ಬಾಕ್ಸರ್ ದುರ್ಯೋಧನ್ ಸಿಂಗ್ ಗೆ ಕೋವಿಡ್-19 ದೃಢ
ಭಾರತದ ಮುಂಚೂಣಿ ಬಾಕ್ಸರ್ ದುರ್ಯೋಧನ್ ಸಿಂಗ್ ನೇಗಿ ಅವರಿಗೆ ಕೋವಿಡ್-19 ಸೋಂಕು ಇರುವುದು ದೃಢಪಟ್ಟಿದೆ. ಹೀಗಾಗಿ ಅವರನ್ನು ಪಟಿಯಾಲಾದಿಂದ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.

ನವದೆಹಲಿ: ಭಾರತದ ಮುಂಚೂಣಿ ಬಾಕ್ಸರ್ ದುರ್ಯೋಧನ್ ಸಿಂಗ್ ನೇಗಿ ಅವರಿಗೆ ಕೋವಿಡ್-19 ಸೋಂಕು ಇರುವುದು ದೃಢಪಟ್ಟಿದೆ. ಹೀಗಾಗಿ ಅವರನ್ನು ಪಟಿಯಾಲಾದಿಂದ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಪಟಿಯಾಲಾ ಕೇಂದ್ರದ ಸಾಯ್ ಎನ್ ಎಸ್ ಎನ್ಐಎಸ್ ನಲ್ಲಿ ಅಭ್ಯಾಸ ನಡೆಸುತ್ತಿರುವ ನೇಗಿ ಅವರಲ್ಲಿ ಕೊರೋನಾ ಪತ್ತೆಯಾಗಿದೆ.
ಮುಂಜಾಗ್ರತಾ ಕ್ರಮವಾಗಿ ನೇಗಿ ಅವರನ್ನು ಸ್ಥಳೀಯ ಕೊಲಂಬಿಯಾ ಏಷ್ಯಾ ಆಸ್ಪತ್ರೆಗೆ ದಾಖಲಿಸಲಾಗಿದೆ. ದೀಪಾವಳಿಗೆ ರಜೆ ಪಡೆದಿದ್ದ ನೇಗಿ ಅವರು ಕ್ವಾರಂಟೈನ್ ಅವಧಿ ಮುಗಿಸಿ ಮತ್ತೆ ತರಬೇತಿಗೆ ಮರಳಿದಾಗ ಟೆಸ್ಟ್ ನಡೆಸಲಾಯಿತು. ಈ ವೇಳೆ ಅವರಿಗೆ ಕೋವಿಡ್-19 ಇರುವುದು ಪತ್ತೆಯಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


