ಮಲೇಷ್ಯಾ ಮಾಸ್ಟರ್ಸ್: ಸಿಂಧು ಸೈನಾ ಮುನ್ನಡೆ, ಶ್ರೀಕಾಂತ್, ಕಶ್ಯಪ್ ಗೆ ಆಘಾತ
ವಿಶ್ವದ ಮಾಜಿ ನಂಬರ್ 1 ಆಟಗಾರ್ತಿ ಸೈನಾ ನೆಹ್ವಾಲ್ ಹಾಗೂ ರಿಯೊ ಒಲಿಂಪಿಕ್ಸ್ ನಲ್ಲಿ ಬೆಳ್ಳಿ ಸಾಧನೆ ಮಾಡಿರುವ ಪಿ.ವಿ ಸಿಂಧು ಅವರು ಇಲ್ಲಿ ನಡೆಯುತ್ತಿರುವ ಮಲೇಷ್ಯಾ ಮಾಸ್ಟರ್ಸ್ ಬ್ಯಾಡ್ಮಿಂಟನ್ ಟೂರ್ನಿಯ ಎರಡನೇ ಸುತ್ತಿಗೆ ಪ್ರವೇಶಿಸಿದ್ದಾರೆ.

ಕೌಲಾಲಂಪುರ್: ವಿಶ್ವದ ಮಾಜಿ ನಂಬರ್ 1 ಆಟಗಾರ್ತಿ ಸೈನಾ ನೆಹ್ವಾಲ್ ಹಾಗೂ ರಿಯೊ ಒಲಿಂಪಿಕ್ಸ್ ನಲ್ಲಿ ಬೆಳ್ಳಿ ಸಾಧನೆ ಮಾಡಿರುವ ಪಿ.ವಿ ಸಿಂಧು ಅವರು ಇಲ್ಲಿ ನಡೆಯುತ್ತಿರುವ ಮಲೇಷ್ಯಾ ಮಾಸ್ಟರ್ಸ್ ಬ್ಯಾಡ್ಮಿಂಟನ್ ಟೂರ್ನಿಯ ಎರಡನೇ ಸುತ್ತಿಗೆ ಪ್ರವೇಶಿಸಿದ್ದಾರೆ.
ಮಂಗಳವಾರ ನಡೆದ ಮಹಿಳೆಯರ ಸಿಂಗಲ್ಸ್ ಪಂದ್ಯದಲ್ಲಿ ಸಿಂಧು 21-15, 21-13 ರಿಂದ ರಷ್ಯಾದ ಎವ್ಗೆನಿಯಾ ಕೊಸೆಟ್ಸ್ಕಾಯಾ ಅವರನ್ನು 35 ನಿಮಿಷಗಳ ಕಾದಾಟದಲ್ಲಿ ಮಣಿಸಿ ಮುನ್ನಡೆದರು. ಮೊದಲ ಹಾಗೂ ಎರಡನೇ ಪಂದ್ಯದಲ್ಲಿ ಭರ್ಜರಿ ಪ್ರದರ್ಶನ ನೀಡಿದ ಸಿಂಧು, ಅರ್ಹ ಜಯ ದಾಖಲಿಸಿದರು. ಇನ್ನೊಂದು ಪಂದ್ಯದಲ್ಲಿ ಸೈನಾ 21-15, 21-17 ರಿಂದ ಬೆಲ್ಜಿಯಂನ ಲಿಯಾನ್ನೆ ಟ್ಯಾನ್ ಅವರನ್ನು ಏಕಪಕ್ಷಿಯ ಕಾದಾಟದಲ್ಲಿ ಮಣಿಸಿದರು.
ಪುರುಷರ ಸಿಂಗಲ್ಸ್ ಪಂದ್ಯದಲ್ಲಿ ಪ್ರಣಯ್ ಎಚ್.ಎಸ್ 21-9, 21-17 ರಿಂದ ಜಪಾನ್ ನ ಕಾಂತ ತ್ಸುನೇಯಮಾ ಆಟಗಾರನನ್ನು 34 ನಿಮಿಷದ ಹೋರಾಟದಲ್ಲಿ ಸೋಲಿಸಿ ಮುನ್ನಡೆ ಸಾಧಿಸಿದರು. ಇನ್ನೊಂದು ಪಂದ್ಯದಲ್ಲಿ ಸಾಯಿ ಪ್ರಣೀತ್ 11-21, 15-21 ರಿಂದ ಡೆನ್ಮಾರ್ಕ್ ನ ರಾಸ್ಮಸ್ ಜೆಮ್ಕೆ ವಿರುದ್ಧ, ಪರುಪಳ್ಳಿ ಕಶ್ಯಪ್ 17-21, 16-21 ರಿಂದ ಜಪನಾನ ಕೆಂಟಾ ಮೊಮೊಟ ವಿರುದ್ಧ, ಕಿಡಂಬಿ ಶ್ರೀಕಾಂತ್ 17-21, 5-21 ರಿಂದ ಚೊ ಟೈನ್ ಚೆನ್ ವಿರುದ್ಧ ಆಘಾತಕ್ಕೆ ಒಳಗಾದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


