ಫಿಫಾ ವಿಶ್ವಕಪ್ ಅರ್ಹತಾ ಪಂದ್ಯ: ಭಾರತ- ಬಾಂಗ್ಲಾ ಪಂದ್ಯದ ಟಿಕೆಟ್ ಸೋಲ್ಡ್ ಔಟ್
ಭಾರತ ಹಾಗೂ ಬಾಂಗ್ಲಾದೇಶ ನಡುವಿನ ಫಿಫಾ ವಿಶ್ವಕಪ್ ಅರ್ಹತಾ ಪಂದ್ಯ ನಾಳೆ ಇಲ್ಲಿನ ವಿವೇಕಾನಂದ ಯುವ ಭಾರತಿ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಒಂದು ದಿನದ ಮುಂಚಿತವಾಗಿಯೇ ಪಂದ್ಯದ ಟಿಕೆಟ್‌ಗಳು ಸಂಪೂರ್ಣವಾಗಿ ಮಾರಾಟವಾಗಿವೆ.

ಕೊಲ್ಕತಾ: ಭಾರತ ಹಾಗೂ ಬಾಂಗ್ಲಾದೇಶ ನಡುವಿನ ಫಿಫಾ ವಿಶ್ವಕಪ್ ಅರ್ಹತಾ ಪಂದ್ಯ ನಾಳೆ ಇಲ್ಲಿನ ವಿವೇಕಾನಂದ ಯುವ ಭಾರತಿ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಒಂದು ದಿನದ ಮುಂಚಿತವಾಗಿಯೇ ಪಂದ್ಯದ ಟಿಕೆಟ್‌ಗಳು ಸಂಪೂರ್ಣವಾಗಿ ಮಾರಾಟವಾಗಿವೆ.
2011ರ ಬಳಿಕ ಇದೇ ಮೊದಲ ಬಾರಿ ಕೊಲ್ಕತಾ ನಗರದಲ್ಲಿ ಅಂತಾರಾಷ್ಟ್ರೀಯ ಪಂದ್ಯ ನಡೆಯುತ್ತಿರು ವುದರಿಂದ ಫುಟ್ಬಾಲ್ ಅಭಿಮಾನಿಗಳ ಪಾಲಿಗೆ ನಾಳೆ ಹಬ್ಬದ ವಾತಾವರಣ ಸೃಷ್ಟಿಯಾಗಲಿದೆ.
2011ರಲ್ಲಿ ಭಾರತ ತಂಡ 3-2 ಅಂತರದಲ್ಲಿ ಮಲೇಷ್ಯಾ ತಂಡವನ್ನು ಸೌಹಾರ್ಧಯುತ ಪಂದ್ಯದಲ್ಲಿ ಮಣಿಸಿತ್ತು. ವಿವೇಕಾನಂದ ಕ್ರೀಡಾಂಗಣದಲ್ಲಿ 65,000 ಮಂದಿ ಪಂದ್ಯ ವೀಕ್ಷಿಸಬಹುದು. ಒಂದು ದಿನ ಮುಂಚಿತವಾಗಿಯೇ ಎಲ್ಲ ಟಿಕೆಟ್‌ಗಳು ಬಿಕರಿಯಾಗಿವೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಭಾರತ ತಂಡದ ಮುಖ್ಯ ಕೋಚ್ ಸ್ಟಿಮ್ಯಾಕ್ ಇಗೋರ್, ಫಿಫಾ ವಿಶ್ವಕಪ್ ಅರ್ಹತಾ ಸುತ್ತಿನ ‘ಇ’ ಗುಂಪಿನಲ್ಲಿರುವ ಬಾಂಗ್ಲಾದೇಶದ ವಿರುದ್ಧ ಭಾರತ ಫೇವರಿಟ್ ಎಂಬುದನ್ನು ನಾನು ಒಪ್ಪಿಕೊಳ್ಳುವುದಿಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


