ಕ್ರೀಡೆ

ಟೊಕಿಯೊ ಒಲಂಪಿಕ್ಸ್: ಮೊದಲ ಪ್ರಯತ್ನದಲ್ಲೇ ಫೈನಲ್ ಪ್ರವೇಶಿಸಿದ ಜಾವೆಲಿನ್ ಥ್ರೋವರ್ ನೀರಜ್ ಚೋಪ್ರಾ

ಟೋಕಿಯೊ ಒಲಿಂಪಿಕ್ಸ್ ಪುರುಷರ ಜಾವೆಲಿನ್ ಥ್ರೋ (ಈಟಿ ಎಸೆತ) ನಲ್ಲಿ ಸ್ಪರ್ಧಿಸುತ್ತಿರುವ ಭಾರತದ ಭರವಸೆಯ ಅಥ್ಲೀಟ್ ನೀರಜ್ ಚೋಪ್ರಾ ಫೈನಲ್‌ಗೆ ಪ್ರವೇಶ ಅರ್ಹತೆ ಪಡೆದುಕೊಂಡಿದ್ದಾರೆ.

ಟೊಕಿಯೊ ಒಲಂಪಿಕ್ಸ್: ಮೊದಲ ಪ್ರಯತ್ನದಲ್ಲೇ ಫೈನಲ್ ಪ್ರವೇಶಿಸಿದ ಜಾವೆಲಿನ್ ಥ್ರೋವರ್ ನೀರಜ್ ಚೋಪ್ರಾ
ನೀರಜ್ ಚೋಪ್ರಾ
Published On :

ಟೊಕಿಯೊ: ಟೋಕಿಯೊ ಒಲಿಂಪಿಕ್ಸ್ ಪುರುಷರ ಜಾವೆಲಿನ್ ಥ್ರೋ (ಈಟಿ ಎಸೆತ) ನಲ್ಲಿ ಸ್ಪರ್ಧಿಸುತ್ತಿರುವ ಭಾರತದ ಭರವಸೆಯ ಅಥ್ಲೀಟ್ ನೀರಜ್ ಚೋಪ್ರಾ ಫೈನಲ್‌ಗೆ ಪ್ರವೇಶ ಅರ್ಹತೆ ಪಡೆದುಕೊಂಡಿದ್ದಾರೆ. 

ಮೊದಲ ಪ್ರಯತ್ನದಲ್ಲೇ ಚೋಪ್ರಾ 86.65 ಮೀಟರ್ ಸಾಧನೆಯೊಂದಿಗೆ ಫೈನಲ್‌ ಹಂತಕ್ಕೆ ನೇರ ಪ್ರವೇಶ ಪಡೆದುಕೊಂಡಿದ್ದಾರೆ. ಅಥ್ಲೆಟಿಕ್ಸ್ ವಿಭಾಗದ ಪುರುಷರ ಜಾವೆಲಿನ್ ಥ್ರೋನಲ್ಲಿ ಚೋಪ್ರಾ ಗ್ರೂಪ್‌ 'ಎ'ಯಲ್ಲಿದ್ದಾರೆ.

ಗ್ರೂಪ್​​ 'ಎ'ನಲ್ಲಿ ಸ್ಪರ್ಧಿಸುತ್ತಿರುವ ಚೋಪ್ರಾ ಪುರುಷರ ಲಾಂಗ್ ಥ್ರೋನ್​ ಕ್ವಾಲಿಫಿಕೇಷನ್ ವಿಭಾಗದಲ್ಲಿ ಫೈನಲ್​ಗೆ ಅರ್ಹತೆ ಪಡೆದಿದ್ದಾರೆ. 15ನೇ ಪೊಸಿಷನ್​​ನಲ್ಲಿ ಲಾಂಗ್​ ಥ್ರೋನ್ ಮಾಡಿದ ಅವರು ಸುಮಾರು 86.65 ಮೀಟರ್​ ಜಾವೆಲಿನ್​ ಥ್ರೋ ಮಾಡುವ ಮೂಲಕ ನೇರವಾಗಿ ಫೈನಲ್​ಗೆ ಲಗ್ಗೆ ಇಟ್ಟರು.

ಈ ಹಿಂದೆ, ಫಿನ್​ಲ್ಯಾಂಡ್​​ನ ಲಸ್ಸಿ ಎಟೆಲಾಟಾಲೋ ಇದೇ ರೀತಿ ಮೊದಲ ಪ್ರಯತ್ನದಲ್ಲಿಯೇ ಫೈನಲ್​ಗೆ ಅರ್ಹತೆ ಪಡೆದಿದ್ದರು. ಜಾವೆಲಿನ್​ ಥ್ರೋ ಫೈನಲ್ ಪಂದ್ಯ ಮೂರು ದಿನಗಳ ನಂತರ ಅಥವಾ ಆಗಸ್ಟ್ 7ರಂದು ನಡೆಯಲಿದೆ.​

ಇದಕ್ಕೂ ಮೊದಲು ಮಂಗಳವಾರ ಭಾರತೀಯ ಮಹಿಳಾ ಜಾವೆಲಿನ್ ಥ್ರೋ ಸ್ಪರ್ಧಿ ಅನ್ನು ರಾಣಿ ಫೈನಲ್​​ಗೆ ಅರ್ಹತೆ ಪಡೆಯಲು ವಿಫಲರಾಗಿದ್ದರು. ಈಗ ನೀರಜ್ ಚೋಪ್ರಾ ಅರ್ಹತೆ ಪಡೆದಿದ್ದು, ಪದಕದ ಭರವಸೆ ಮೂಡಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.