ಕ್ರೀಡೆ

ಭಾರತದ ಶೂಟರ್‌ಗಳ ಪರಾಕ್ರಮ; ಮೂವರು ಶೂಟರ್‌ಗಳಿಗೆ ದಿ ಗೋಲ್ಡನ್ ಟಾರ್ಗೆಟ್ ಪ್ರಶಸ್ತಿ

ಪ್ರಸಕ್ತ ವರ್ಷದಲ್ಲಿ ವಿಶ್ವ ದರ್ಜೆಯಲ್ಲಿ ಭಾರತದ ಶೂಟರ್ ಗಳು ಅತ್ಯುತ್ತಮ ಪ್ರದರ್ಶನ ತೋರಿದ್ದಾರೆಂಬ ಬಗ್ಗೆ ಯಾವುದೇ ಅನುಮಾನವಿಲ್ಲ. ಮೂವರು ಭಾರತೀಯ ಶೂಟರ್‍ಗಳು ವರ್ಷಾಂತ್ಯದಲ್ಲಿ ಬಿಡುಗಡೆಯಾಗಿರುವ ವಿಶ್ವ ಶ್ರೇಯಾಂಕದಲ್ಲಿ ಅಗ್ರ ಸ್ಥಾನ ಪಡೆಯುವ ಮೂಲಕ ಇಂಟರ್ ನ್ಯಾಷನಲ್ ಶೂಟಿಂಗ್ ಫೆಡರೇಷನ್ ನೀಡುವ 'ದಿ ಗೋಲ್ಡನ್ ಟಾರ್ಗೆಟ್' ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಭಾರತದ ಶೂಟರ್‌ಗಳ ಪರಾಕ್ರಮ; ಮೂವರು ಶೂಟರ್‌ಗಳಿಗೆ ದಿ ಗೋಲ್ಡನ್ ಟಾರ್ಗೆಟ್ ಪ್ರಶಸ್ತಿ
ಎಲವೆನಿಲ್-ದಿವ್ಯಾಂಶು
Published On :

ಪುಣೆ: ಪ್ರಸಕ್ತ ವರ್ಷದಲ್ಲಿ ವಿಶ್ವ ದರ್ಜೆಯಲ್ಲಿ ಭಾರತದ ಶೂಟರ್ ಗಳು ಅತ್ಯುತ್ತಮ ಪ್ರದರ್ಶನ ತೋರಿದ್ದಾರೆಂಬ ಬಗ್ಗೆ ಯಾವುದೇ ಅನುಮಾನವಿಲ್ಲ. ಮೂವರು ಭಾರತೀಯ ಶೂಟರ್‍ಗಳು ವರ್ಷಾಂತ್ಯದಲ್ಲಿ ಬಿಡುಗಡೆಯಾಗಿರುವ ವಿಶ್ವ ಶ್ರೇಯಾಂಕದಲ್ಲಿ ಅಗ್ರ ಸ್ಥಾನ ಪಡೆಯುವ ಮೂಲಕ ಇಂಟರ್ ನ್ಯಾಷನಲ್ ಶೂಟಿಂಗ್ ಫೆಡರೇಷನ್ ನೀಡುವ 'ದಿ ಗೋಲ್ಡನ್ ಟಾರ್ಗೆಟ್' ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಇಂದಿನ ವರ್ಷದಿಂದಲೇ ಐಎಸ್‍ಎಸ್‍ಎಫ್ ಅಗ್ರ ಶ್ರೇಯಾಂಕ ಪಡೆದ ಅಥ್ಲಿಟ್‍ಗಳಿಗೆ 'ದಿ ಗೋಲ್ಡನ್ ಟಾರ್ಗೆಟ್' ಪ್ರಶಸ್ತಿ ನೀಡಲು ಮುಂದಾಗಿದೆ. ಶೂಟಿಂಗ್ 12 ವಿಭಾಗಗಳಲ್ಲಿ ಅಗ್ರ ಸ್ಥಾನ ಪಡೆದವರಿಗೆ ಡಿಸೆಂಬರ್ 7 ರಂದು ಮುನಿಚ್ ನಲ್ಲಿ ಈ ಪ್ರಶಸ್ತಿ ನೀಡಲಾಗುತ್ತಿದೆ.

ಭಾರತದ ದಿವ್ಯಾಂಶ್ ಸಿಂಗ್ ಪನ್ವಾರ್ ಹಾಗೂ ಎಲವೆನಿಲ್ ವಲರಿವನ್ ಅವರು ಕ್ರಮವಾಗಿ ಪುರುಷ ಹಾಗೂ ಮಹಿಳೆಯರ 10ಮೀ. ರೈಫಲ್ ವಿಭಾಗದಲ್ಲಿ ಅಗ್ರ ಸ್ಥಾನ ಪಡೆದುಕೊಂಡಿದ್ದಾರೆ. ಪಿಸ್ತೂಲ್ ಅನುಭವಿ ಸೌರಭ್ ಚೌಧರಿ ವರ್ಷಾಂತ್ಯದಲ್ಲಿ ಏರ್ ಪಿಸ್ತೂಲ್ ವಿಭಾಗದ ಶ್ರೇಯಾಂಕದಲ್ಲಿ ಅಗ್ರ ಸ್ಥಾನದೊಂದಿಗೆ ತಮ್ಮ ಅಭಿಯಾನ ಮುಗಿಸಿದ್ದಾರೆ. ಈ ಮೂವರು ದಿ ಗೋಲ್ಡನ್ ಟಾರ್ಗೆಟ್ ಪ್ರಶಸ್ತಿಗೆ ಭಾಜನರಾಗಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.