ರಿಷಿ ಕಪೂರ್ ನಿಧನಕ್ಕೆ ಕ್ರೀಡಾ ಪಟುಗಳ ಕಂಬನಿ
ಹಿರಿಯ ನಟ ರಿಷಿ ಕಪೂರ್ ನಿಧನಕ್ಕೆ ಚಿತ್ರರಂಗ ಹಾಗೂ ಗಣ್ಯಾತಿ ಗಣ್ಯರು ಕಂಬನಿ ಮಿಡಿದಿದ್ದಾರೆ. ಭಾರತದ ಖ್ಯಾತನಾಮ ಕ್ರೀಡಾ ಪಟುಗಳು ಸಹ ರಿಷಿ ನಿಧನಕ್ಕೆ ಕಂಬನಿ ಮಿಡಿದಿದ್ದಾರೆ.

ನವದೆಹಲಿ: ಹಿರಿಯ ನಟ ರಿಷಿ ಕಪೂರ್ ನಿಧನಕ್ಕೆ ಚಿತ್ರರಂಗ ಹಾಗೂ ಗಣ್ಯಾತಿ ಗಣ್ಯರು ಕಂಬನಿ ಮಿಡಿದಿದ್ದಾರೆ. ಭಾರತದ ಖ್ಯಾತ
ನಾಮ ಕ್ರೀಡಾ ಪಟುಗಳು ಸಹ ರಿಷಿ ನಿಧನಕ್ಕೆ ಕಂಬನಿ ಮಿಡಿದಿದ್ದಾರೆ.
“ನಿನ್ನೆ ಇರ್ಫಾನ್ ಖಾನ್, ಇಂದು ರಿಷಿ ಕಪೂರ್ ನಿಧನ. ಈ ಸುದ್ದಿ ಕೇಳಲು ತುಂಬ ನೋವಾಗುತ್ತಿದೆ. ರಿಷಿ ಅವರ ಆತ್ಮಕ್ಕೆ ಭಗಂವತ
ಶಾಂತಿ ನೀಡಲಿ, ಕುಟಂಬಕ್ಕೆ ದುಃಖ ಭರಿಸುವ ಶಕ್ತಿ ನೀಡಲಿ” ಎಂದು ಟೀಮ್ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ಟ್ವೀಟ್
ಮಾಡಿದ್ದಾರೆ.
ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ಸಹ ರಿಷಿ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. “ನಾನು ಅವರ ಚಿತ್ರವನ್ನು ನೋಡುತ್ತಲೆ
ಬೆಳೆದಿದ್ದೇನೆ” ಎಂದು ಅವರು ರಿಷಿ ಅವರೊಂದಿಗಿನ ಒಡನಾಟವನ್ನು ನೆನಪಿಸಿಕೊಂಡಿದ್ದಾರೆ.
ಬಾಕ್ಸರ್ ವಿಜೇಂದ್ರ ಸಿಂಗ್, ಮಾಜಿ ಟೆನಿಸ್ ಆಟಗಾರ ಮಹೇಶ್ ಭೂಪತಿ, ಸಾನಿಯಾ ಮಿರ್ಜಾ, ಬ್ಯಾಡ್ಮಿಂಟನ್ ಆಟಗಾರ ಸೈನಾ
ನೆಹ್ವಾಲ್, ಟರ್ಬನೇಟರ್ ಹರ್ಭಜನ್ ಸಿಂಗ್, ಕುಸ್ತಿ ಪಟುಗಳಾದ ಸಾಕ್ಷಿ ಮಲೀಕ್, ಸುಶೀಲ್ ಕುಮಾರ್, ಗೀತಾ ಪೋಗಟ್ ಅವರು
ಸಹ ಸಂತಾಪ ಸೂಚಿಸಿದ್ದಾರೆ.
Very very sad to hear about the passing away of Rishi ji. I grew up watching his movies and he was always very gracious when we met over the years. May his soul Rest in Peace.
My heartfelt condolences to Neetu ji, Ranbir and the whole Kapoor family.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


