ಕ್ರೀಡೆ

ಚೀನಾ ಓಪನ್: ಸೆಮೀಸ್ ಸೋತ ಸಾತ್ವಿಕ್- ಚಿರಾಗ್ ಜೋಡಿ, ಬಾರತದ ಅಭಿಯಾನ ಅಂತ್ಯ

ಚೀನಾ ಓಪನ್ ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಭರ್ಜರಿ ಪ್ರದರ್ಶನ ನೀಡಿದ್ದ ಭಾರತದ ಸಾತ್ವಿಕ್ ಸಿರಾಜ್ ರಂಕಿ ರೆಡ್ಡಿ ಹಾಗೂ ಚಿರಾಗ್ ಶೆಟ್ಟಿ ಅವರು ಪುರುಷರ ಡಬಲ್ಸ್ ಸೆಮಿಫೈನಲ್ಸ್ ನಲ್ಲಿ ನಿರಾಸೆ ಅನುಭವಿಸಿದ್ದಾರೆ.

ಚೀನಾ ಓಪನ್: ಸೆಮೀಸ್ ಸೋತ ಸಾತ್ವಿಕ್- ಚಿರಾಗ್ ಜೋಡಿ, ಬಾರತದ ಅಭಿಯಾನ ಅಂತ್ಯ
ಚೀನಾ ಓಪನ್: ಸೆಮೀಸ್ ಸೋತ ಸಾತ್ವಿಕ್- ಚಿರಾಗ್ ಜೋಡಿ
Published On :

ನವದೆಹಲಿ:  ಚೀನಾ ಓಪನ್ ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಭರ್ಜರಿ ಪ್ರದರ್ಶನ ನೀಡಿದ್ದ ಭಾರತದ ಸಾತ್ವಿಕ್ ಸಿರಾಜ್ ರಂಕಿ ರೆಡ್ಡಿ ಹಾಗೂ ಚಿರಾಗ್ ಶೆಟ್ಟಿ ಅವರು ಪುರುಷರ ಡಬಲ್ಸ್ ಸೆಮಿಫೈನಲ್ಸ್ ನಲ್ಲಿ ನಿರಾಸೆ ಅನುಭವಿಸಿದ್ದಾರೆ.

ಶನಿವಾರ ನಡೆದ ಪುರುಷರ ಡಬಲ್ಸ್ ಪಂದ್ಯದಲ್ಲಿ ಭಾರತೀಯ ಜೋಡಿ 16-21, 20-22 ರಿಂದ ಇಂಡೋನೇಷ್ಯಾದ ಮಾರ್ಕಸ್ ಫೆರ್ನಾಲ್ಡಿ ಗಿಡಿಯಾನ್ ಮತ್ತು ಕೆವಿನ್ ಸಂಜಯ ಸುಕಮುಲ್ಜೊ ಜೋಡಿಯ ವಿರುದ್ಧ ಸೋಲು ಕಂಡರು. ಈ ಮೂಲಕ ಟೂರ್ನಿಯಲ್ಲಿ ಭಾರತದ ಅಭಿಯಾನ ಅಂತ್ಯವಾಗಿದೆ. 

ಇದಕ್ಕೆ ಮುನ್ನ ಕ್ವಾರ್ಟರ್ ಫೈನಲ್ಸ್ ನಲ್ಲಿ ಈ ಜೋಡಿ ಚೀನಾದ ಲಿ ಜುನ್ ಹುಯಿ ಮತ್ತು ಲೀ ಯು ಚೆನ್ ಜೋಡಿಯ ವಿರುದ್ದ ಗೆದ್ದು ಅಂತಿಮ ನಾಲ್ಕರ ಘಟ್ಟ ಪ್ರವೇಶಿಸಿದ್ದರು. 
 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.