ಟೋಕಿಯೊ ಒಲಂಪಿಕ್ಸ್: ಡೇನಿಲ್ ಮೆಡ್ವೆಡೆವ್ ವಿರುದ್ಧ ಸೋತ ನಗಾಲ್
ಭಾರತದ ಭರವಸೆಯ ಟೆನಿಸ್ ಪಟು ಭಾರತದ ಸುಮಿತ್ ನಗಾಲ್, ಒಲಂಪಿಕ್ಸ್ ಕ್ರೀಡಾಕೂಟದ ಪುರುಷರ ವಿಭಾಗದ ಸಿಂಗಲ್ಸ್ ನ ಎರಡನೇ ಸುತ್ತಿನಲ್ಲಿ ಸೋಲಿನ ಕಹಿ ಅನುಭವಿಸಿದ್ದಾರೆ.

ಟೋಕಿಯೊ: ಭಾರತದ ಭರವಸೆಯ ಟೆನಿಸ್ ಪಟು ಭಾರತದ ಸುಮಿತ್ ನಗಾಲ್, ಒಲಂಪಿಕ್ಸ್ ಕ್ರೀಡಾಕೂಟದ ಪುರುಷರ ವಿಭಾಗದ ಸಿಂಗಲ್ಸ್ ನ ಎರಡನೇ ಸುತ್ತಿನಲ್ಲಿ ಸೋಲಿನ ಕಹಿ ಅನುಭವಿಸಿದ್ದಾರೆ.
ವಿಶ್ವ ಶ್ರೇಯಾಂಕದಲ್ಲಿ ಎರಡನೇ ಸ್ಥಾನದಲ್ಲಿರುವ ರಷ್ಯಾದ ಡೇನಿಲ್ ಮೆಡ್ವೆಡೆವ್ 6-2, 6-1ರಿಂದ ಯುವ ಆಟಗಾರ ಭಾರತದ ಸುಮಿತ್ ನಗಾಲ್ ಅವರನ್ನು ಎರಡು ನೇರ ಸೆಟ್ ಗಳಿಂದ ಪರಾಜಯಗೊಳಿಸಿ ಮುನ್ನಡೆದರು.
ವಿಶ್ವ ಶ್ರೇಯಾಂಕದಲ್ಲಿ 160 ಸ್ಥಾನದಲ್ಲಿರುವ ಸುಮಿತ್ ನಗಾಲ್, ಯಾವ ಹಂತದಲ್ಲಿಯೂ ಡೇನಿಲ್ ಗೆ ಸಮಬಲದ ಪೈಪೋಟಿ ನೀಡಲು ಸಾಧ್ಯವಾಗಲಿಲ್ಲ. ರಷ್ಯಾದ ಡೇನಿಲ್ ಮೆಡ್ವೆಡೆವ್, ಸುಮಿತ್ ಅವರನ್ನು 66 ನಿಮಿಷಗಳ ಆಟದಲ್ಲಿ ಪರಾಜಯಗೊಳಿಸಿ ಮೂರನೇ ಸುತ್ತು ಪ್ರವೇಶಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


