ಕ್ರೀಡೆ

ಭಾರತದ ಬಾಕ್ಸರ್ ಸತೀಶ್ ಕುಮಾರ್ ಕ್ವಾರ್ಟರ್ ಫೈನಲ್ ನಲ್ಲಿ ನಿರ್ಗಮನ, ಉಜ್ಬೇಕಿಸ್ತಾನದ ಬಖೋದಿರ್ ಜಲೋವ್ ವಿರುದ್ಧ ಸೋಲು 

ಭರವಸೆ ಮೂಡಿಸಿದ್ದ ಭಾರತದ ಬಾಕ್ಸರ್ ಸತೀಶ್ ಕುಮಾರ್ 91 ಕೆಜಿ ಬಾಕ್ಸಿಂಗ್ ವಿಭಾಗದಲ್ಲಿ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಸೋಲನುಭವಿಸಿದ್ದಾರೆ.

ಭಾರತದ ಬಾಕ್ಸರ್ ಸತೀಶ್ ಕುಮಾರ್ ಕ್ವಾರ್ಟರ್ ಫೈನಲ್ ನಲ್ಲಿ ನಿರ್ಗಮನ, ಉಜ್ಬೇಕಿಸ್ತಾನದ ಬಖೋದಿರ್ ಜಲೋವ್ ವಿರುದ್ಧ ಸೋಲು 
ಟೋಕಿಯೊದಲ್ಲಿ ಇಂದು ನಡೆದ ಕ್ವಾರ್ಟರ್ ಫೈನಲ್ ಪಂದ್ಯದ ದೃಶ್ಯ
Published On :

ಟೋಕಿಯೊ:ಭರವಸೆ ಮೂಡಿಸಿದ್ದ ಭಾರತದ ಬಾಕ್ಸರ್ ಸತೀಶ್ ಕುಮಾರ್ 91 ಕೆಜಿ ಬಾಕ್ಸಿಂಗ್ ವಿಭಾಗದಲ್ಲಿ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಸೋಲನುಭವಿಸಿದ್ದಾರೆ.

ಭಾನುವಾರ ನಡೆದ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ವಿಶ್ವದ ನಂಬರ್ 1 ಬಾಕ್ಸರ್ ಉಜ್ಬೇಕಿಸ್ತಾನದ ಬಖೋದಿರ್ ಜಲೋವ್ ವಿರುದ್ಧ ಸತೀಶ್ ಕುಮಾರ್ 0-5 ಅಂತರದಿಂದ ಸೋಲು ಕಂಡು ಆಟದಿಂದ ನಿರ್ಗಮಿಸಿದ್ದಾರೆ.

ಭಾರತದ ಹೆವಿವೇಟ್ ಬಾಕ್ಸರ್ ಸತೀಶ್ ಕುಮಾರ್ ಅವರಿಗೆ ಪ್ರಿ ಕ್ವಾರ್ಟರ್ ಫೈನಲ್ ಪಂದ್ಯದ ವೇಳೆ ತಲೆಗೆ ತೀವ್ರ ಗಾಯವಾಗಿ ಹೊಲಿಗೆ ಹಾಕಲಾಗಿತ್ತು. ಹೀಗಾಗಿ ಇಂದಿನ ಪಂದ್ಯದಲ್ಲಿ ಭಾಗವಹಿಸುವುದು ಅನುಮಾನವಾಗಿತ್ತು. ಆದರೆ ವೈದ್ಯರು ಅನುಮತಿ ನೀಡಿದ ಹಿನ್ನೆಲೆಯಲ್ಲಿ ಇಂದಿನ ಪಂದ್ಯದಲ್ಲಿ ಕೊನೆ ಕ್ಷಣದಲ್ಲಿ ಭಾಗವಹಿಸುವ ನಿರ್ಧಾರ ಕೈಗೊಂಡರು.

ಇದು ಸತೀಶ್ ಕುಮಾರ್ ಗೆ ಚೊಚ್ಚಲ ಒಲಿಂಪಿಕ್ ಗೇಮ್. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.