ಪ್ರೊ ಕಬಡ್ಡಿ ಲೀಗ್: ಯು ಮುಂಬಾ, ಬುಲ್ಸ್ ಗೆ ಭರ್ಜರಿ ಜಯ
ಇಲ್ಲಿ ನಡೆಯುತ್ತಿರುವ ಪ್ರೊ ಕಬಡ್ಡಿ ಲಿಗ್ ಮೊದಲ ಪಂದ್ಯದಲ್ಲಿ ಮಾಜಿ ಚಾಂಪಿಯನ್ ಯು ಮುಂಬಾ ಹಾಗೂ ಹಾಲಿ ಚಾಂಪಿಯನ್ ಬೆಂಗಳೂರು ಬುಲ್ಸ್ ತಂಡಗಳು ಶುಭಾರಂಭ ಮಾಡಿವೆ.

Published On :
ಹೈದರಾಬಾದ್: ಇಲ್ಲಿ ನಡೆಯುತ್ತಿರುವ ಪ್ರೊ ಕಬಡ್ಡಿ ಲಿಗ್ ಮೊದಲ ಪಂದ್ಯದಲ್ಲಿ ಮಾಜಿ ಚಾಂಪಿಯನ್ ಯು ಮುಂಬಾ ಹಾಗೂ ಹಾಲಿ ಚಾಂಪಿಯನ್ ಬೆಂಗಳೂರು ಬುಲ್ಸ್ ತಂಡಗಳು ಶುಭಾರಂಭ ಮಾಡಿವೆ.
ಶನಿವಾರ ನಡೆದ ಪಂದ್ಯದಲ್ಲಿ ಭರ್ಜರಿ ರಕ್ಷಣಾತ್ಮಕ ಆಟದ ಪ್ರದರ್ಶನ ನೀಡಿದ ಮುಂಬಾ ತಂಡ 31-25 ರಿಂದ ತೆಲುಗು ಟೈಟಾನ್ಸ್ ತಂಡವನ್ನು ಮಣಿಸಿತು. ಸ್ಟಾರ್ ಆಟಗಾರ ಸಿದ್ಧಾರ್ಥ್ ದೇಸಾಯಿ ಅವರನ್ನು ಕಟ್ಟಿ ಹಾಕುವಲ್ಲಿ ಮುಂಬಾ ಸಫಲವಾಯಿತು. ಇದೇ ಮೊದಲ ಬಾರಿಗೆ ರಾಹುಲ್ ಚೌಧರಿ, ತೆಲುಗು ತಂಡದ ಪರ ಆಡುತ್ತಿಲ್ಲ. ಇವರ ಬದಲಿಗೆ ಸಿದ್ಧಾರ್ಥ್ ದೇಸಾಯಿ ಅವರು ತಂಡ ಸೇರಿಕೊಂಡಿದ್ದಾರೆ. ಇವರನ್ನು ಮಾಲೀಕರು 1.45 ಕೋಟಿ ನೀಡಿ ತಂಡಕ್ಕೆ ಸೇರಿಸಿಕೊಂಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


