ಸೋಫಿಯಾ ಕೆನಿನ್‌ಗೆ ಚೊಚ್ಚಲ ಆಸ್ಟ್ರೇಲಿಯಾ ಓಪನ್ ಗರಿ
ಪ್ರಸಕ್ತ ವರ್ಷದ ಮೊದಲ ಗ್ರ್ಯಾಂಡ್ ಸ್ಲಾಮ್ ಟೆನಿಸ್ ಟೂರ್ನಿಯಾದ ಆಸ್ಟ್ರೇಲಿಯಾ ಓಪನ್ ಮಹಿಳಾ ಸಿಂಗಲ್ಸ್ ವಿಭಾಗದಲ್ಲಿ ಅಮೆರಿಕದ 21ರ ಯುವ ಪ್ರತಿಭೆ ಸೋಫಿಯಾ ಕೆನಿನ್ ಚೊಚ್ಚಲ ಪ್ರಶಸ್ತಿ ಮುಡಿಗೇರಿಸಿಕೊಂಡಿದ್ದಾರೆ

ಮೆಲ್ಬರ್ನ್ : ಪ್ರಸಕ್ತ ವರ್ಷದ ಮೊದಲ ಗ್ರ್ಯಾಂಡ್ ಸ್ಲಾಮ್ ಟೆನಿಸ್ ಟೂರ್ನಿಯಾದ ಆಸ್ಟ್ರೇಲಿಯಾ ಓಪನ್ ಮಹಿಳಾ ಸಿಂಗಲ್ಸ್ ವಿಭಾಗದಲ್ಲಿ ಅಮೆರಿಕದ 21ರ ಯುವ ಪ್ರತಿಭೆ ಸೋಫಿಯಾ ಕೆನಿನ್ ಚೊಚ್ಚಲ ಪ್ರಶಸ್ತಿ ಮುಡಿಗೇರಿಸಿಕೊಂಡಿದ್ದಾರೆ
ಇಲ್ಲಿನ ರಾಡ್ ಲೇವರ್ ಅರೆನಾದಲ್ಲಿ ಶನಿವಾರ ನಡೆದ ಮಹಿಳಾ ಸಿಂಗಲ್ಸ್ ವಿಭಾಗದ ಫೈನಲ್ ಪಂದ್ಯದಲ್ಲಿ ಅದ್ಭುತ ಪ್ರದರ್ಶನ ತೋರಿದ 14ನೇ ಶ್ರೇಯಾಂಕಿತೆ ಸೋಫಿಯಾ ಎರಡು ಗಂಟೆಗಳ ಕಾಲ ನಡೆದ ದೀರ್ಘ ಕಾಳಗದಲ್ಲಿ ವಿಶ್ವದ ಮಾಜಿ ಅಗ್ರ ಶ್ರೇಯಾಂಕಿತೆ ಗಾರ್ಬಿನಿಯಾ ಮುಗುರುಜ ಅವರನ್ನು 4-6, 6-2, 6-2 ಅಂತರದಲ್ಲಿ ಮಣಿಸಿ ಆಸ್ಟ್ರೇಲಿಯಾ ಓಪನ್ ತನ್ನದಾಗಿಸಿಕೊಂಡರು
ಅಮೆರಿಕದ ಯುವ ಪ್ರತಿಭೆ ಇದಕ್ಕೂ ಮುನ್ನ ಫ್ರೆಂಚ್ ಓಪನ್ ಟೂರ್ನಿಯಲ್ಲಿ ನಾಲ್ಕನೇ ಸುತ್ತು (2019ರಲ್ಲಿ) ಪ್ರವೇಶಿಸಿರುವುದು ಅವರ ಶ್ರೇಷ್ಠ ಪ್ರದರ್ಶನವಾಗಿತ್ತು
ಇದೀಗ ಚೊಚ್ಚಲ ಗ್ರ್ಯಾನ್ ಸ್ಲ್ಯಾಮ್ ಮುಡಿಗೇರಿಸಿಕೊಂಡಿದ್ದಾರೆ. ಸೆಮಿಫೈನಲ್ ಪಂದ್ಯದಲ್ಲಿ ವಿಶ್ವದ ಹಾಲಿ ನಂ.1 ಆಟಗಾರ್ತಿ ಆಷ್ಲೇ ಬಾರ್ಟಿಗೆ ಸೋಲುಣಿಸಿ ಪ್ರಶಸ್ತಿ ಸುತ್ತು ತಲುಪಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


