿ ಚಾಂಪಿಯನ್ ಶಿಪ್ ನಲ್ಲಿ ಪುರುಷ ಮತ್ತು ಮಹಿಳಾ ವಿಭಾಗದಲ್ಲಿ ಭಾರತ ಚಿನ್ನಕ್ಕೆ ಮುತ್ತಿಟ್ಟಿದೆ.

Published On :
ಕಟಕ್: ಆತಿಥೇಯ ಭಾರತದಲ್ಲಿ ನಡೆಯುತ್ತಿರುವ ಕಾಮನ್ವೆಲ್ತ್ ಟಿಟಿ ಚಾಂಪಿಯನ್ ಶಿಪ್ ನಲ್ಲಿ ಪುರುಷ ಮತ್ತು ಮಹಿಳಾ ವಿಭಾಗದಲ್ಲಿ ಭಾರತ ಚಿನ್ನಕ್ಕೆ ಮುತ್ತಿಟ್ಟಿದೆ.
ಜವಾಹರ್ ಲಾಲ್ ನೆಹರೂ ಒಳಾಗಂಣ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಚಾಂಪಿಯನ್ ಶಿಪ್ ನಲ್ಲಿ ಪುರುಷರ ತಂಡ ಇಂಗ್ಲೆಂಡ್ ವಿರುದ್ಧ 3-2 ಅಂತರದಿಂದ ಗೆಲುವು ಸಾಧಿಸಿ ಚಿನ್ನ ಗೆದ್ದರು.
ಇಂಗ್ಲೆಂಡ್ ವಿರುದ್ಧ ಫೈನಲ್ ನಲ್ಲಿ ಜ್ಞಾನಶೇಖರನ್ ಸತಿಯಾನ್, ಹರ್ಮಿತ್ ದೇಸಾಯಿ, ಮತ್ತು ಶರತ್ ಕಮಲ್ ದಾಖಲೆ ಜಯ ಗಳಿಸಿ ಗೆಲುವು ಸಾಧಿಸಿದರು.
ಕಾಮನ್ವೆಲ್ತ್ ಟೆಬಲ್ ಟೆನಿಸ್ ಚಾಂಪಿಯನ್ ಶಿಪ್ ನಲ್ಲಿ ಮಹಿಳಾ ವಿಭಾಗದಲ್ಲಿ ಕನ್ನಡತಿ ಅರ್ಚನಾ ಕಾಮತ್, ಮನಿಕಾ ಬಟ್ರಾ ಮತ್ತು ಮಾಧುರಿಕ ಪಾಟ್ಕರ್ ತಂಡ ಫೈನಲ್ ನಲ್ಲಿ ಇಂಗ್ಲೆಂಡ್ ತಂಡವನ್ನು ಮಣಿಸಿ ಚಿನ್ನಕ್ಕೆ ಮುತ್ತಿಟ್ಟಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


