ಪ್ಯಾರಾಲಂಪಿಕ್ಸ್ ನಲ್ಲಿ ಬೆಳ್ಳಿ ಗೆದ್ದ ಭಾರತದ ಭಾವೀನ ಪಟೇಲ್ಗೆ 3 ಕೋಟಿ ರೂ. ನಗದು ಬಹುಮಾನ ಘೋಷಣೆ!
ಟೋಕಿಯೊದಲ್ಲಿ ನಡೆಯುತ್ತಿರುವ ಪ್ಯಾರಾಲಿಂಪಿಕ್ಸ್ನಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿ ಬೆಳ್ಳಿ ಪದಕ ಗೆದ್ದ ಟೇಬಲ್ ಟೆನಿಸ್ ಆಟಗಾರ್ತಿ ಭಾವೀನಾ ಪಟೇಲ್ ಅವರನ್ನು ಗುಜರಾತ್ ಮುಖ್ಯಮಂತ್ರಿ ವಿಜಯ್ ರೂಪಾನಿ ಅಭಿನಂದಿಸಿದ್ದಾರೆ.

ಅಹಮದಾಬಾದ್: ಟೋಕಿಯೊದಲ್ಲಿ ನಡೆಯುತ್ತಿರುವ ಪ್ಯಾರಾಲಿಂಪಿಕ್ಸ್ನಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿ ಬೆಳ್ಳಿ ಪದಕ ಗೆದ್ದ ಟೇಬಲ್ ಟೆನಿಸ್ ಆಟಗಾರ್ತಿ ಭಾವೀನಾ ಪಟೇಲ್ ಅವರನ್ನು ಗುಜರಾತ್ ಮುಖ್ಯಮಂತ್ರಿ ವಿಜಯ್ ರೂಪಾನಿ ಅಭಿನಂದಿಸಿದ್ದಾರೆ.
ಅಲ್ಲದೆ ರಾಜ್ಯ ಸರ್ಕಾರದಡಿ ದಿವ್ಯಾಂಗ್ ಖೇಲ್ ಪ್ರತಿಭಾ ಪ್ರೊತ್ಸಾಹನ್ ಪುರಸ್ಕಾರ್ ಯೋಜನೆಯಡಿ ಭಾವೀನಾ ಪಟೇಲ್ ಗೆ 3 ಕೋಟಿ ರೂ. ರೂಪಾಯಿ ನಗದು ಬಹುಮಾನ ನೀಡಲಾಗುವುದು ಎಂದು ತಿಳಿಸಿದ್ದಾರೆ.
ಗುಜರಾತ್ ನ ವಡ್ ನಗರ್ ಭಾವಿನಾ ಸ್ವಂತ ಊರು. ಆಕೆ 12 ತಿಂಗಳು ಮಗುವಾಗಿದ್ದಾಗ ಪೋಲಿಯೊ ಪೀಡಿತರಾಗಿದ್ದರು. ಆದರೂ ಇದರಿಂದ ಸ್ಥೈರ್ಯ ಕಳೆದುಕೊಳ್ಳದ ಪದವಿ ವ್ಯಾಸಂಗ ಸಮಯದಲ್ಲಿ ಭಾವೀನಾ ಟೇಬಲ್ ಟೆನಿಸ್ ಆಡಲು ಪ್ರಾರಂಭಿಸಿದಳು.
ಇಲ್ಲಿಯವರೆಗೂ ಹಲವು ಅಂತಾರಾಷ್ಟ್ರೀಯ ಪಂದ್ಯಾವಳಿಗಳಲ್ಲಿ ಆಡಿರುವ ಭಾವೀನಾ ಐದು ಚಿನ್ನದ ಪದಕ ಹಾಗೂ 13 ಬೆಳ್ಳಿ ಪದಕಗಳನ್ನು ಗೆದ್ದಿದ್ದಾರೆ. ಅವರು ಆಡಿದ ಮೊದಲ ಪ್ಯಾರಾಲಿಂಪಿಕ್ಸ್ನಲ್ಲಿ ಬೆಳ್ಳಿ ಪದಕ ಮುಡಿಗೇರಿಸಿಕೊಂಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


