ಪ್ರಪಂಚದ ಅತಿ ವೇಗದ ಓಟಗಾರ ಹುಸೇನ್ ಬೋಲ್ಟ್ ಗೆ ಕೊರೋನಾ ಪಾಸಿಟಿವ್
ಜಗತ್ತಿನ ಅತಿ ವೇಗದ ಓಟಗಾರ ಜಮೈಕಾದ ಉಸೇನ್ ಬೋಲ್ಟ್ ಅವರಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ. ಸೋಮವಾರ ಮಧ್ಯಾಹ್ನ ಇನ್‌ಸ್ಟಾಗ್ರಾಮ್‌ನಲ್ಲಿ ವಿಡಿಯೊವೊಂದನ್ನು ಹಂಚಿಕೊಂಡಿದ್ದ ಬೋಲ್ಟ್, ಕೊರೊನಾ ಲಕ್ಷಣಗಳು ಕಾಣಿಸಿಕೊಂಡಿಲ್ಲ.

ಕಿಂಗ್ ಸ್ಟನ್: ಜಗತ್ತಿನ ಅತಿ ವೇಗದ ಓಟಗಾರ ಜಮೈಕಾದ ಉಸೇನ್ ಬೋಲ್ಟ್ ಅವರಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ.
ಸೋಮವಾರ ಮಧ್ಯಾಹ್ನ ಇನ್‌ಸ್ಟಾಗ್ರಾಮ್‌ನಲ್ಲಿ ವಿಡಿಯೊವೊಂದನ್ನು ಹಂಚಿಕೊಂಡಿದ್ದ ಬೋಲ್ಟ್, ಕೊರೊನಾ ಲಕ್ಷಣಗಳು ಕಾಣಿಸಿಕೊಂಡಿಲ್ಲ. ಆದರೂ ಸುರಕ್ಷಿತವಾಗಿರಲು ಸ್ವಯಂ ಕ್ವಾರಂಟೈನ್‌ಗೆ ಒಳಪಟ್ಟಿರುವುದಾಗಿ ಹೇಳಿಕೊಂಡಿದ್ದರು.
ಆದರೆ, ಅವರ ವರದಿ ಪಾಸಿಟಿವ್ ಬಂದಿರುವುದಾಗಿ ಜಮೈಕಾದ ಆರೋಗ್ಯ ಸಚಿವಾಲಯ ಖಚಿತಪಡಿಸಿದೆ. ಶನಿವಾರ 34ನೇ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದ ಬೋಲ್ಟ್, ಮರುದಿನವೇ ಕೊರೊನಾ ಪರೀಕ್ಷೆಗೆ ಒಳಪಟ್ಟಿದ್ದರು.
ಸುರಕ್ಷಿತವಾಗಿರಲು ನಾನು ಸ್ವಯಂ ಕ್ವಾರಂಟೈನ್‌ಗೆ ಒಳಪಟ್ಟಿದ್ದೇನೆ. ‘ಸ್ಟೇ ಸೇಫ್ ಮೈ ಪೀಪಲ್’ ಎಂದು ಇನ್‌ಸ್ಟಾಗ್ರಾಮ್‌ನಲ್ಲಿ ಬರೆದುಕೊಂಡಿದ್ದರು. ಬೋಲ್ಟ್ ಶೀಘ್ರ ಗುಣಮುಖರಾಗಲಿ ಎಂದು ಅಭಿಮಾನಿಗಳು ಹಾರೈಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


