ಟೋಕಿಯೊ ಒಲಂಪಿಕ್ಸ್: ಭಾರತದ ಬಾಕ್ಸರ್ ಲೊವ್ಲಿನಾಗೆ ಜಯ
ಟೋಕಿಯೊ ಒಲಂಪಿಕ್ಸ್ 2020 ರ ಮಹಿಳಾ ವಿಭಾಗದ 69 ಕೆ.ಜಿ ವಿಭಾಗದಲ್ಲಿ ಭಾರತದ ಬಾಕ್ಸರ್ ಲೊವ್ಲಿನಾ ಬೊರ್ಗೊಹೈನ್ ಪ್ರೀ ಕ್ವಾರ್ಟರ್ ಫೈನಲ್ಸ್ ಪಂದ್ಯದಲ್ಲಿ ಜಯ ಸಾಧಿಸಿ, ಎಂಟರ ಹಂತ ತಲುಪಿದ್ದಾರೆ.

ಟೋಕಿಯೊ: ಟೋಕಿಯೊ ಒಲಂಪಿಕ್ಸ್ 2020 ರ ಮಹಿಳಾ ವಿಭಾಗದ 69 ಕೆ.ಜಿ ವಿಭಾಗದಲ್ಲಿ ಭಾರತದ ಬಾಕ್ಸರ್ ಲೊವ್ಲಿನಾ ಬೊರ್ಗೊಹೈನ್ ಪ್ರೀ ಕ್ವಾರ್ಟರ್ ಫೈನಲ್ಸ್ ಪಂದ್ಯದಲ್ಲಿ ಜಯ ಸಾಧಿಸಿ, ಎಂಟರ ಹಂತ ತಲುಪಿದ್ದಾರೆ.
ಎರಡು ಬಾರಿ ವಿಶ್ವ ಚಾಂಪಿಯನ್ ಶಿಪ್ ಕಂಚಿನ ಪದಕ ವಿಜೇತ ಬೋರ್ಗೊಹೈನ್ 3-2 ಅಂತರದಿಂದ ಜರ್ಮನಿಯ ನಾಡಿನ್ ಅವರನ್ನು ಮಣಿಸಿದರು. ಶುಕ್ರವಾರ ನಡೆಯಲಿರುವ ಕ್ವಾರ್ಟರ್ ಫೈನಲ್ ನಲ್ಲಿ ಲೋವ್ಲಿನಾ ಈಗ ಚೀನಾದ ತೈಪೆಯ ನಿಯಾನ್-ಚಿನ್ ಚೆನ್ ಅವರನ್ನು ಎದುರಿಸಲಿದ್ದಾರೆ.
ಮೊದಲ ಗೇಮ್ ನಲ್ಲಿ ಭಾರತದ ಆಟಗಾರ್ತಿ ನಿರಾಸೆ ಅನುಭವಿಸಿದರೂ, ನಂತರದ ಮೂರು ಸುತ್ತುಗಳಲ್ಲಿ ಲೊವ್ಲಿನಾ ಎದುರಾಳಿಗೆ ಭರ್ಜರಿ ಪಂಚ್ ನೀಡಿ ತೀರ್ಪುಗಾರರ ಮನ ಗೆಲ್ಲುವಲ್ಲಿ ಸಫಲರಾದರು. ಐದನೇ ಗೇಮ್ ನಲ್ಲಿ ಸೋತರೂ ಪಂದ್ಯ ಗೆದ್ದು ಬೀಗಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


