ಖೇಲೋ ಇಂಡಿಯಾ: ಬಾಲಕಿಗೆ ಚುಚ್ಚಿದ ಬಾಣ, ಪ್ರಾಣಾಪಾಯದಿಂದ ಪಾರು
ಬಿಲ್ಲುಗಾರಿಕೆ ಅಭ್ಯಾಸ ನಡೆಸುತ್ತಿರುವ ವೇಳೆ ಬಾಲಕಿಯ ಭುಜಕ್ಕೆ ಬಾಣ ಚುಚ್ಚಿರುವ ಆಘಾತಕಾರಿ ಘಟನೆ ಅಸ್ಸಾಂನಲ್ಲಿ ನಡೆದಿದ್ದು, ಅದೃಷ್ಟವಶಾತ್ ಯುವ ಆರ್ಚರಿ ಪಟು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ನವದೆಹಲಿ: ಬಿಲ್ಲುಗಾರಿಕೆ ಅಭ್ಯಾಸ ನಡೆಸುತ್ತಿರುವ ವೇಳೆ ಬಾಲಕಿಯ ಭುಜಕ್ಕೆ ಬಾಣ ಚುಚ್ಚಿರುವ ಆಘಾತಕಾರಿ ಘಟನೆ ಅಸ್ಸಾಂನಲ್ಲಿ ನಡೆದಿದ್ದು, ಅದೃಷ್ಟವಶಾತ್ ಯುವ ಆರ್ಚರಿ ಪಟು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಗುವಾಹಟಿಯ ದಿಬ್ರುಗರ್ ಜಿಲ್ಲೆಯ ಚಬುವಾದಲ್ಲಿ ಆರ್ಚರಿ ಅಭ್ಯಾಸ ನಡೆಸುತ್ತಿದ್ದ ವೇಳೆ 12ರ ಹರೆಯದ ಬಾಲಕಿ ಶಿವಾಂಗಿನಿ ಗೋಹೈನ್ ಭುಜಕ್ಕೆ ತೀಕ್ಷ್ಣವಾದ ಬಾಣ ಚುಚ್ಚಿಕೊಂಡಿದೆ. ಆರಂಭದಲ್ಲಿ ಖೇಲೋ ಇಂಡಿಯಾ ಗೇಮ್ಸ್‌ನಲ್ಲಿ ಅನಾಹುತ ಸಂಭವಿಸಿದೆ ಎಂಬ ವರದಿಗಳು ಬಂದಿತ್ತು. ಬಳಿಕ ಅಸ್ಸಾಂ ಆರ್ಚರಿ ಅಸೋಸಿಯೇಷನ್ ಘಟನೆ ಬಗ್ಗೆ ಸ್ಪಷ್ಟನೆ ನೀಡಿದೆ.
ಶಿವಾಂಗಿನಿ ಖೇಲೋ ಇಂಡಿಯಾ ಟೂರ್ನಿಯಲ್ಲಿ ಭಾಗವಹಿಸಲು ಅಭ್ಯಾಸ ನಡೆಸುತ್ತಿದ್ದರು ಎನ್ನಲಾಗಿದೆ. ಭಾರತೀಯ ಕ್ರೀಡಾ ಪ್ರಾಧಿಕಾರದ (ಸಾಯ್) ಕೇಂದ್ರದಲ್ಲಿ ಘಟನೆ ನಡೆದಿದ್ದು, ತಕ್ಷಣ ಆಕೆಯನ್ನು ಸ್ಥಳೀಯ ಆಸ್ಪತ್ರೆಗೆ ಸಾಗಿಸಿ ಪ್ರಾಥಮಿಕ ಚಿಕಿತ್ಸೆ ನೀಡಲಾಯಿತು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ದೆಹಲಿಯ ಏಮ್ಸ್ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು. ಬಾಲಕಿ ಈಗ ಚೇತರಿಸುತ್ತಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.
ಬಾಲಕಿಯ ಬೇಕಾಗಿರುವ ಚಿಕಿತ್ಸೆಯ ಎಲ್ಲ ವೆಚ್ಚವನ್ನು ಭರಿಸುವುದಾಗಿ ಭಾರತೀಯ ಕ್ರೀಡಾ ಪ್ರಾಧಿಕಾರ ಘೋಷಿಸಿದೆ. ಖೆಲೋ ಇಂಡಿಯಾ ಯೂತ್ ಗೇಮ್ಸ್, ಅಸ್ಸಾಂನ ಗುವಾಹಟಿಯಲ್ಲಿ ಜನವರಿ 10 ರಿಂದ 22ರ ವರೆಗೆ ನಡೆಯುತ್ತಿದೆ.
ಒಂಬತ್ತರ ಹರೆಯದಿಂದಲೇ ಬಿಲ್ಲುಗಾರಿಕೆಯಲ್ಲಿ ಪ್ರವೀಣೆಯಾಗಿರುವ ಶಿವಾಂಗಿನಿ ಈಗಾಗಲೇ ಅನೇಕ ಪದಕಗಳನ್ನು ಗೆದಿದ್ದಾರೆ. ಆಂಧ್ರ ಪ್ರದೇಶದಲ್ಲಿ ನಡೆದ 65ನೇ ರಾಷ್ಟ್ರೀಯ ಶಾಲಾ ಕ್ರೀಡಾ ಆರ್ಚರಿ ಚಾಂಪಿಯನ್‌ಶಿಪ್‌ನಲ್ಲೂ ಭಾಗವಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


