ಭಾರತದ ಫುಟ್ಬಾಲ್ ದಿಗ್ಗಜ ಚುನಿ ಗೋಸ್ವಾಮಿ ನಿಧನ
ಭಾರತ ಫುಟ್ಬಾಲ್ ದಿಗ್ಗಜ ಚುನಿ ಗೋಸ್ವಾಮಿ ಗುರುವಾರ ನಿಧನರಾದರು. ಅವರಿಗೆ 82 ವರ್ಷ ವಯಸ್ಸಾಗಿತ್ತು. ಅವರು ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದರು.

ಕೋಲ್ಕತಾ: ಭಾರತ ಫುಟ್ಬಾಲ್ ದಿಗ್ಗಜ ಚುನಿ ಗೋಸ್ವಾಮಿ ಗುರುವಾರ ನಿಧನರಾದರು. ಅವರಿಗೆ 82 ವರ್ಷ ವಯಸ್ಸಾಗಿತ್ತು. ಅವರು ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದರು.
1962ರ ಏಷ್ಯನ್ ಗೇಮ್ಸ್ ನಲ್ಲಿ ಚಿನ್ನದ ಪದಕ ಪಡೆದ ಭಾರತದ ತಂಡದ ಕ್ಯಾಪ್ಟನ್ ಆಗಿದ್ದ ಇವರು ಪಶ್ಚಿಮ ಬಂಗಾಳದ ಸ್ಥಳೀಯ ಕ್ರಿಕೆಟ್ ಪಂದ್ಯದಲ್ಲೂ ತಮ್ಮ ರಾಜ್ಯವನ್ನು ಪ್ರತಿನಿಧಿಸಿದ್ದರು.
1957 ರಲ್ಲಿ ಅವರು ತಮ್ಮ ಅಂತಾರಾಷ್ಟ್ರೀಯ ಕ್ರೀಡಾಪಯಣ ಆರಂಭಿಸಿದ್ದು ರಾಷ್ಟ್ರ ತಂಡದ ನಾಯಕರಾಗಿದ್ದರು. 1964 ರಲ್ಲಿ ತಮ್ಮ 27 ನೇ ವಯಸ್ಸಿನಲ್ಲಿ ಅಂತಾರಾಷ್ಟ್ರೀಯ ಫುಟ್ಬಾಲ್ ಗೆ ವಿದಾಯ ಹೇಳಿ ತಮ್ಮ ರಾಜ್ಯದಲ್ಲಿ ಕ್ರಿಕೆಟ್ ಪ್ರತಿನಿಧಿಸಿದರು. ಅವರು ಕಳೆದ ಕೆಲವು ದಿನಗಳಿಂದ ಸಕ್ಕರೆ ಕಾಯಿಲೆ, ನರದೌರ್ಬಲ್ಯ ಸೇರಿದಂತೆ ಕೆಲವು ರೋಗಗಳಿಂದ ಬಳಲುತ್ತಿದ್ದರು. ಹೃದಯಾಘಾತದಿಂದ ಗುರುವಾರ ಸಂಜೆ 5 ಗಂಟೆಗೆ ನಿಧನರಾದರು ಎಂದು ಕುಟುಂಬ ಮೂಲಗಳು ತಿಳಿಸಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


