ಕ್ರೀಡೆ

ರಾಜೀವ್ ಗಾಂಧಿ ಖೇಲ್ ರತ್ನ ಪ್ರಶಸ್ತಿಗೆ ರಾಣಿ ರಾಂಪಲ್ ನಾಮನಿರ್ದೇಶನ ಮಾಡಿದ ಹಾಕಿ ಇಂಡಿಯಾ!

ಭಾರತ ಮಹಿಳಾ ಹಾಕಿ ತಂಡದ ನಾಯಕಿ ರಾಣಿ ರಾಂಪಲ್ ಅವರನ್ನು ಪ್ರತಿಷ್ಠಿತ ರಾಜೀವ್ ಗಾಂಧಿ ಖೇಲ್ ರತ್ನ ಪ್ರಶಸ್ತಿಗೆ ನಾಮನಿರ್ದೇಶನ ಮಾಡಿರುವ ಹಾಕಿ ಇಂಡಿಯಾ, ವಂದನಾ ಕಟಾರಿಯಾ, ಮೊನಿಕಾ ಮತ್ತು ಹರ್ಮನ್ ಪ್ರೀತ್ ಸಿಂಗ್ ಅವರ ಹೆಸರನ್ನು ಅರ್ಜುನ ಪ್ರಶಸ್ತಿಗೆ ಶಿಫಾರಸು ಮಾಡಿದೆ.

ರಾಜೀವ್ ಗಾಂಧಿ ಖೇಲ್ ರತ್ನ ಪ್ರಶಸ್ತಿಗೆ ರಾಣಿ ರಾಂಪಲ್ ನಾಮನಿರ್ದೇಶನ ಮಾಡಿದ ಹಾಕಿ ಇಂಡಿಯಾ!
ರಾಣಿ ರಾಂಪಲ್
Published On :

ನವದೆಹಲಿ:ಭಾರತ ಮಹಿಳಾ ಹಾಕಿ ತಂಡದ ನಾಯಕಿ ರಾಣಿ ರಾಂಪಲ್ ಅವರನ್ನು ಪ್ರತಿಷ್ಠಿತ ರಾಜೀವ್ ಗಾಂಧಿ ಖೇಲ್ ರತ್ನ ಪ್ರಶಸ್ತಿಗೆ ನಾಮನಿರ್ದೇಶನ ಮಾಡಿರುವ ಹಾಕಿ ಇಂಡಿಯಾ, ವಂದನಾ ಕಟಾರಿಯಾ, ಮೊನಿಕಾ ಮತ್ತು ಹರ್ಮನ್ ಪ್ರೀತ್ ಸಿಂಗ್ ಅವರ ಹೆಸರನ್ನು ಅರ್ಜುನ ಪ್ರಶಸ್ತಿಗೆ ಶಿಫಾರಸು ಮಾಡಿದೆ. 

ರಾಣಿ ರಾಂಪಲ್ ನಾಯಕತ್ವದಲ್ಲಿನ ಭಾರತ ತಂಡ 2017ರಲ್ಲಿ ಮಹಿಳಾ ಏಷ್ಯಾ ಕಪ್ ಜಯಸಿತ್ತು. 2018 ರ ಏಷ್ಯನ್ ಕ್ರೀಡಾಕೂಟದಲ್ಲಿ ಬೆಳ್ಳಿ ಮತ್ತು ಟೋಕಿಯೊ ಒಲಿಂಪಿಕ್ಸ್‌ಗೆ ಅರ್ಹತೆ ಪಡೆಯಲು ಸಹಾಯ ಮಾಡುವ ನಿರ್ಣಾಯಕ ಗುರಿಯನ್ನು ಗಳಿಸುವ ಮೂಲಕ 2019 ರಲ್ಲಿ ಒಲಿಂಪಿಕ್ ಅರ್ಹತಾ ಪಂದ್ಯಗಳಲ್ಲಿ ನಿರ್ಣಾಯಕ ಪಾತ್ರ ವಹಿಸಿದೆ.  

ಈ ಅವಧಿಯಲ್ಲಿ ಭಾರತದ ವನಿತೆಯರ ತಂಡ ವಿಶ್ವದ ಅತ್ಯುತ್ತಮ- ನಂಬರ್ 9 ಸ್ಥಾನಕ್ಕೇರಿತ್ತು.ರಾಣಿ ರಾಂಪಲ್ 2016ರಲ್ಲಿ ಅರ್ಜುನ ಪ್ರಶಸ್ತಿ ಹಾಗೂ 2020ರಲ್ಲಿ ಪ್ರತಿಷ್ಠಿತ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರಾಗಿದ್ದಾರೆ. 

ಸರ್ದಾರ್ ಸಿಂಗ್ ರಾಜೀವ್ ಗಾಂಧಿ ಖೇಲ್ ರತ್ನ ಪ್ರಶಸ್ತಿ ಪಡೆದಿರುವ ಕೊನೆಯ ಆಟಗಾರ. ಪ್ರತಿಷ್ಠಿತ ಪ್ರಶಸ್ತಿ ಪಡೆಯುವ ಎಲ್ಲಾ ಅರ್ಹತೆಗಳು ರಾಣಿ ರಾಂಪಲ್ ಅವರಿಗೆ ಇದೆ ಎಂದು ಹಾಕಿ ಇಂಡಿಯಾ ಅಧ್ಯಕ್ಷ ಮೊಹಮ್ಮದ್ ಮುಸ್ತಕ್ ಅಹ್ಮದ್ ಹೇಳಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.