ಪುಲ್ಲೇಲಾ ಗೋಪಿಚಂದ್ಗೆ ಜೀವಮಾನ ಸಾಧನೆ ಪ್ರಶಸ್ತಿ
ಒಲಿಂಪಿಕ್ ಸಮಿತಿ ತರಬೇತುದಾರರ ಜೀವಮಾನ ಸಾಧನೆ ಪ್ರಶಸ್ತಿಗೆ ಪುರುಷರ ವಿಭಾಗದಲ್ಲಿ ಭಾರತ ಬ್ಯಾಡ್ಮಿಂಟನ್ ತಂಡದ ಮುಖ್ಯ ಕೋಚ್ ಪುಲ್ಲೇಲಾ ಗೋಪಿಚಂದ್ ಅವರು ಭಾಜನರಾಗಿದ್ದಾರೆ. ದೇಶದ ಬ್ಯಾಡ್ಮಿಂಟನ್ ಕ್ರೀಡೆಗೆ ನೀಡಿರುವ ಕೊಡುಗೆಗಾಗಿ ಇವರಿಗೆ ಪುರಸ್ಕಾರ ನೀಡಲಾಗಿದೆ.

ನವದೆಹಲಿ: ಒಲಿಂಪಿಕ್ ಸಮಿತಿ ತರಬೇತುದಾರರ ಜೀವಮಾನ ಸಾಧನೆ ಪ್ರಶಸ್ತಿಗೆ ಪುರುಷರ ವಿಭಾಗದಲ್ಲಿ ಭಾರತ ಬ್ಯಾಡ್ಮಿಂಟನ್ ತಂಡದ ಮುಖ್ಯ ಕೋಚ್ ಪುಲ್ಲೇಲಾ ಗೋಪಿಚಂದ್ ಅವರು ಭಾಜನರಾಗಿದ್ದಾರೆ. ದೇಶದ ಬ್ಯಾಡ್ಮಿಂಟನ್ ಕ್ರೀಡೆಗೆ ನೀಡಿರುವ ಕೊಡುಗೆಗಾಗಿ ಇವರಿಗೆ ಪುರಸ್ಕಾರ ನೀಡಲಾಗಿದೆ.
‘‘2019ರ ಐಒಸಿ ತರಬೇತುದಾರರ ಜೀವಮಾನ ಸಾಧನೆ ಪ್ರಶಸ್ತಿಗಳ ಪುರುಷ ವಿಭಾಗಕ್ಕಾಗಿ ಪುಲ್ಲೇಲಾ ಗೋಪಿಚಂದ್ ಅವರಿಗೆ ಗೌರವಾನ್ವಿತ ಉಲ್ಲೇಖವನ್ನು ನೀಡಲಾಗುತ್ತಿದೆ ಎಂದು ನಿಮಗೆ ತಿಳಿಸಲು ನನಗೆ ಸಂತೋಷವಾಗಿದೆ ಎಂದು ಐಒಸಿ ಕ್ರೀಡಾಪಟುಗಳ ಆಯೋಗ ಪ್ರಕಟಣೆಯಲ್ಲಿ ತಿಳಿಸಿದೆ.
ಭಾರತದ ಬ್ಯಾಡ್ಮಿಂಟನ್ ಅಭಿವೃದ್ಧಿಯಲ್ಲಿ ಅವರ ಪ್ರಯತ್ನ ಹಾಗೂ ಒಲಿಂಪಿಕ್ಸ್ ಕ್ರೀಡಾಕೂಟದ ಹಿನ್ನೆೆಲೆಯಲ್ಲಿ ಅಥ್ಲಿಟ್ಗಳಿಗೆ ಅವರು ನೀಡಿರುವ ಸಹಕಾರ ಹಾಗೂ ಬೆಂಬಲ ಅಪಾರವಾಗಿದೆ. ಹಾಗಾಗಿ, ಅವರ ಕಾರ್ಯವೈಖರಿಯನ್ನು ಗುರುತಿಸಲು ಸಮಿತಿ ನಿರ್ಧರಿಸಿದೆ.
ಭಾರತದಲ್ಲಿ ಬ್ಯಾಡ್ಮಿಂಟನ್ ಅಭಿವೃದ್ಧಿಯಲ್ಲಿ ಗೋಪಿಚಂದ್ ಕೊಡುಗೆ, ಕ್ರೀಡೆಗಳಲ್ಲಿ ಕ್ರೀಡಾಪಟುಗಳನ್ನು ಬೆಂಬಲಿಸುವಲ್ಲಿ ಅವರು ಮಾಡಿದ ಪ್ರಯತ್ನಗಳು ಮತ್ತು ಒಲಿಂಪಿಕ್ಸ್ಗೆ ಅವರು ನೀಡಿದ ಕೊಡುಗೆಗಳನ್ನು ಗುರುತಿಸಿ ಪ್ರಶಸ್ತಿ ನೀಡಲು ಸಮಿತಿ ಬಯಸಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


