ಅಮಿತ್ ಪಂಘಾಲ್ ವಿಶ್ವದ ನಂ.1 ಬಾಕ್ಸರ್
ಹಾಲಿ ಏಷ್ಯನ್ ಗೇಮ್ಸ್ ಚಾಂಪಿಯನ್ ಮತ್ತು ವಿಶ್ವ ಚಾಂಪಿಯನ್ ಷಿಪ್ ಬೆಳ್ಳಿ ಪದಕ ವಿಜೇತ ಅಮಿತ್ ಪಂಘಾಲ್ ಅಮೆಚೂರ್ ಅಂತಾರಾಷ್ಟ್ರೀಯ ಬಾಕ್ಸಿಂಗ್ ಸಂಸ್ಥೆ (ಎಐಬಿಎ) ನೂತನವಾಗಿ ಬಿಡುಗಡೆ ಮಾಡಿದ ವಿಶ್ವ ರಾಂಕಿಂಗ್ ನ 52 ಕೆ. ಜಿ ವಿಭಾಗದಲ್ಲಿ ಅಗ್ರಸ್ಥಾನ ಅಲಂಕರಿಸಿದ್ದಾರೆ.

ನವದೆಹಲಿ: ಹಾಲಿ ಏಷ್ಯನ್ ಗೇಮ್ಸ್ ಚಾಂಪಿಯನ್ ಮತ್ತು ವಿಶ್ವ ಚಾಂಪಿಯನ್ ಷಿಪ್ ಬೆಳ್ಳಿ ಪದಕ ವಿಜೇತ ಅಮಿತ್ ಪಂಘಾಲ್ ಅಮೆಚೂರ್ ಅಂತಾರಾಷ್ಟ್ರೀಯ ಬಾಕ್ಸಿಂಗ್ ಸಂಸ್ಥೆ (ಎಐಬಿಎ) ನೂತನವಾಗಿ ಬಿಡುಗಡೆ ಮಾಡಿದ ವಿಶ್ವ Ranking ನ 52 ಕೆ. ಜಿ ವಿಭಾಗದಲ್ಲಿ ಅಗ್ರಸ್ಥಾನ ಅಲಂಕರಿಸಿದ್ದಾರೆ.
ಈ ಮಹತ್ವದ ಬೆಳವಣಿಗೆಯೊಂದಿಗೆ ಭಾರತೀಯ ಬಾಕ್ಸಿಂಗ್ ವಲಯ ಹೆಮ್ಮೆ ಪಡುವಂತೆ ಮಾಡಿದ್ದಾರೆ. ಸುಮಾರು 18 ತಿಂಗಳ ಸುದೀರ್ಘಾವಧಿಯ ಬಳಿಕ ಪುರುಷರ Ranking ಪಟ್ಟಿ ಬಿಡುಗಡೆಯಾಗಿದೆ. 2019ರ ಜನವರಿಯಲ್ಲಿ ಐಬಾ ಕೊನೆಯದಾಗಿ Ranking ಪಟ್ಟಿಯನ್ನು ಬಿಡುಗಡೆ ಮಾಡಿತ್ತು.
ಈ ವೇಳೆ ಕೇವಲ ಮಹಿಳಾ ಬಾಕ್ಸರ್ ಗಳ ಪಟ್ಟಿಯನ್ನು ಬಿಡುಗಡೆ ಮಾಡಲಾಗಿತ್ತು. ಆಗ 2018ರ ನವೆಂಬರ್ ನಲ್ಲಿ ದಿಲ್ಲಿಯಲ್ಲಿ ನಡೆದಿದ್ದ ಮಹಿಳಾ ವಿಶ್ವ ಚಾಂಪಿಯನ್ ಷಿಪ್ ನಲ್ಲಿ ತಮ್ಮ ಐತಿಹಾಸಿಕ ಆರನೇ ಚಿನ್ನದ ಪದಕ ಜಯಿಸಿದ್ದ ಎಂ.ಸಿ. ಮೇರಿ ಕೋಮ್ 48 ಕೆ.ಜಿ. ವಿಭಾಗದಲ್ಲಿ ಮೊದಲ ಸ್ಥಾನಕ್ಕೇರಿದ್ದರು. ಈ ಸಂದರ್ಭದಲ್ಲಿ ಐಬಾ ಪುರುಷರ Ranking ಪಟ್ಟಿಯನ್ನು ಬಿಡುಗಡೆ ಮಾಡಿರಲಿಲ್ಲ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


