ಟೋಕಿಯೊ ಒಲಂಪಿಕ್ಸ್ ಬಾಕ್ಸಿಂಗ್: ಕ್ವಾರ್ಟರ್ ಫೈನಲ್ ಪ್ರವೇಶಿಸಿದ ಸತೀಶ್ ಕುಮಾರ್
ಭಾರತದ ಬಾಕ್ಸರ್ ಸತೀಶ್ ಕುಮಾರ್ ಅವರು ಬಾಕ್ಸಿಂಗ್ (91 ಕೆಜಿ) ವಿಭಾಗದಲ್ಲಿ ಕ್ವಾರ್ಟರ್ ಫೈನಲ್ ಪ್ರವೇಶ ಮಾಡುವುದರ ಮೂಲಕ ತಮ್ಮ ಮೊದಲನೇ ಒಲಿಂಪಿಕ್ಸ್‌ನಲ್ಲಿಯೇ ಸದ್ದು ಮಾಡುತ್ತಿದ್ದಾರೆ.

ಟೊಕಿಯೊ: ಭಾರತದ ಬಾಕ್ಸರ್ ಸತೀಶ್ ಕುಮಾರ್ ಅವರು ಬಾಕ್ಸಿಂಗ್ (91 ಕೆಜಿ) ವಿಭಾಗದಲ್ಲಿ ಕ್ವಾರ್ಟರ್ ಫೈನಲ್ ಪ್ರವೇಶ ಮಾಡುವುದರ ಮೂಲಕ ತಮ್ಮ ಮೊದಲನೇ ಒಲಿಂಪಿಕ್ಸ್‌ನಲ್ಲಿಯೇ ಸದ್ದು ಮಾಡುತ್ತಿದ್ದಾರೆ.
ಜಮೈಕಾದ ರಿಕಾರ್ಡೊ ಬ್ರೌನ್ ಅವರನ್ನು 4-1 ಅಂತರದಿಂದ ಸೋಲಿಸುವ ಮೂಲಕ ಭಾರತದ ಬಾಕ್ಸರ್ ಸತೀಶ್ ಕುಮಾರ್ ಅವರು 91 ಕೆಜಿ ವಿಭಾಗದಲ್ಲಿ ಕ್ವಾರ್ಟರ್ ಫೈನಲ್ ಪ್ರವೇಶಿಸಿದ್ದಾರೆ.
ಇನ್ನೊಂದು ಪಂದ್ಯದಲ್ಲಿ ಸತೀಶ್ ಅವರು ಗೆಲುವು ಸಾಧಿಸಿದರೆ ಭಾರತಕ್ಕೆ ಪದಕ ಸಿಗಲಿದೆ. 2018ರ ಕಾಮನ್ ವೆಲ್ತ್ ಗೇಮ್ಸ್‌ನಲ್ಲಿ ರಜತ ಪದಕ ಗೆದ್ದಿದ್ದ ಸತೀಶ್ ಕುಮಾರ್ ಮೇಲೆ ಕ್ರೀಡಾಭಿಮಾನಿಗಳಲ್ಲಿ ನಿರೀಕ್ಷೆಯಿದ್ದು ಮುಂಬರುವ ಪಂದ್ಯಗಳಲ್ಲಿ ಸತೀಶ್ ಕುಮಾರ್ ಯಾವ ರೀತಿ ಪ್ರದರ್ಶನವನ್ನು ನೀಡುತ್ತಾರೆ ಎಂಬುದನ್ನು ಕಾದು ನೋಡಬೇಕು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


