ಕ್ರೀಡೆ

ವಿಶ್ವ ಮಹಿಳಾ ಬಾಕ್ಸಿಂಗ್: ಫೈನಲ್ಸ್ ತಲುಪಿ ಬೆಳ್ಳಿ ಪದಕ ಖಚಿತಪಡಿಸಿದ ಮಂಜು ರಾಣಿ

ವಿಶ್ವ ಮಹಿಳೆಯರ ಬಾಕ್ಸಿಂಗ್ ಚಾಂಪಿಯನ್‍ಶಿಪ್‍ನ 48 ಕೆಜಿ ವಿಭಾಗದಲ್ಲಿ ಭಾರತೀಯ ಮಹಿಳಾ ಬಾಸ್ಕರ್ ಮಂಜು ರಾಣಿ ಫೈನಲ್ಸ್ ಪ್ರವೇಶಿಸಿದ್ದಾರೆ. ಈ ಮೂಲಕ ಭಾರತಕ್ಕೆ ಸ್ವರ್ಣ ಅಥವಾ ರಜತ ಪದಕದ ಭರವಸೆಯನ್ನು ಗಟ್ಟಿಗೊಳಿಸಿದ್ದಾರೆ.

ವಿಶ್ವ ಮಹಿಳಾ ಬಾಕ್ಸಿಂಗ್: ಫೈನಲ್ಸ್ ತಲುಪಿ ಬೆಳ್ಳಿ ಪದಕ ಖಚಿತಪಡಿಸಿದ ಮಂಜು ರಾಣಿ
ವಿಶ್ವ ಮಹಿಳಾ ಬಾಕ್ಸಿಂಗ್: ಫೈನಲ್ಸ್ ತಲುಪಿ ಬೆಳ್ಳಿ ಪದಕ ಖಚಿತಪಡಿಸಿದ ಮಂಜು ರಾಣಿ
Published On :

ಉಡಾನ್ ಉಡೆ(ರಷ್ಯಾ): ವಿಶ್ವ ಮಹಿಳೆಯರ  ಬಾಕ್ಸಿಂಗ್ ಚಾಂಪಿಯನ್‍ಶಿಪ್‍ನ 48 ಕೆಜಿ ವಿಭಾಗದಲ್ಲಿ ಭಾರತೀಯ ಮಹಿಳಾ ಬಾಸ್ಕರ್ ಮಂಜು ರಾಣಿ ಫೈನಲ್ಸ್ ಪ್ರವೇಶಿಸಿದ್ದಾರೆ. ಈ ಮೂಲಕ ಭಾರತಕ್ಕೆ ಸ್ವರ್ಣ ಅಥವಾ ರಜತ ಪದಕದ ಭರವಸೆಯನ್ನು ಗಟ್ಟಿಗೊಳಿಸಿದ್ದಾರೆ.

ಆರು ಬಾರಿಯ ವಿಶ್ವ ಚಾಂಪಿಯನ್ ಮೇರಿ ಕೋಮ್ ಈ ಬಾರಿ ಸೆಮಿಫೈನಲ್ಸ್ ನಲ್ಲಿ ಸೋತು ಕಂಚಿನ ಪದಕ ಗಳಿಸಿಕೊಂಡಿದ್ದರೆ ಮಂಜು ರಾಣಿ ಥಾಯ್ ಲ್ಯಾಂಡಿನ ಚುತಮಾತ್ ರಾಕ್ಸತ್ ವಿರುದ್ಧ 4-1 ಅಂತರದಲ್ಲಿ ಗೆಲುವು ಸಾಧಿಸಿ ಅಂತಿಮ ಘಟ್ಟ ಪ್ರವೇಶಿಸಿದ್ದಾರೆ.

ಹರಿಯಾಣ ಮೂಲದ ಮಂಜು ರಾಣಿ ಪ್ರಾರಂಭದಲ್ಲಿ ನಿಧಾನಗತಿ ಆಟವಾಡಿದರೂ ನಂತರದಲ್ಲಿ ಬಲಿಷ್ಟ ಹೊಡೆತಗಳಿಂದ ಎದುರಾಳಿಯನ್ನು ಮಣ್ಣು ಮುಕ್ಕಿಸಿದ್ದಾರೆ. ಅಂತಿಮ ಕ್ಷಣದಲ್ಲಿ ಪಂದ್ಯದ ತೀರ್ಪುಗಾರರು ನಿಡಿರುವ ಅಂಕಗಳು ಮಂಜು ರಾಣಿ ಅವರ ಪರವಾಗಿ ಬಂದವು.

ತನ್ನ ಮೊದಲ ವಿಶ್ವ ಚಾಂಪಿಯನ್ ಶಿಪ್ ನಲ್ಲಿ ಮಂಜು ರಾಣಿ ಭಾನುವಾರ ಫೈನಲ್ಸ್ ಪಂದ್ಯವನ್ನಾಡಲಿದ್ದು ಅಲ್ಲಿ ಆಕೆ ರಷ್ಯಾದ ಎರಡನೇ ಶ್ರೇಯಾಂಕಿತೆ ಎಕಟೆರಿನಾ ಪಾಲ್ಟ್ಸೆವಾ ಅವರನ್ನು ಎದುರಿಸಲಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.