ಹಾಂಕಾಂಗ್ ಓಪನ್: ಸೆಮಿಫೈನಲ್‌ಗೆ ಕಿಡಂಬಿ ಶ್ರೀಕಾಂತ್
ಗೆಲುವಿನ ಲಯ ಮುಂದುವರಿಸಿರುವ ಭಾರತದ ಅಗ್ರ ಕ್ರಮಾಂಕದ ಬ್ಯಾಡ್ಮಿಂಟನ್ ಆಟಗಾರ ಕಿಡಂಬಿ ಶ್ರೀಕಾಂತ್ ಅವರು ಇಲ್ಲಿ ನಡೆಯುತ್ತಿರುವ ಹಾಂಕಾಂಗ್ ಓಪನ್ ಟೂರ್ನಿಯ ಪುರುಷರ ಸಿಂಗಲ್ಸ್ ನಲ್ಲಿ ಸೆಮಿಫೈನಲ್ಸ್ ತಲುಪಿದ್ದಾರೆ.

ಹಾಂಕಾಂಗ್: ಗೆಲುವಿನ ಲಯ ಮುಂದುವರಿಸಿರುವ ಭಾರತದ ಅಗ್ರ ಕ್ರಮಾಂಕದ ಬ್ಯಾಡ್ಮಿಂಟನ್ ಆಟಗಾರ ಕಿಡಂಬಿ ಶ್ರೀಕಾಂತ್ ಅವರು ಇಲ್ಲಿ ನಡೆಯುತ್ತಿರುವ ಹಾಂಕಾಂಗ್ ಓಪನ್ ಟೂರ್ನಿಯ ಪುರುಷರ ಸಿಂಗಲ್ಸ್ ನಲ್ಲಿ ಸೆಮಿಫೈನಲ್ಸ್ ತಲುಪಿದ್ದಾರೆ.
ಶುಕ್ರವಾರ ನಡೆದ ಪುರುಷರ ಸಿಂಗಲ್ಸ್ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಅತ್ಯುತ್ತಮ ಪ್ರದರ್ಶನ ತೋರಿದ ಕಿಡಂಬಿ ಶ್ರೀಕಾಂತ್ ಮೊದಲನೇ ಸೆಟ್‌ನಲ್ಲಿ 21-13 ಅಂತರದಲ್ಲಿ ಚೀನಾದ ಚೆನ್ ಲಾಂಗ್ ವಿರುದ್ಧ ಜಯ ಸಾಧಿಸಿದ್ದರು. ಈ ವೇಳೆ ಚೀನಾ ಆಟಗಾರ ಗಾಯದಿಂದಾಗಿ ಪಂದ್ಯವನ್ನು ವಿಥ್‌ಡ್ರಾ ಮಾಡಿಕೊಂಡರು ಇದರ ಲಾಭ ಪಡೆದ ಕಿಡಂಬಿ ಅಂತಿಮ ನಾಲ್ಕರ ಘಟ್ಟಕ್ಕೆೆ ಲಗ್ಗೆ ಇಟ್ಟಿದ್ದಾರೆ.
ಪ್ರಸ್ತುತ ನಡೆಯುತ್ತಿರುವ ಹಾಂಕಾಂಗ್ ಓಪನ್ ಟೂರ್ನಿಯಲ್ಲಿ ಕಿಡಂಬಿ ಶ್ರೀಕಾಂತ್ ಅವರಿಗೆ ಅದೃಷ್ಟ ಚೆನ್ನಾಗಿದೆ. ಟೂರ್ನಿಯ ಮೊದಲನೇ ಸುತ್ತಿನಲ್ಲೇ ವಿಶ್ವದ ಅಗ್ರ ಶ್ರೇಯಾಂಕಿತ ಕೆಂಟೊ ಮೊಮೊಟಾ ಅವರ ವಿರುದ್ಧ ಸೆಣಸಬೇಕಾಗಿತ್ತು. ಆದರೆ, ಅವರು ಅನಿರೀಕ್ಷಿತವಾಗಿ ಹಾಂಕಾಂಗ್ ವಿಥ್‌ಡ್ರಾ ಮಾಡಿಕೊಂಡಿದ್ದರು. ಇದರ ಲಾಭ ಪಡೆದ ಶ್ರೀಕಾಂತ್ ಎರಡನೇ ಸುತ್ತಿಗೆ ಪ್ರವೇಶ ಮಾಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


