ಭಾರತೀಯ ಹಾಕಿ ಕ್ರೀಡೆಯ ದಂತ ಕತೆ ಬಲ್ಬೀರ್ ಸಿಂಗ್ ತೀವ್ರ ಅಸ್ವಸ್ಥ, ಕೊರೋನಾ ಪರೀಕ್ಷೆ!
ಭಾರತೀಯ ಹಾಕಿ ಕ್ರೀಡೆಯ ದಂತಕತೆ ಬಲ್ಬೀರ್ ಸಿಂಗ್ (96) ಅವರು ತೀವ್ರ ಅಸ್ವಸ್ಥಗೊಂಡಿದ್ದು, ಪ್ರಸ್ತುತ ಅವರಿಗೆ ವೆಂಟಿಲೇಟರ್ ಮೂಲಕ ಚಿಕಿತ್ಸೆ ಕಲ್ಪಿಸಲಾಗುತ್ತಿದೆ.

ಚಂಡಿಗಢ: ಭಾರತೀಯ ಹಾಕಿ ಕ್ರೀಡೆಯ ದಂತಕತೆ ಬಲ್ಬೀರ್ ಸಿಂಗ್ (96) ಅವರು ತೀವ್ರ ಅಸ್ವಸ್ಥಗೊಂಡಿದ್ದು, ಪ್ರಸ್ತುತ ಅವರಿಗೆ ವೆಂಟಿಲೇಟರ್ ಮೂಲಕ ಚಿಕಿತ್ಸೆ ಕಲ್ಪಿಸಲಾಗುತ್ತಿದೆ.
ಚಂಡಿಗಢದಲ್ಲಿ ಪುತ್ರಿ ಹಾಗೂ ಮೊಮ್ಮಗನೊಂದಿಗೆ ವಾಸವಾಗಿರುವ ಬಲ್ಬೀರ್ ಸಿಂಗ್, ನ್ಯೂಮೊನಿಯದ ಜತೆಗೆ, ಅಧಿಕ ಜ್ವರದಿಂದ ಬಳಲುತ್ತಿದ್ದು, ಕೂಡಲೇ ಅವರನ್ನು ನಗರದ ಪೋರ್ಟೀಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಆಸ್ಪತ್ರೆಗೆ ದಾಖಲಾಗಿರುವ ಬಲ್ಬೀರ್ ಅವರಿಗೆ ಕೊರೊನಾ ಪರೀಕ್ಷೆಗಳನ್ನು ನಡೆಸಲಾಗಿದೆ. ಆದರೆ ಫಲಿತಾಂಶಗಳು ಬರಬೇಕಿದೆ.
ಭಾರತ ಹಾಕಿ ತಂಡ ಸಾಧಿಸಿದ ಹಲವು ಗೆಲುವುಗಳಲ್ಲಿ ಬಲ್ಬೀರ್ ಸಿಂಗ್ ಪ್ರಮುಖ ಪಾತ್ರ ವಹಿಸಿದ್ದರು. ೧೯೪೮, ೧೯೫೨, ೧೯೫೬ರಲ್ಲಿ ನಡೆದ ಒಲಿಂಪಿಕ್ಸ್ ಭಾರತ ಪದಕ ಮುಡಿಗೇರಿಸಿಕೊಂಡಿತ್ತು. ಆಗಿನ ಭಾರತೀಯ ಹಾಕಿ ತಂಡದಲ್ಲಿ ಬಲ್ಬೀರ್ ಸಿಂಗ್ ಸದಸ್ಯರಾಗಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


