ಮಧ್ಯಪ್ರದೇಶ ಕಾರು ಅಪಘಾತ: ನಾಲ್ವರು ರಾಷ್ಟ್ರಮಟ್ಟದ ಹಾಕಿ ಆಟಗಾರರ ದುರ್ಮರಣ
ಮಧ್ಯಪ್ರದೇಶದ ಹೊಶಾಂಗಬಾದ್ ನಲ್ಲಿ ನಡೆದ ಭೀಕರ ಅಪಘಾತದಲ್ಲಿ ನಾಲ್ವರು ರಾಷ್ಟ್ರೀಯ ಹಾಕಿ ಆಟಗಾರರು ಮೃತಪಟ್ಟ ಘಟನೆ ಸೋಮವಾರ ಬೆಳಿಗ್ಗೆ ನಡೆದಿದೆ.

ಹೊಶಾಂಗಬಾದ್: ಮಧ್ಯಪ್ರದೇಶದ ಹೊಶಾಂಗಬಾದ್ ನಲ್ಲಿ ನಡೆದ ಭೀಕರ ಅಪಘಾತದಲ್ಲಿ ನಾಲ್ವರು ರಾಷ್ಟ್ರೀಯ ಹಾಕಿ ಆಟಗಾರರು ಮೃತಪಟ್ಟ ಘಟನೆ ಸೋಮವಾರ ಬೆಳಿಗ್ಗೆ ನಡೆದಿದೆ.
ಕಾರಿನಲ್ಲಿದ್ದ ಮೂವರು ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಇದುವರೆಗೆ ಮೃತಪಟ್ಟ ಆಟಗಾರರ ಬಗ್ಗೆ ಯಾವುದೇ ಮಾಹಿತಿ ದೊರೆತಿಲ್ಲ.
ಈ ಆಟಗಾರರು ಇತರಾಸಿಯಿಂದ ಹೊಶಂಗಾಬಾದ್ ಗೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ಧ್ಯಾನ್ ಚಂದ್ ಟ್ರೋಫಿ ಕೂಟದಲ್ಲಿ ಆಡಲು ತೆರಳುತ್ತಿದ್ದಾಗ ರಾಷ್ಟ್ರೀಯ ಹೆದ್ದಾರಿ 69ರ ರೈಸಲಾ ಪುರ್ ದಲ್ಲಿ ಈ ಘಟನೆ ನಡೆದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


