ವಿಶ್ವಕುಸ್ತಿ: ಅಂತಿಮ ಸುತ್ತಿಗೆ ದೀಪಕ್, ಟೋಕಿಯೋ ಒಲಂಪಿಕ್ಸ್ ಟಿಕೆಟ್ ಗಿಟ್ಟಿಸಿದ ಅತಿಕಿರಿಯ ಭಾರತೀಯ!
ವಿಶ್ವ ಚಾಂಪಿಯನ್‌ಶಿಪ್‌ನ ಫೈನಲ್‌ಗೆ ಪ್ರವೇಶಿಸಿದ ಅತ್ಯಂತ ಕಿರಿಯ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾದ 19 ವರ್ಷದ ದೀಪಕ್ ಪುನಿಯಾ ಇದೀಗ ಟೋಕಿಯೊ 2020 ಒಲಿಂಪಿಕ್ ಕೋಟಾ ಪಡೆದುಕೊಳ್ಳುವ ಮೂಲಕ ಸಾಧನೆ ಮಾಡಿದ್ದಾರೆ.

ನೂರ್-ಸುಲ್ತಾನ್ (ಕಝಕಿಸ್ತಾನ): ವಿಶ್ವ ಚಾಂಪಿಯನ್‌ಶಿಪ್‌ನ ಫೈನಲ್‌ಗೆ ಪ್ರವೇಶಿಸಿದ ಅತ್ಯಂತ ಕಿರಿಯ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾದ 19 ವರ್ಷದ ದೀಪಕ್ ಪುನಿಯಾ ಇದೀಗ ಟೋಕಿಯೊ 2020 ಒಲಿಂಪಿಕ್ ಕೋಟಾ ಪಡೆದುಕೊಳ್ಳುವ ಮೂಲಕ ಸಾಧನೆ ಮಾಡಿದ್ದಾರೆ.
2016 ರಲ್ಲಿ ವಿಶ್ವ ಕೆಡೆಟ್ ಪ್ರಶಸ್ತಿಯನ್ನು ಗೆದ್ದಿರುವ ದೀಪಕ್, ಈ ವಾರ ಟೋಕಿಯೊ ಟಿಕೆಟ್ ಕಾಯ್ದಿರಿಸಿಕೊಂಡ ನಾಲ್ಕನೇ ಭಾರತೀಯ ಆಟಗಾರರಾಗಿದ್ದಾರೆ. ಇದಕ್ಕೆ ಮುನ್ನ ವಿನೇಶ್ ಫೋಗಟ್, ಬಜರಂಗ್ ಪುನಿಯಾ ಮತ್ತು ರವಿ ಕುಮಾರ್ ದಹಿಯಾ ಟೋಕಿಯೋ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ. ಇನ್ನು ಉಳಿದವರು ಕಂಚಿನ ಪದಕ ಗಳಿಸಿದ್ದರೆ ದೀಪಕ್ ಬೆಳ್ಳಿ ಪದಕಕ್ಕೆ ಕೊರಳೊಡ್ಡಲಿದ್ದಾರೆ.
ಚಾಂಪಿಯನ್‌ಶಿಪ್ ಅಂತಿಮ ದಿನಆದ ಶನಿವಾರ ದೀಪಕ್ ಪುರುಷರ 86 ಕೆಜಿ ಫ್ರೀಸ್ಟೈಲ್ ವಿಭಾಗದ ಕ್ವಾರ್ಟರ್-ಫೈನಲ್ ಪಂದ್ಯದಲ್ಲಿ ಜೂನಿಯರ್ ವಿಶ್ವ ಚಾಂಪಿಯನ್ ಕೊಲಂಬಿಯಾದ ಕಾರ್ಲೋಸ್ ಮೆಂಡೆಜ್ ಅವರನ್ನು 7-6ರಿಂದ ಮುನ್ನಡೆಸಿದ ನಂತರ ಈ ಸಾಧನೆ ಮಾಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


