ಕ್ರೀಡೆ

ಇತಿಹಾಸ ಬರೆದ ಭಾರತ ವನಿತೆಯರ ಹಾಕಿ ತಂಡ, ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಮೊದಲ ಬಾರಿಗೆ ಸೆಮಿ ಫೈನಲ್ ಪ್ರವೇಶ

ಜಪಾನ್ ರಾಜಧಾನಿ ಟೋಕಿಯೊದಲ್ಲಿ ನಡೆಯುತ್ತಿರುವ 32ನೇ ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಭಾರತಕ್ಕೆ ಮತ್ತೊಂದು ಪದಕ ಖಾತ್ರಿಯಾಗಿದ್ದು, ಭಾರತ ಮಹಿಳೆಯರ ಹಾಕಿ ತಂಡ ಆಸ್ಟ್ರೇಲಿಯಾವನ್ನು ಮಣಿಸಿ ಸೆಮಿಫೈನಲ್ ಗೇರಿದೆ.

ಇತಿಹಾಸ ಬರೆದ ಭಾರತ ವನಿತೆಯರ ಹಾಕಿ ತಂಡ, ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಮೊದಲ ಬಾರಿಗೆ ಸೆಮಿ ಫೈನಲ್ ಪ್ರವೇಶ
ಭಾರತ ಮಹಿಳೆಯರ ಹಾಕಿ ತಂಡ
Published On :

ಟೋಕಿಯೊ: ಜಪಾನ್ ರಾಜಧಾನಿ ಟೋಕಿಯೊದಲ್ಲಿ ನಡೆಯುತ್ತಿರುವ 32ನೇ ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಭಾರತಕ್ಕೆ ಮತ್ತೊಂದು ಪದಕ ಖಾತ್ರಿಯಾಗಿದ್ದು, ಭಾರತ ಮಹಿಳೆಯರ ಹಾಕಿ ತಂಡ ಆಸ್ಟ್ರೇಲಿಯಾವನ್ನು ಮಣಿಸಿ ಸೆಮಿಫೈನಲ್ ಗೇರಿದೆ.

ಇಂದು ನಡೆದ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಪ್ರಬಲ ಆಸ್ಟ್ರೇಲಿಯಾ ವನಿತೆಯರ ತಂಡದ ವಿರುದ್ಧ ಭಾರತದ ವನಿತೆಯರ ತಂಡ 1-0  ಗೋಲಿನ ಅಂತರದಲ್ಲಿ ವಿರೋಚಿತ ಗೆಲುವು ದಾಖಲಿಸಿ, ಸೆಮಿಫೈನಲ್ ಪ್ರವೇಶ ಮಾಡಿದೆ. ಪಂದ್ಯದ ಎರಡನೇ ಕ್ವಾರ್ಟರ್ ನಲ್ಲಿ ಭಾರತ ಮಹಿಳಾ ಹಾಕಿ ತಂಡದ ಆಟಗಾರ್ತಿ ಗುರ್ಜಿತ್ ಕೌರ್ ಬಾರಿಸಿದ ಗೋಲ್ ಸಹಾಯದಿಂದಲೇ ಆಸ್ಟ್ರೇಲಿಯಾ ತಂಡವನ್ನು ಭಾರತ ಮಹಿಳಾ ತಂಡ ಸದೆಬಡಿಯಿತು.

ಈ ಮೂಲಕ ಒಲಿಂಪಿಕ್ಸ್ ಇತಿಹಾಸದಲ್ಲಿಯೇ ಇದೇ ಮೊದಲ ಬಾರಿಗೆ ಭಾರತೀಯ ವನಿತೆಯರ ಹಾಕಿ ತಂಡ ಸೆಮಿಫೈನಲ್ ಪ್ರವೇಶಿಸಿದೆ. ಇತಿಹಾಸದಲ್ಲಿಯೇ ಇದುವರೆಗೂ ಭಾರತೀಯ ವನಿತೆಯರ ಹಾಕಿ ತಂಡ ಯಾವುದೇ ಒಲಿಂಪಿಕ್ಸ್‌ನಲ್ಲಿಯೂ ಸೆಮಿಫೈನಲ್ ಹಂತವನ್ನು ಪ್ರವೇಶಿಸುವಲ್ಲಿ ಯಶಸ್ವಿಯಾಗಿರಲಿಲ್ಲ. ಆದರೆ ಇದೇ ಮೊದಲ ಬಾರಿಗೆ ಒಲಿಂಪಿಕ್ಸ್‌ನಲ್ಲಿ ಭಾರತ ವನಿತೆಯರ ಹಾಕಿ ತಂಡ ಸೆಮಿಫೈನಲ್ ಪ್ರವೇಶಿಸಿದ್ದು ಎಲ್ಲೆಡೆ ದೊಡ್ಡ ಮಟ್ಟದ ಪ್ರಶಂಸೆ ವ್ಯಕ್ತವಾಗುತ್ತಿದೆ.

ಈ ಹಿಂದೆ ಪೂಲ್ ಹಂತದ ಮೊದಲ 3 ಪಂದ್ಯಗಳಲ್ಲಿ ಸತತವಾಗಿ ಸೋಲುವುದರ ಮೂಲಕ ಭಾರೀ ದೊಡ್ಡ ಮಟ್ಟದ ನಿರಾಸೆಯನ್ನು ಹುಟ್ಟುಹಾಕಿದ್ದ ಭಾರತೀಯ ವನಿತೆಯರ ಹಾಕಿ ತಂಡ ಕ್ರೀಡಾಕೂಟದಲ್ಲಿ ನಿರಾಶೆ ಅನುಭವಿಸಲಿದೆ ಎಂದು ಟೀಕಿಸಲಾಗಿತ್ತು. ಆದರೆ ಬಳಿಕದ 2 ಪಂದ್ಯಗಳಲ್ಲಿ ಫೀನಿಕ್ಸ್ ನಂತೆ ಎದ್ದುಬಂದ ವನಿತೆಯರ ತಂಡ ಕ್ವಾರ್ಟರ್ ಫೈನಲ್ ಪ್ರವೇಶ ಮಾಡಿತು. ಇಂದು ಕ್ವಾರ್ಟರ್ ಫೈನಲ್ ನಲ್ಲಿ ಬಲಿಷ್ಠ ಆಸಿಸ್ ತಂಡವನ್ನೂ ಮಣಿಸಿ ಸೆಮೀಸ್ ಹಂತಕ್ಕೇರಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.