ಟೋಕಿಯೊ ಒಲಿಂಪಿಕ್ಸ್: ಆರಂಭದಲ್ಲೇ ಮುಗ್ಗರಿಸಿದ ಸಾನಿಯಾ ಮಿರ್ಜಾ ಮತ್ತು ಅಂಕಿತಾ ರೈನಾ
ಭಾರತದ ಭರವಸೆಯಾಗಿದ್ದ ಟೆನಿಸ್ ತಾರೆ ಸಾನಿಯಾ ಮಿರ್ಜಾ ಹಾಗೂ ಅಂಕಿತಾ ರೈನಾ ಜೋಡಿಯು ಟೋಕಿಯೊ ಒಲಂಪಿಕ್ಸ್ನಲ್ಲಿ ನಿರಾಸೆ ಮೂಡಿಸಿದ್ದಾರೆ.

ಟೋಕಿಯೊ: ಭಾರತದ ಭರವಸೆಯಾಗಿದ್ದ ಟೆನಿಸ್ ತಾರೆ ಸಾನಿಯಾ ಮಿರ್ಜಾ ಹಾಗೂ ಅಂಕಿತಾ ರೈನಾ ಜೋಡಿಯು ಟೋಕಿಯೊ ಒಲಂಪಿಕ್ಸ್ನಲ್ಲಿ ನಿರಾಸೆ ಮೂಡಿಸಿದ್ದಾರೆ.
ಸಾನಿಯಾ ಮಿರ್ಜಾ ಮತ್ತು ಅಂಕಿತಾ ರೈನಾ ಮಹಿಳಾ ಟೆನಿಸ್ ಡಬಲ್ಸ್ ವಿಭಾಗದಲ್ಲಿ ಉಕ್ರೇನ್ ದೇಶದ ಕಿಚೆನೊಕ್ ಸಹೋದರಿಯರ ವಿರುದ್ಧ 6-0, 6-7, 8-10 ಅಂತರದಿಂದ ಸೋಲನ್ನು ಅನುಭವಿಸಿದ್ದಾರೆ.
ಇದೇ ಮೊದಲ ಬಾರಿಗೆ ಜೋಡಿಯಾಗಿ ಕಣಕ್ಕಿಳಿದಿದ್ದ ಸಾನಿಯಾ ಮಿರ್ಜಾ ಮತ್ತು ಅಂಕಿತಾ ರೈನಾ ಮೊದಲ ಸೆಟ್ನಲ್ಲಿ ಅದ್ಭುತ ಪ್ರದರ್ಶನವನ್ನು ನೀಡಿದರು. ಮೊದಲ ಸೆಟ್ನಲ್ಲಿ ಸಾನಿಯಾ ಮಿರ್ಜಾ ಮತ್ತು ಅಂಕಿತಾ ರೈನಾ ಎದುರಾಳಿ ಉಕ್ರೇನ್ ತಂಡದ ಕಿಚೆನೊಕ್ ಸಹೋದರಿಯರ ವಿರುದ್ಧ 6-0 ಅಂತರದಿಂದ ಮುನ್ನಡೆ ಕಾಯ್ದುಕೊಂಡಿದ್ದರು.
ಆದರೆ ಎರಡನೇ ಮತ್ತು ಮೂರನೇ ಸೆಟ್ನಲ್ಲಿ ಕಿಚೆನೊಕ್ ಸಹೋದರಿಯರ ವಿರುದ್ಧ ಮಂಕಾದ ಸಾನಿಯಾ ಮಿರ್ಜಾ ಮತ್ತು ಅಂಕಿತಾ ರೈನಾ 6-7 ಮತ್ತು 8-10 ಅಂತರದಿಂದ ಸೋಲನ್ನು ಅನುಭವಿಸಿದರು.
ಈ ಮೂಲಕ ನಾಲ್ಕನೇ ಬಾರಿ ಒಲಿಂಪಿಕ್ಸ್ ಪ್ರವೇಶಿಸಿರುವ ಸಾನಿಯಾ ಮಿರ್ಜಾ ತಮ್ಮ ಮೊದಲನೇ ಪಂದ್ಯದಲ್ಲಿಯೇ ಮುಗ್ಗರಿಸಿದ್ದಾರೆ. ಅತ್ತ ರೋಯಿಂಗ್ ಪುರುಷರ ವಿಭಾಗದಲ್ಲಿ ಭಾರತದ ಕ್ರೀಡಾಪಟುಗಳಾದ ಅರ್ಜುನ್ ಮತ್ತು ಅರವಿಂದ್ ಜಯಸಾಧಿಸಿದ್ದು ಸೆಮಿಫೈನಲ್ ಪ್ರವೇಶಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


