ಟೋಕಿಯೊ ಒಲಂಪಿಕ್ಸ್: ಸೆಮಿಫೈನಲ್‌ಗೆ ಪ್ರವೇಶಿಸಿದ ಭಾರತ ಮಹಿಳಾ ಹಾಕಿ ತಂಡಕ್ಕೆ ಕರ್ನಾಟಕ ರಾಜ್ಯಪಾಲರ ಅಭಿನಂದನೆ
ಜಪಾನ್ ರಾಜಧಾನಿ ಟೋಕಿಯೊದಲ್ಲಿ ನಡೆಯುತ್ತಿರುವ ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಸೆಮಿಫೈನಲ್ ಪ್ರವೇಶಿಸಿರುವ ಭಾರತ ಮಹಿಳೆಯರ ಹಾಕಿ ತಂಡವನ್ನು ಕರ್ನಾಟಕ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಅಭಿನಂದಿಸಿದ್ದಾರೆ.

ಬೆಂಗಳೂರು: ಜಪಾನ್ ರಾಜಧಾನಿ ಟೋಕಿಯೊದಲ್ಲಿ ನಡೆಯುತ್ತಿರುವ ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಸೆಮಿಫೈನಲ್ ಪ್ರವೇಶಿಸಿರುವ ಭಾರತ ಮಹಿಳೆಯರ ಹಾಕಿ ತಂಡವನ್ನು ಕರ್ನಾಟಕ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಅಭಿನಂದಿಸಿದ್ದಾರೆ.
ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಬಲಿಷ್ಠ ಆಸ್ಟ್ರೇಲಿಯಾ ತಂಡವನ್ನು 1-0 ಅಂತರ ಗೋಲುಗಳಿಂದ ಮಣಿಸಿ ಭಾರತ ಮಹಿಳೆಯರ ಹಾಕಿ ತಂಡ ಸೆಮಿಫೈನಲ್ ಗೆ ಪ್ರವೇಶಿಸಿದೆ. ಭಾರತ ಮಹಿಳೆಯರ ಹಾಕಿ ತಂಡದ ಈ ಅಭೂತಪೂರ್ವ ಸಾಧನೆಗೆ ಕರ್ನಾಟಕ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಅಭಿನಂದನೆ ತಿಳಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಒಲಂಪಿಕ್ಸ್‌ನಲ್ಲಿ ಮೊಟ್ಟ ಮೊದಲ ಬಾರಿಗೆ ಸೆಮಿಫೈನಲ್ ತಲುಪುವ ಮೂಲಕ ಇತಿಹಾಸ ಸೃಷ್ಟಿಸಿದ ಭಾರತೀಯ ಮಹಿಳಾ ಹಾಕಿ ತಂಡದ ಎಲ್ಲ ಪ್ರತಿಭಾನ್ವಿತ ಹೆಣ್ಣು ಮಕ್ಕಳಿಗೆ ನಾನು ಹೃತ್ಪೂರ್ವಕವಾಗಿ ಅಭಿನಂದಿಸುವೆ. ಟೋಕಿಯೋ ಒಲಿಂಪಿಕ್ಸ್ ಭಾರತೀಯರಿಗೆ ನಿಜಕ್ಕೂ ಸ್ಮರಣೀಯ ಎಂದು ಟ್ವೀಟಿಸಿದ್ದಾರೆ.
ಇನ್ನು ನಿನ್ನೆ ನಡೆದ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಭಾರತ ಪುರುಷರ ಹಾಕಿ ತಂಡ ಗ್ರೇಟ್ ಬ್ರಿಟನ್ ವಿರುದ್ಧ 3-1 ಗೋಲುಗಳಿಂದ ಮಣಿಸಿ ಸೆಮಿಫೈನಲ್ ಪ್ರವೇಶಿಸಿತ್ತು. ಈ ವೇಳೆ ಟ್ವೀಟ್ ಮಾಡಿ ಅಭಿನಂದಿಸಿದ್ದ ರಾಜ್ಯಪಾಲರು ಟೋಕಿಯೊ ಒಲಂಪಿಕ್ಸ್ ಕ್ರೀಡಾಕೂಟದ ಪುರುಷರ ಹಾಕಿ ವಿಭಾಗದಲ್ಲಿ ಕ್ವಾರ್ಟರ್‌ಫೈನಲ್ ನಲ್ಲಿ ಗೆಲುವು ಸಾಧಿಸಿ, ಸೆಮಿಫೈನಲ್ ಗೆ ಲಗ್ಗೆ ಇಟ್ಟ ಭಾರತ ತಂಡಕ್ಕೆ ಹೃದಯ ಪೂರ್ವಕ ಅಭಿನಂದನೆಗಳು. ಭಾರತ ತಂಡವು ಅಂತಿಮ ಪಂದ್ಯದಲ್ಲಿ ಗೆದ್ದು, ಕ್ರೀಡಾ ಲೋಕದಲ್ಲಿ ಭಾರತದ ಕೀರ್ತಿ ಪತಾಕೆ ಎತ್ತಿ ಹಿಡಿಯಲಿ ಎಂದು ಎಲ್ಲಾ ಭಾರತೀಯರ ಪರವಾಗಿ ಆಶಿಸುತ್ತೇನೆ ಎಂದು ಟ್ವೀಟಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


