ಜಪಾನ್ ಓಪನ್: ಶ್ರೀಕಾಂತ್, ಸಮೀರ್ ವರ್ಮಾ ಔಟ್, ಸಿಂಧೂ, ಪ್ರಣಯ್ ಗೆ ಮುನ್ನಡೆ
ಭಾರತದ ಅಗ್ರ ಕ್ರಮಾಂಕದ ಬ್ಯಾಡ್ಮಿಂಟನ್ ಆಟಗಾರ ಕಿಡಂಬಿ ಶ್ರೀಕಾಂತ್ ಅವರ 2019ರ ವೈಫಲ್ಯ ಮುಂದುವರಿದಿದ್ದು, ಇಲ್ಲಿ ನಡೆಯುತ್ತಿರುವ ಜಪಾನ್ ಓಪನ್ ಮೊದಲ ಸುತ್ತಿನಲ್ಲಿಯೇ....

Published On :
ಟೋಕಿಯೋ: ಭಾರತದ ಅಗ್ರ ಕ್ರಮಾಂಕದ ಬ್ಯಾಡ್ಮಿಂಟನ್ ಆಟಗಾರ ಕಿಡಂಬಿ ಶ್ರೀಕಾಂತ್ ಅವರ 2019ರ ವೈಫಲ್ಯ ಮುಂದುವರಿದಿದ್ದು, ಇಲ್ಲಿ ನಡೆಯುತ್ತಿರುವ ಜಪಾನ್ ಓಪನ್ ಮೊದಲ ಸುತ್ತಿನಲ್ಲಿಯೇ ಭಾರತದ ಮತ್ತೊಬ್ಬ ಆಟಗಾರ ಎಚ್.ಎಸ್ ಪ್ರಣಯ್ ವಿರುದ್ಧ ಸೋಲು ಅನುಭವಿಸಿದರು.
55 ನಿಮಿಷಗಳ ಕಾಲ ನಡೆದ ಪುರುಷರ ಸಿಂಗಲ್ಸ್ ಪಂದ್ಯದಲ್ಲಿ ಎಚ್.ಎಸ್ ಪ್ರಣಯ್ ಅವರು ಮೊದಲ ಸೆಟ್‌ನಲ್ಲಿ ಸೋಲು ಅನುಭವಿಸಿದರೂ ಬಳಿಕ ಪುಟಿದೆದ್ದು 13-21, 21-11, 22-20 ಅಂತರದಲ್ಲಿ ಕಿಡಂಬಿ ಶ್ರೀಕಾಂತ್ ವಿರುದ್ಧ ಗೆದ್ದು ಎರಡನೇ ಸುತ್ತಿಗೆ ಪ್ರವೇಶ ಮಾಡಿದರು.
ಎಂಟನೇ ಶ್ರೇಯಾಂಕದ ಶ್ರೀಕಾಂತ್ ಅವರು ಅಂದುಕೊಂಡಂತೆ ಮೊದಲನೇ ಸೆಟ್‌ನಲ್ಲಿ 21-13 ಅಂತರದಲ್ಲಿ ಎಚ್.ಎಸ್ ಪ್ರಣಯ್ ಅವರನ್ನು ಮಣಿಸಿದರು. ನಂತರ, ಎರಡನೇ ಸೆಟ್ ಹಾಗೂ ಮೂರನೇ ಸೆಟ್‌ನಲ್ಲಿ ಎಚ್ಚೆತ್ತುಕೊಂಡ ಪ್ರಣಯ್ 21-11, 22-20 ಅಂತರದಲ್ಲಿ ಪಂದ್ಯವನ್ನು ತನ್ನದಾಗಿಸಿಕೊಂಡರು.
ಮತ್ತೊಂದು ಪುರುಷರ ಸಿಂಗಲ್ಸ್ ಪಂದ್ಯದಲ್ಲಿ ಡೆನ್ಮಾರ್ಕ್‌ನ ಆಂಡರ್ಸ್ ಆಂಟನ್‌ಸೆನ್ ಹಾಗೂ ಭಾರತದ ಸಮೀರ್ ವರ್ಮಾ ಎದುರಾಗಿದ್ದು ಇಲ್ಲಿಯೂ ಭಾರತೀಯ ಆಟಗಾರರು ನಿರಾಶೆ ಮೂಡಿಸಿದ್ದಾರೆ. 46 ನಿಮಿಷಗಳ ಕಾಲ ನಡೆದ ಪಂದ್ಯದಲ್ಲಿ ಸಮೀರ್ ವರ್ಮಾ 17-21 12-21 ಸೆಟ್ ಗಳಿಂದ ಸೋಲುಂಡರು.
ಮಿಶ್ರ ಡಬಲ್ಸ್ ನಲ್ಲಿ ಸಹ ಪ್ರಣವ್ ಜೆರ್ರಿ ಚೋಪ್ರಾ ಮತ್ತು ಸಿಕ್ಕಿ ರೆಡ್ಡಿ ಜೋಡಿ ಚೀನಾದ ಜೋಡಿ ಎದುರಿಗೆ 11-21, 14-21 ಸೆಟ್ ಗಳಿಂದ ಸೋತಿದೆ.
ಸಿಂಧೂ ಶುಭಾರಂಭ
ಬುಧವಾರ ನಡೆದ ಮಹಿಳೆಯರ ಸಿಂಗಲ್ಸ್ ಪಂದ್ಯದಲ್ಲಿ ಸಿಂಧು 21-9, 21-17 ರಿಂದ ಚೀನಾದ ಹನ್ ಯು ವಿರುದ್ಧ 37 ನಿಮಿಷಗಳ ಕಾದಾಟದಲ್ಲಿ ಜಯ ಸಾಧಿಸಿ, ಎರಡನೇ ಸುತ್ತು ಪ್ರವೇಶಿಸಿದರು. ಈ ಮೂಲಕ ಹನ್ ಯು ವಿರುದ್ಧ ಸಿಂಧು ತಮ್ಮ ಅಜೇಯ ಓಟವನ್ನು ಮುಂದುವರೆಸಿದ್ದಾರೆ.
ಮೊದಲ ಗೇಮ್ ನಲ್ಲಿ ಆರಂಭದಿಂದಲೂ ಅಂಕದ ಬೇಟೆಯಲ್ಲಿ ಮುನ್ನಡೆ ಸಾಧಿಸಿದ್ದ ಸಿಂಧು ಅವರು, ಹಿಂದೆ ಬೀಳಲಿಲ್ಲ. ಭರ್ಜರಿ ಪ್ರದರ್ಶನ ನೀಡಿದ ಸಿಂಧು, ಅಂಕಗಳಿಸಿ ಮುಂದೆ ಸಾಗಿದರು. ಎರಡನೇ ಗೇಮ್ ನಲ್ಲಿ ಸಿಂಧು ಅವರಿಗೆ ಕೊಂಚ ಪ್ರತಿರೋಧ ಒಡ್ಡಿದ ಹನ್ ಯು ಅವರು, ಗೆಲುವಿನ ಭರವಸೆ ಮೂಡಿಸಿದ್ದರು. ಆದರೆ, ತಾಳ್ಮೆ ಕಳೆದುಕೊಳ್ಳದೆ ಆಡಿದ ಸಿಂಧು ಅರ್ಹ ಗೆಲುವು ದಾಖಲಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಬ್ರೇಕಿಂಗ್ ನ್ಯೂಸ್
ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಹೆಚ್ಚಿದ ಒತ್ತಡ: ಮುಖ್ಯ ಚುನಾವಣಾ ಆಯುಕ್ತರನ್ನ ವಜಾ ಮಾಡೊದು ಅಷ್ಟು ಸುಲಭನಾ? ಯಾರಿಗಿದೆ ಆ ಪವರ್? ಸಂವಿಧಾನ ಹೇಳುವುದೇನು?ರಾಹುಕಾಲ ಎಂದರೇನು? ಮದುವೆಗೆ ಅನ್ವಯಿಸುತ್ತದೆಯೇ? ರಾಹು ಶಾಂತಿಗಾಗಿ ನಿಂಬೆ ಹಣ್ಣು ದೀಪ ಹಚ್ಚುವುದು ಸೂಕ್ತವೇ?ಗೌರಿಬಿದನೂರಿನ ಮಣ್ಣಲ್ಲಿ ಅರಳಿದ ಮರುಭೂಮಿ ಹಣ್ಣು: ಅಸಾಧ್ಯವನ್ನು ಸಾಧ್ಯವಾಗಿಸಿದ ಹಠವಾದಿ; ಸ್ವಾವಲಂಬಿ ಕೃಷಿಗೆ ಹೊಸ ಭಾಷ್ಯ ಬರೆದ ದಿವಾಕರ್ ಚನ್ನಪ್ಪ..!ಕರ್ನಾಟಕದ ನಂ.1 ಶ್ರೀಮಂತ ಯಾರು ಗೊತ್ತಾ? ಅಂಬಾನಿ, ಅದಾನಿ ಬಿಡಿ; ಇಲ್ಲಿದೆ ನಮ್ಮ ಕರುನಾಡ ಸಿರಿವಂತರ ಟಾಪ್ ಲಿಸ್ಟ್!ಫ್ಯಾಟ್ ನಿಂದ ಫಿಟ್ ವರೆಗೆ: ಸಾಹೇಬಲಾಲ್ ಛಪ್ಪರ್ಬಂದ್ ಸ್ಫೂರ್ತಿದಾಯಕ ಪಯಣವಿದೇಶಿ ಪ್ರವಾಸದ ಪ್ಲ್ಯಾನ್ ಇದೆಯೇ? ಒಂದು ಸಣ್ಣ ತಪ್ಪು ಭಾರೀ ದಂಡಕ್ಕೆ ಕಾರಣವಾಗಬಹುದು; ಪ್ರವಾಸಿಗರು ತಿಳಿದಿರಲೇಬೇಕಾದ ನಿಯಮಗಳಿವು...!ಮನಸ್ಸಿದ್ದರೆ ಮಾರ್ಗ ಎಂಬುದನ್ನು ರುಜುವಾತು ಮಾಡಿದ ಛಲವಾದಿ; 27 ವರ್ಷಗಳ ಹೋರಾಟದಲ್ಲಿ 26 ಬಾರಿ ಸೋತು 59ನೇ ವಯಸ್ಸಿನಲ್ಲಿ ಸರ್ಕಾರಿ ಶಿಕ್ಷಕರಾದ ವಿಜಯ್ಪಶ್ಚಿಮ ಘಟ್ಟಗಳ ESA - ಕಸ್ತೂರಿರಂಗನ್ ವರದಿ ಇನ್ನೂ ಏಕೆ ಜಾರಿಗೆ ಬಂದಿಲ್ಲ?


