ಪ್ರೊ ಕಬಡ್ಡಿ: ಬೆಂಗಳೂರು ಬುಲ್ಸ್ ಪ್ಲೇ ಆಫ್ ಗೆ
ಮಹತ್ವದ ಪಂದ್ಯದಲ್ಲಿ ಭರ್ಜರಿ ಪ್ರದರ್ಶನ ನೀಡಿದ ಬೆಂಗಳೂರು ಬುಲ್ಸ್ ತಂಡದ ಪವನ್ ಶರಾವತ್ ಏಳನೇ ಆವೃತ್ತಿ ಪ್ರೊ ಕಬಡ್ಡಿ ಟೂರ್ನಿಯ 118ನೇ ಪಂದ್ಯದಲ್ಲಿ ಹರಿಯಾಣ ಸ್ಟೀಲರ್ಸ್ ತಂಡವನ್ನು ಮಣಿಸಿತು.

ಪಂಚಕುಲ: ಮಹತ್ವದ ಪಂದ್ಯದಲ್ಲಿ ಭರ್ಜರಿ ಪ್ರದರ್ಶನ ನೀಡಿದ ಬೆಂಗಳೂರು ಬುಲ್ಸ್ ತಂಡದ ಪವನ್ ಶರಾವತ್ ಏಳನೇ ಆವೃತ್ತಿ ಪ್ರೊ ಕಬಡ್ಡಿ ಟೂರ್ನಿಯ 118ನೇ ಪಂದ್ಯದಲ್ಲಿ ಹರಿಯಾಣ ಸ್ಟೀಲರ್ಸ್ ತಂಡವನ್ನು ಮಣಿಸಿತು.
ಬುಧವಾರ ನಡೆದ ಪಂದ್ಯದಲ್ಲಿ ಭರ್ಜರಿ ದಾಳಿಯ ಪ್ರದರ್ಶನ ನೀಡಿದ ಹಾಲಿ ಚಾಂಪಿಯನ್ ಬೆಂಗಳೂರು ಬುಲ್ಸ್, ಸುಲಭ ಜಯ ದಾಖಲಿಸಿತು. ಬುಲ್ಸ್ 59-36 ಅಂಕಗಳಿಂದ ಎದುರಾಳಿ ತಂಡವನ್ನು ಕಟ್ಟಿಹಾಕಿತು. ಪವನ್ 34 ಬಾರಿ ಎದುರಾಳಿ ಕೋರ್ಟ್ ಗೆ ಎಂಟ್ರಿ ನೀಡಿ 39 ಅಂಕಗಳನ್ನು ಕಲೆಹಾಕಿದರು. ರಕ್ಷಣಾ ವಿಭಾಗದಲ್ಲಿ ಬೆಂಗಳೂರು ತಂಡದ ಆಟಗಾರರು ಸಂಘಟಿತ ಪ್ರದರ್ಶನ ನೀಡಿದರು.
ಬೆಂಗಳೂರು ತಂಡ ದಾಳಿಯಲ್ಲಿ ಒಟ್ಟು 39 ಅಂಕಗಳನ್ನು ಕಲೆಹಾಕಿತು ಎಲ್ಲಾ ಅಂಕಗಳು ಪವನ್, ಕಲೆಹಾಕಿದ್ದು ಎನ್ನುವುದು ವಿಶೇಷ. ಟ್ಯಾಕಲ್ ನಲ್ಲಿ ಬುಲ್ಸ್ ಅಂಕವನ್ನು ಕಲೆಹಾಕಿತು. ನಾಲ್ಕು ಬಾರಿ ಹರಿಯಾಣ ತಂಡವನ್ನು ಆಲೌಟ್ ಮಾಡಿದ ಬುಲ್ಸ್ ಅಬ್ಬರಿಸಿತು. 20 ಪಂದ್ಯಗಳಲ್ಲಿ 63 ಅಂಕಗಳನ್ನು ಕಲೆಹಾಕಿದ ಬೆಂಗಳೂರು ತಂಡ ಮುಂದಿನ ಹಂತಕ್ಕೆ ಪ್ರವೇಶ ಪಡೆಯಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


