BWF ವಿಶ್ವ ಚಾಂಪಿಯನ್‌ಶಿಪ್ ಫೈನಲ್: ಭಾರತದ ಕಿಡಂಬಿ ಶ್ರೀಕಾಂತ್ ಗೆ ಸೋಲು, ಬೆಳ್ಳಿಗೆ ತೃಪ್ತಿ!
ವಿಶ್ವ ಚಾಂಪಿಯನ್‌ಶಿಪ್ ಟೈಟಲ್ ಮುಡಿಗೇರಿಸಿಕೊಳ್ಳುವ ಸುವರ್ಣಾವಕಾಶವನ್ನು ಭಾರತದ ಕಿಡಂಬಿ ಶ್ರೀಕಾಂತ್ ಅವರು ಸ್ವಲ್ಪದರಲ್ಲಿ ಕಳೆದುಕೊಂಡಿದ್ದಾರೆ.

ಹುಯೆಲ್ವಾ(ಸ್ಪೇನ್): ವಿಶ್ವ ಚಾಂಪಿಯನ್‌ಶಿಪ್ ಟೈಟಲ್ ಮುಡಿಗೇರಿಸಿಕೊಳ್ಳುವ ಸುವರ್ಣಾವಕಾಶವನ್ನು ಭಾರತದ ಕಿಡಂಬಿ ಶ್ರೀಕಾಂತ್ ಅವರು ಸ್ವಲ್ಪದರಲ್ಲಿ ಕಳೆದುಕೊಂಡಿದ್ದಾರೆ.
ರೋಚಕವಾಗಿ ನಡೆದ ಫೈನಲ್ ಪಂದ್ಯದಲ್ಲಿ ವಿಶ್ವದ 22ನೇ ಶ್ರೇಯಾಂಕದ ಆಟಗಾರ ಸಿಂಗಾಪುರದ ಲೊ ಕಿಯೊನ್ ಯೊ ಎದುರು 15-21, 20-22 ನೇರ ಸೆಟ್ ಗಳಿಂದ ಕಿಡಂಬಿ ಪರಾಭವಗೊಂಡರು.
42 ನಿಮಿಷಗಳ ಕಾಲ ನಡೆದ ಪಂದ್ಯದಲ್ಲಿ 15ನೇ ಶ್ರೇಯಾಂಕದ ಶ್ರೀಕಾಂತ್ ಭಾರಿ ಹೋರಾಟ ನಡೆಸಿದರಾದರೂ ನಿರ್ಣಾಯಕ ಕ್ಷಣಗಳಲ್ಲಿ ಎದುರಾಳಿ ಮೇಲುಗೈ ಸಾಧಿಸಿದರು. ಇದರಿಂದ ಶ್ರೀಕಾಂತ್ ರಜತ ಪದಕಕ್ಕೆ ತೃಪ್ತಿಪಟ್ಟುಕೊಳ್ಳಬೇಕಾಯಿತು.
ವೃತ್ತಿ ಜೀವನದ ಮೊದಲ ಪ್ರಶಸ್ತಿಯನ್ನು ಕಿಯೋನ್ ಗೆದ್ದುಕೊಂಡರು. ಈ ಸಾಧನೆ ಮಾಡಿದ ಮೊದಲ ಸಿಂಗಾಪುರದ ಶಟ್ಲರ್ ಎಂಬ ಇತಿಹಾಸ ನಿರ್ಮಿಸಿದರು.
ಆದರೆ, ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ಭಾರತದಿಂದ ಚಿನ್ನ ಗೆದ್ದ ಏಕೈಕ ಭಾರತೀಯ ಆಟಗಾರ್ತಿ ಪಿವಿ ಸಿಂಧು. ಈ ಟೂರ್ನಿಯಲ್ಲಿ ಸತತ ಎರಡು ಬಾರಿ ಬೆಳ್ಳಿ ಗೆದ್ದಿರುವ ಸಿಂಧು, 2019ರಲ್ಲಿ ವಿಜೇತೆಯಾಗಿ ಇತಿಹಾಸ ನಿರ್ಮಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


