ಬೆಂಗಳೂರಿನಲ್ಲಿರುವ ಭಾರತ ಮಹಿಳಾ ಹಾಕಿ ತಂಡದ ನಾಯಕಿ ರಾಣಿ ರಾಂಪಾಲ್ ಸೇರಿ 7 ಮಂದಿ ಆಟಗಾರ್ತಿಯರಿಗೆ ಕೊರೋನಾ!
ತರಬೇತಿ ನಿಮಿತ್ತ ಬೆಂಗಳೂರಿನಲ್ಲಿರುವ ಭಾರತ ಮಹಿಳಾ ಹಾಕಿ ತಂಡದ ನಾಯಕಿ ರಾಣಿ ರಾಂಪಾಲ್ ಸೇರಿದಂತೆ ಏಳು ಮಂದಿ ಆಟಗಾರ್ತಿಯರ ಕೊರೋನಾ ಸೋಂಕು ಒಕ್ಕರಿಸಿದೆ ಎಂದು ತಿಳಿದುಬಂದಿದೆ.

ಬೆಂಗಳೂರು: ತರಬೇತಿ ನಿಮಿತ್ತ ಬೆಂಗಳೂರಿನಲ್ಲಿರುವ ಭಾರತ ಮಹಿಳಾ ಹಾಕಿ ತಂಡದ ನಾಯಕಿ ರಾಣಿ ರಾಂಪಾಲ್ ಸೇರಿದಂತೆ ಏಳು ಮಂದಿ ಆಟಗಾರ್ತಿಯರ ಕೊರೋನಾ ಸೋಂಕು ಒಕ್ಕರಿಸಿದೆ ಎಂದು ತಿಳಿದುಬಂದಿದೆ.
ಬೆಂಗಳೂರಿನಲ್ಲಿರುವ ಭಾರತ ಕ್ರೀಡಾ ಪ್ರಾಧಿಕಾರ (ಸಾಯ್) ಕೇಂದ್ರದಲ್ಲಿ ತರಬೇತಿ ಶಿಬಿರದಲ್ಲಿ ಪಾಲ್ಗೊಳ್ಳಲು ಆಗಮಿಸಿರುವ ಭಾರತ ಮಹಿಳಾ ಹಾಕಿ ತಂಡದ ನಾಯಕಿ ರಾಣಿ ರಾಂಪಾಲ್ ಸೇರಿದಂತೆ ಏಳು ಮಂದಿ ಆಟಗಾರ್ತಿಯರಲ್ಲಿ ಸೋಮವಾರ ಕೋವಿಡ್-19 ದೃಢಪಟ್ಟಿದೆ. ಸೋಂಕಿತರಲ್ಲಿ ಇಬ್ಬರು ನೆರವು ಸಿಬ್ಬಂದಿಯೂ ಕೂಡ ಸೇರಿದ್ದಾರೆ ಎಂದು ತಿಳಿದುಬಂದಿದೆ.
ಸೋಂಕಿತರಲ್ಲಿ ರೋಗ ಲಕ್ಷಣಗಳಿಲ್ಲವಾದರೂ, ಅವರನ್ನು ತೀವ್ರ ನಿಗಾದಲ್ಲಿರಿಸಲಾಗಿದೆ. ಸಾಯ್ ಕೇಂದ್ರದಲ್ಲೇ ಅವರನ್ನು ವಿಶೇಷ ಘಟಕದಲ್ಲಿಟ್ಟು ಚಿಕಿತ್ಸೆ ನೀಡಲಾಗಿದೆ. ಈ ಬಗ್ಗೆ ಹೇಳಿಕೆ ಬಿಡುಗಡೆ ಮಾಡಿರುವ ಸಾಯ್, 'ತಮ್ಮ ತವರು ರಾಜ್ಯಗಳಿಂದ ಇಲ್ಲಿಗೆ ಬಂದ ಆಟಗಾರ್ತಿಯರನ್ನು, ಕ್ವಾರಂಟೈನ್ ಮಾಡಿದ ಬಳಿಕ ಏಪ್ರಿಲ್ 24ರಂದು ನಿಯಮಗಳ ಅನ್ವಯ ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿತ್ತು' ಎಂದು ಸಾಯ್ ಹೇಳಿಕೆಯಲ್ಲಿ ತಿಳಿಸಿದೆ.
ಹಾಕಿ ತಂಡದ ನಾಯಕಿ ರಾಣಿ ರಾಂಪಾಲ್ ಸೇರಿದಂತೆ ಸಹ ಆಟಗಾರ್ತಿಯರಾದ ಸವಿತಾ ಪುನಿಯಾ, ಶರ್ಮಿಳಾ ದೇವಿ, ರಜನಿ, ನವಜೋತ್ ಕೌರ್, ನವನೀತ್ ಕೌರ್ ಹಾಗೂ ಸುಶೀಲಾ ಅವರಿಗೆ ಕೋವಿಡ್ ಸೋಂಕು ದೃಢಪಟ್ಟಿದೆ. ಅಲ್ಲದೆ ವಿಡಿಯೊ ಅನಾಲಿಸ್ಟ್ ಅಮೃತಾ ಪ್ರಕಾಶ್ ಮತ್ತು ವೈಜ್ಞಾನಿಕ ಸಲಹೆಗಾರ್ತಿ ವೇಯ್ನ್ ಲೊಂಬಾರ್ಡ್ ಕೂಡ ಕೊರೊನಾ ಸೋಂಕು ಒಕ್ಕರಿಸಿದೆ.
ಭಾರತ ಮಹಿಳಾ ತಂಡವು ಟೋಕಿಯೊ ಒಲಿಂಪಿಕ್ಸ್ ಸಿದ್ದತೆಗಾಗಿ ಕಳೆದ ಭಾನುವಾರ ಬೆಂಗಳೂರಿಗೆ ಆಗಮಿಸಿತ್ತು. ಜನವರಿಯಲ್ಲಿ ಭಾರತ ಮಹಿಳಾ ಹಾಕಿ ತಂಡವು ಅರ್ಜೆಂಟೀನಾದಲ್ಲಿ ಪ್ರವಾಸ ಮಾಡಿ ಅಲ್ಲಿ ಏಳು ಪಂದ್ಯಗಳನ್ನು ಆಡಿತ್ತು. ಫೆಬ್ರವರಿ-ಮಾರ್ಚ್‌ನಲ್ಲಿ ನಡೆದ ಜರ್ಮನಿ ಪ್ರವಾಸದಲ್ಲಿ, ಭಾರತೀಯ ಮಹಿಳಾ ತಂಡವು ವಿಶ್ವದ ನಾಲ್ಕನೇ ಕ್ರಮಾಂಕದ ವಿರುದ್ಧದ ಎಲ್ಲಾ ನಾಲ್ಕು ಪಂದ್ಯಗಳನ್ನು ಸೋತಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


