ಮೊದಲ ಸುತ್ತಿನಲ್ಲೇ ನಿರಾಸೆ: ಚೀನಾ ಓಪನ್‌ನಿಂದ ಸೈನಾ ನೆಹ್ವಾಲ್ ಔಟ್
ಭಾರತದ ಸ್ಟಾರ್ ಬ್ಯಾಡ್ಮಿಂಟನ್ ಆಟಗಾರ್ತಿ ಸೈನಾ ನೆಹ್ವಾಲ್ ಅವರು ಬಿಡಬ್ಲ್ಯುಎಫ್ ಚೀನಾ ಓಪನ್ ಟೂರ್ನಿಯ ಮೊದಲನೇ ಸುತ್ತಿನ ಪಂದ್ಯದಲ್ಲಿ ಸೋತು ಟೂರ್ನಿಯಿಂದ ಹೊರ ನಡೆದಿದ್ದಾರೆ.

ನವದೆಹಲಿ: ಭಾರತದ ಸ್ಟಾರ್ ಬ್ಯಾಡ್ಮಿಂಟನ್ ಆಟಗಾರ್ತಿ ಸೈನಾ ನೆಹ್ವಾಲ್ ಅವರು ಬಿಡಬ್ಲ್ಯುಎಫ್ ಚೀನಾ ಓಪನ್ ಟೂರ್ನಿಯ ಮೊದಲನೇ ಸುತ್ತಿನ ಪಂದ್ಯದಲ್ಲಿ ಸೋತು ಟೂರ್ನಿಯಿಂದ ಹೊರ ನಡೆದಿದ್ದಾರೆ.
ಬುಧವಾರ ಬೆಳಗ್ಗೆ ನಡೆದ ಮಹಿಳೆಯರ ಸಿಂಗಲ್ಸ್ ಮೊದಲನೇ ಸುತ್ತಿನ ಪಂದ್ಯದಲ್ಲಿ ಸೈನಾ ನೆಹ್ವಾಲ್ ಅವರು ಥಾಯ್ಲೆಂಡ್ ಬುಸಾನನ್ ಒಂಗ್‌ಬಮ್ರಂಗ್‌ಫಾನ್ ವಿರುದ್ಧ 10-21, 17-21 ಅಂತರದಲ್ಲಿ ಸೋಲು ಅನುಭವಿಸಿದರು.
ಚೀನಾ ಓಪನ್ ಸೂಪರ್ 1000 ಟೂರ್ನಿಯಲ್ಲಿ ಸೈನಾ ಅವರಿಂದ ಉತ್ತಮ ಪ್ರದರ್ಶನ ನಿರೀಕ್ಷೆ ಮಾಡಲಾಗಿತ್ತು. ಆದರೆ ಲಂಡನ್ ಒಲಿಂಪಿಕ್ ಕಂಚಿನ ಪದಕ ವಿಜೇತೆ ಸೈನಾ ವಿರುದ್ಧ ಎದುರಾಳಿ ನಿರಂತರ ಒತ್ತಡವನ್ನು ಹೇರುತ್ತಲೇ ಸಾಗಿದರು. ಪರಿಣಾಮ 44 ನಿಮಿಷಗಳಲ್ಲೇ ಪಂದ್ಯವನ್ನು ವಶಪಡಿಸಿಕೊಂಡರು.
ಇಂಡೇನೇಷ್ಯಾ ಓಪನ್ ಗೆಲ್ಲುವ ಮೂಲಕ ಪ್ರಸಕ್ತ ಸಾಲನ್ನು ಆರಂಭಿಸಿರುವ ಸೈನಾಗೆ ತದಾ ಬಳಿಕ ಶ್ರೇಷ್ಠ ಪ್ರದರ್ಶನವನ್ನು ಮುಂದುವರಿಸಲು ಸಾಧ್ಯವಾಗಲಿಲ್ಲ. ಪ್ರಸ್ತುತ ಭಾರತದ ಹೆಮ್ಮೆಯ ಪಿವಿ ಸಿಂಧೂ ಮೇಲೆ ಹೆಚ್ಚಿನ ನಿರೀಕ್ಷೆಯನ್ನಿಟ್ಟುಕೊಳ್ಳಲಾಗಿದೆ. ಇತ್ತೀಚೆಗಷ್ಟೇ ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್ ಗೆದ್ದು ಭಾರತದ ಕೀರ್ತಿ ಪತಾಕೆ ಹಾರಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


