ಟೋಕಿಯೊ ಪ್ಯಾರಾಲಿಂಪಿಕ್ಸ್: ಚಿನ್ನ ಗೆದ್ದ ಸುಮಿತ್ ಜೊತೆಗೆ ಫೋನ್ ನಲ್ಲಿ ಮಾತನಾಡಿದ ಪ್ರಧಾನಿ ಮೋದಿ
ಟೋಕಿಯೊ ಪ್ಯಾರಾಲಿಂಪಿಕ್ಸ್ ನಲ್ಲಿ ಜಾವೆಲಿನ್ ಥ್ರೋನಲ್ಲಿ ಚಿನ್ನದ ಪದಕ ವಿಜೇತ ಭಾರತದ ಸುಮಿತ್ ಅಂತಿಲ್ ಜೊತೆಗೆ ಪ್ರಧಾನಿ ನರೇಂದ್ರ ಮೋದಿ ಸೋಮವಾರ ಫೋನ್ ನಲ್ಲಿ ಮಾತನಾಡಿದ್ದಾರೆ. ಸುಮಿತ್ ಅವರ ಉತ್ಸಾಹಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ನವದೆಹಲಿ: ಟೋಕಿಯೊ ಪ್ಯಾರಾಲಿಂಪಿಕ್ಸ್ ನಲ್ಲಿ ಜಾವೆಲಿನ್ ಥ್ರೋನಲ್ಲಿ ಚಿನ್ನದ ಪದಕ ವಿಜೇತ ಭಾರತದ ಸುಮಿತ್ ಅಂತಿಲ್ ಜೊತೆಗೆ ಪ್ರಧಾನಿ ನರೇಂದ್ರ ಮೋದಿ ಸೋಮವಾರ ಫೋನ್ನಲ್ಲಿ ಮಾತನಾಡಿದ್ದಾರೆ. ಸುಮಿತ್ ಅವರ ಉತ್ಸಾಹಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಸುಮಿತ್ ಇಡೀ ದೇಶಕ್ಕೆ ಹೆಮ್ಮೆಯನ್ನುಂಟು ಮಾಡಿದ್ದಾರೆ. ಅವರ ಪ್ರದರ್ಶನ ನೋಡಿದ ನಂತರ ಯುವ ಪೀಳಿಗೆ ಸ್ಫೂರ್ತಿಗೊಂಡಿರುವುದಾಗಿ ಪ್ರಧಾನಿ ಸುಮಿತ್ ಅವರಿಗೆ ಹೇಳಿದ್ದಾರೆ.
ಸುಮಿತ್ ಅಂತಿಲ್ 68.55 ಮೀಟರ್ ದೂರಕ್ಕೆ ಜಾವೆಲಿನ್ ಥ್ರೋ ಎಸೆಯುವ ಮೂಲಕ ಚಿನ್ನಕ್ಕೆ ಮುತ್ತಿಟ್ಟಿದ್ದರು.ನಂತರ ಮಾತನಾಡಿದ ಅವರು, ತನ್ನ ಪ್ರದರ್ಶನದಿಂದ ತೃಪ್ತಿಯಾಗಿದೆ ಆದರೆ, 70 ಮೀಟರ್ ದೂರಕ್ಕೆ ಜಾವೆಲಿನ್ ಥ್ರೋ ಎಸೆಯಲು ಬಯಸಿದ್ದಾಗಿ ತಿಳಿಸಿದರು.
ಇದಕ್ಕೂ ಮುನ್ನ ಟ್ವೀಟ್ ಮಾಡಿದ್ದ ಪ್ರಧಾನಿ ಮೋದಿ, ಪ್ರತಿಷ್ಠಿತ ಚಿನ್ನದ ಪದಕ ಗೆದಿದ್ದಕ್ಕೆ ಸುಮಿತ್ ಅವರಿಗೆ ಅಭಿನಂದನೆ ಸಲ್ಲಿಸಿದ್ದರು. ನಿಮ್ಮ ಮುಂದಿನ ಭವಿಷ್ಯಕ್ಕೆ ಒಳಿತಾಗಲಿ ಎಂದು ಹಾರೈಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


