ಟೋಕಿಯೊ ಒಲಂಪಿಕ್ಸ್: ಪದಕದ ಭರವಸೆ ಮೂಡಿಸಿದ ಅತನು ದಾಸ್'ಗೆ ಸೋಲು!
ಈ ಬಾರಿಯ ಟೋಕಿಯೊ ಒಲಂಪಿಕ್ಸ್ ನಲ್ಲಿ ಪದಕ ಗೆಲ್ಲುವ ಭರವಸೆ ಮೂಡಿಸಿದ ಆರ್ಚರ್ ಅತನು ದಾಸ್ ಆಘಾತಕಾರಿ ಸೋಲನುಭವಿಸಿದ್ದಾರೆ.

ಟೋಕಿಯೊ: ಈ ಬಾರಿಯ ಒಲಿಂಪಿಕ್ಸ್ ನಲ್ಲಿ ಪದಕ ಗೆಲ್ಲುವ ಭರವಸೆ ಮೂಡಿಸಿದ ಆರ್ಚರ್ ಅತನು ದಾಸ್ ಆಘಾತಕಾರಿ ಸೋಲನುಭವಿಸಿದ್ದಾರೆ.
ಒಲಂಪಿಕ್ಸ್ ಕ್ರೀಡಾಕೂಟದ ಪುರುಷರ ವಿಭಾಗದ ಆರ್ಚರಿ ಸ್ಪರ್ಧೆಯಲ್ಲಿ ಭಾರತದ ಅತನು ದಾಸ್ ಪ್ರಿಕ್ವಾರ್ಟರ್ಫೈನಲ್ನಲ್ಲಿ 2012ರ ಸಮ್ಮರ್ ಒಲಿಂಪಿಕ್ಸ್‌ನಲ್ಲಿ ಬೆಳ್ಳಿ ಪದಕಕ್ಕೆ ಕೊರಳೊಡ್ಡಿದ್ದ ಜಪಾನದ ತಕಹರು ಫುರುಕವಾ ಅವರ ವಿರುದ್ಧ 4-6 ಅಂತರದಿಂದ ಸೋಲನ್ನಪ್ಪಿದ್ದಾರೆ.
ಈ ಹಿಂದೆ ನಡೆದ ಪಂದ್ಯದಲ್ಲಿ ವೈಯಕ್ತಿಕ ರಿಕರ್ವ್ ವಿಭಾಗದಲ್ಲಿ ಲಂಡನ್ ಒಲಿಂಪಿಕ್ಸ್‌ನಲ್ಲಿ ಚಿನ್ನದ ಪದಕ ವಿಜೇತ ದಕ್ಷಿಣ ಕೊರಿಯಾದ ಓಹ್ ಜಿನ್ ಹಿಯೆಕ್ ವಿರುದ್ಧ 6-5ರ ಅಂತರದ ರೋಚಕ ಗೆಲುವು ಸಾಧಿಸಿ ಪ್ರಿಕ್ವಾರ್ಟರ್ ಫೈನಲ್ ಪ್ರವೇಶಿಸಿದ್ದರು.
ಇಂದು ದಾಸ್ ಅವರು ತಕಹರು ಫುರುಕವಾ ವಿರುದ್ಧ 16ರ ಹಂತದ ಪಂದ್ಯದಲ್ಲಿ ಸೋಲನ್ನಪ್ಪಿದ್ದಾರೆ. ಈ ಮೂಲಕ ಪದಕದ ಭರವಸೆ ಮೂಡಿಸಿದ್ದ ದಾಸ್ಗೆ ನಿರಾಸೆಯುಂಟಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


