ಏಷ್ಯನ್ ಕುಸ್ತಿ: ನಾಲ್ಕನೇ ದಿನ ಭಾರತಕ್ಕೆ 1 ಬೆಳ್ಳಿ, 3 ಕಂಚು ತಂದ ಮಹಿಳೆಯರು
ಏಷ್ಯನ್ ಕುಸ್ತಿ ಚಾಂಪಿಯನ್‌ಶಿಪ್‌ನ ಫೈನಲ್‌ನಲ್ಲಿ ಭಾರತದ ಮಹಿಳಾ ಕುಸ್ತಿಪಟು ಸಾಕ್ಷಿ ಮಲಿಕ್ ಜಪಾನ್‌ನ ನವೋಮಿ ರ್ಯೂಕ್ ವಿರುದ್ಧ ಸೋತು ಬೆಳ್ಳಿಗೆ ತೃಪ್ತಿ ಪಟ್ಟುಕೊಳ್ಳಬೇಕಾಯಿತು. ಈ ಚಾಂಪಿಯನ್‌ಶಿಪ್‌ನ ನಾಲ್ಕನೇ ದಿನದಂದು ಭಾರತ ಶುಕ್ರವಾರ ಒಂದು ಬೆಳ್ಳಿ ಹಾಗೂ ಮೂರು ಕಂಚಿನ ಪದಕಗಳನ್ನು ಗೆದ್ದಿದೆ.

ನವದೆಹಲಿ: ಏಷ್ಯನ್ ಕುಸ್ತಿ ಚಾಂಪಿಯನ್‌ಶಿಪ್‌ನ ಫೈನಲ್‌ನಲ್ಲಿ ಭಾರತದ ಮಹಿಳಾ ಕುಸ್ತಿಪಟು ಸಾಕ್ಷಿ ಮಲಿಕ್ ಜಪಾನ್‌ನ ನವೋಮಿ ರ್ಯೂಕ್ ವಿರುದ್ಧ ಸೋತು ಬೆಳ್ಳಿಗೆ ತೃಪ್ತಿ ಪಟ್ಟುಕೊಳ್ಳಬೇಕಾಯಿತು. ಈ ಚಾಂಪಿಯನ್‌ಶಿಪ್‌ನ ನಾಲ್ಕನೇ ದಿನದಂದು ಭಾರತ ಶುಕ್ರವಾರ ಒಂದು ಬೆಳ್ಳಿ ಹಾಗೂ ಮೂರು ಕಂಚಿನ ಪದಕಗಳನ್ನು ಗೆದ್ದಿದೆ.
ಇಂದಿರಾ ಗಾಂಧಿ ಕ್ರೀಡಾಂಗಣದಲ್ಲಿ ನಡೆದ ಫೈನಲ್ 65 ಕೆಜಿ ವಿಭಾಗದ ಪಂದ್ಯದಲ್ಲಿ ನ ಒಲಿಂಪಿಕ್ಸ್ ಕಂಚಿನ ಪದಕ ವಿಜೇತೆ ಸಾಕ್ಷಿ 2-0 ರಿಂದ ಸೋಲನುಭವಿಸಿದರು. ಸೆಮಿಫೈನಲ್ಸ್ ನಲ್ಲಿ ಪಂದ್ಯದಲ್ಲಿ ಉಜ್ಬೇಕಿಸ್ತಾನದ ನಬೀರಾ ಅಸೆನ್ಬ್ವಾ ಅವರನ್ನು 5-4 ಗೋಲುಗಳಿಂದ ಸೋಲಿಸಿದ ನಂತರ ಸಾಕ್ಷಿ ಫೈನಲ್‌ಗೆ ಪ್ರವೇಶಿಸಿದ್ದರು.
ಭಾರತದ ಇನ್ನೋರ್ವ ಮಹಿಳಾ ಕುಸ್ತಿಪಟು ವಿನೇಶ್ ಪೋಗಟ್ 53 ಕೆ.ಜಿ. ವಿಭಾಗದಲ್ಲಿ ಕಂಚಿನ ಪದಕ ಗಳಿಸಿದ್ದಾರೆ.ಇದಲ್ಲದೆ 57 ಕೆ.ಜಿ. ವಿಭಾಗದಲ್ಲಿ ಅನ್ಶು ಮಲಿಕ್, 72 ಕೆ.ಜಿ. ವಿಭಾಗದಲ್ಲಿ ಗುರುಶರಣ್‌ಪ್ರೀತ್ ಕೌರ್ ಕಂಚಿನ ಪದಕ ಗಳಿಸಿ ಸಾಧನೆ ಮಾಡಿದ್ದಾರೆ.
ಕೂಟದಲ್ಲಿ ಇದುವರೆಗೆ ಭಾರತ ಒಟ್ತಾರೆ 13 ಪದಕ ಗಳಿಸಿಕೊಂಡು ಪದಕ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದೆ. ಇದರಲ್ಲಿ ಮಹಿಳಾ ವಿಭಾಗದಲ್ಲಿ ಭಾರತ 3 ಚಿನ್ನ, 2 ಬೆಳ್ಳಿ, 3 ಕಂಚು ಜಯಿಸಿದೆ. ಒಟ್ಟಾರೆ 4 ಚಿನ್ನ, 2 ಬೆಳ್ಳಿ 7 ಕಂಚು ಸೇರಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


