ಕ್ರೀಡೆ

ತಮ್ಮದೇ ರಾಷ್ಟ್ರೀಯ ದಾಖಲೆ ಮುರಿದ ದ್ಯುತಿ ಚಾಂದ್

ವಿಶ್ವ ಚಾಂಪಿಯನ್ ಶಿಪ್ ನಲ್ಲಿ ನಿರಾಶಾದಾಯಕ ಪ್ರದರ್ಶನ ನೀಡಿರುವ ಸ್ಟಾರ್ ಓಟಗಾರ್ತಿ ದ್ಯುತಿ ಚಾಂದ್ ಅವರು 59ನೇ ರಾಷ್ಟ್ರೀಯ ಓಪನ್ ಅಥ್ಲೇಟಿಕ್ಸ್ ಚಾಂಪಿಯನ್ ಶಿಪ್ ನ 100 ಮೀಟರ್ ಓಟದ ಸ್ಪರ್ಧೆಯಲ್ಲಿ ದಾಖಲೆ ನಿರ್ಮಿಸಿದ್ದಾರೆ.

ತಮ್ಮದೇ ರಾಷ್ಟ್ರೀಯ ದಾಖಲೆ ಮುರಿದ ದ್ಯುತಿ ಚಾಂದ್
ದ್ಯುತಿ ಚಾಂದ್
Published On :

ರಾಂಚಿ: ವಿಶ್ವ ಚಾಂಪಿಯನ್ ಶಿಪ್ ನಲ್ಲಿ ನಿರಾಶಾದಾಯಕ ಪ್ರದರ್ಶನ ನೀಡಿರುವ ಸ್ಟಾರ್ ಓಟಗಾರ್ತಿ ದ್ಯುತಿ ಚಾಂದ್ ಅವರು 59ನೇ ರಾಷ್ಟ್ರೀಯ ಓಪನ್ ಅಥ್ಲೇಟಿಕ್ಸ್ ಚಾಂಪಿಯನ್ ಶಿಪ್ ನ 100 ಮೀಟರ್ ಓಟದ ಸ್ಪರ್ಧೆಯಲ್ಲಿ ದಾಖಲೆ ನಿರ್ಮಿಸಿದ್ದಾರೆ.

ದ್ಯುತಿ ಅವರು ಇದೇ ವರ್ಷ ದೋಹಾದಲ್ಲಿ ನಡೆದಿದ್ದ ಚಾಂಪಿಯನ್ ಶಿಪ್ ನಲ್ಲಿ 100 ಮೀಟರ್ ಸ್ಪರ್ಧೆಯಲ್ಲಿ 11.26 ಸೆಕೆಂಡ್ ಗಳಲ್ಲಿ ಪೂರ್ಣಗೊಳಿಸಿದ್ದರು. ಶುಕ್ರವಾರ ನಡೆದ 100 ಮೀಟರ್ ಸೆಮಿಫೈನಲ್ಸ್ ಸ್ಪರ್ಧೆಯಲ್ಲಿ ದ್ಯುತಿ 11.22 ಸೆ. ಗಳಲ್ಲಿ ಪೂರ್ಣಗೊಳಿಸಿ ಹೊಸ ದಾಖಲೆ ಬರೆದರು.

ದ್ಯುತಿ ಅವರು ಇಲ್ಲಿ ನಡೆದ ಚಾಂಪಿಯನ್ ಶಿಪ್ ನಲ್ಲಿ 11.55 ಸೆ. ಗಳಲ್ಲಿ ಓಡಿದರು. ಸೆಮಿಫೈನಲ್ಸ್ ನಲ್ಲಿ ಓಡಿದಷ್ಟೇ ವೇಗವಾಗಿ ಕತಾರ್ ನಲ್ಲಿಓಡಿದ್ದರೆ, ಚಾಂಪಿಯನ್ ಶಿಪ್ ನ ಸೆಮಿಫೈನಲ್ಸ್ ಗೆ ಪ್ರವೇಶ ಪಡೆಯಬಹುದಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.