ಟೋಕಿಯೊ ಒಲಂಪಿಕ್ಸ್: 13ನೇ ವಯಸ್ಸಿಗೆ ಚಿನ್ನದ ಪದಕ ಗೆದ್ದ ಮೊಮಿಜಿ
ಟೋಕಿಯೊ ಒಲಂಪಿಕ್ಸ್‌ನಲ್ಲಿ ಜಪಾನ್‌ನ ಮೊಮಿಜಿ ನಿಶಿಯಾ ಅವರು ತೀವ್ರ ಸಂಚಲನ ಸೃಷ್ಟಿಸಿದ್ದಾರೆ. ಒಲಿಂಪಿಕ್ಸ್‌ನಲ್ಲಿ ಚಿನ್ನದ ಪದಕ ಗೆದ್ದ ಎರಡನೇ ಅತ್ಯಂತ ಕಿರಿಯ ವ್ಯಕ್ತಿ ಎಂಬ ದಾಖಲೆ ನಿರ್ಮಿಸಿದ್ದಾರೆ.

ಟೋಕಿಯೊ: ಟೋಕಿಯೊ ಒಲಂಪಿಕ್ಸ್‌ನಲ್ಲಿ ಜಪಾನ್‌ನ ಮೊಮಿಜಿ ನಿಶಿಯಾ ಅವರು ತೀವ್ರ ಸಂಚಲನ ಸೃಷ್ಟಿಸಿದ್ದಾರೆ. ಒಲಿಂಪಿಕ್ಸ್‌ನಲ್ಲಿ ಚಿನ್ನದ ಪದಕ ಗೆದ್ದ ಎರಡನೇ ಅತ್ಯಂತ ಕಿರಿಯ ವ್ಯಕ್ತಿ ಎಂಬ ದಾಖಲೆ ನಿರ್ಮಿಸಿದ್ದಾರೆ.
ಟೋಕಿಯೊ ಒಲಂಪಿಕ್ಸ್‌ನಲ್ಲಿ ಹೊಸದಾಗಿ ಆರಂಭಿಸಲಾದ ಸ್ಕೇಟ್ ಬೋರ್ಡಿಂಗ್‌ನಲ್ಲಿ ನಿಶಿಯಾ ಚಿನ್ನ ಗೆದ್ದಿದ್ದಾರೆ ಟ್ರಿಕ್ಸ್ ವಿಭಾಗದಲ್ಲಿ 15.26 ಅಂಕಗಳಿಸಿರುವ ನಿಶಿಯಾ ಅವರ ವಯಸ್ಸು ಕೇವಲ 13 ವರ್ಷ.
ಮೊಮಿಜಿ ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಚಿನ್ನದ ಪದಕ ಗೆಲ್ಲುವ ಮೂಲಕ ಮೊದಲ ಮಹಿಳಾ ಸ್ಕೇಟ್ ಬೋರ್ಡಿಂಗ್ ಚಾಂಪಿಯನ್ ಆಗಿ ಹೊರಹೊಮ್ಮಿದ್ದಾರೆ.
ಇದಕ್ಕೂ ಮೊದಲು ಬ್ರೆಜಿಲ್‌ನ ರೆಸಾ ಲೀಲ್ ಚಿನ್ನದ ಪದಕ ಗೆದ್ದ ಅತ್ಯಂತ ಕಿರಿಯ ವ್ಯಕ್ತಿಯಾಗಿದ್ದರು. ಅವರು 13 ವರ್ಷ 203 ದಿನಗಳ ವಯಸ್ಸಿನಲ್ಲಿ ಈ ಸಾಧನೆ ಮಾಡಿದ್ದರು.
ಅಮೆರಿಕಾದ ಡೈವರ್ ಮಾರ್ಜೋರಿ ಗೆಸ್ಟ್ರಿಂಗ್ 1936ರ ಬರ್ಲಿನ್ ಕ್ರೀಡಾಕೂಟದಲ್ಲಿ 13 ವರ್ಷ 168 ದಿನಗಳ ವಯಸ್ಸಿನಲ್ಲಿ ಒಲಿಂಪಿಕ್ ಪದಕ ಗೆದ್ದ ಅತ್ಯಂತ ಕಿರಿಯ ವ್ಯಕ್ತಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


