ರೆಜ್ಲರ್ ಹತ್ಯೆ ಪ್ರಕರಣ: ಸುಶೀಲ್ ಕುಮಾರ್ ಜೂಡೋ ಕೊಚ್ ಬಂಧನ
ಜೂನಿಯರ್ ರೆಜ್ಲರ್ ಸಾಗರ್ ರಾಣಾ ಕೊಲೆ ಪ್ರಕರಣ ಮತ್ತೊಂದು ತಿರುವು ಪಡೆದುಕೊಂಡಿದೆ. ಹತ್ಯೆ ಪ್ರಕರಣದಲ್ಲಿ ಮತ್ತೊಬ್ಬ ವ್ಯಕ್ತಿ ಸಂಬಂಧ ಹೊಂದಿದ್ದಾನೆ ಎಂಬ ಸುಳಿವು ಲಭಿಸಿದ ನಂತರ ಜೂಡೋ ಕೋಚ್ ಸುಭಾಷ್ ಎಂಬವವರನ್ನು ದೆಹಲಿ ಅಪರಾಧ ವಿಭಾಗದ ಪೊಲೀಸರು ಬುಧವಾರ ಬಂಧಿಸಿದ್ದಾರೆ.

ನವದೆಹಲಿ: ಜೂನಿಯರ್ ರೆಜ್ಲರ್ ಸಾಗರ್ ರಾಣಾ ಕೊಲೆ ಪ್ರಕರಣ ಮತ್ತೊಂದು ತಿರುವು ಪಡೆದುಕೊಂಡಿದೆ. ಹತ್ಯೆ ಪ್ರಕರಣದಲ್ಲಿ ಮತ್ತೊಬ್ಬ ವ್ಯಕ್ತಿ ಸಂಬಂಧ ಹೊಂದಿದ್ದಾನೆ ಎಂಬ ಸುಳಿವು ಲಭಿಸಿದ ನಂತರ ಜೂಡೋ ಕೋಚ್ ಸುಭಾಷ್ ಎಂಬವವರನ್ನು ದೆಹಲಿ ಅಪರಾಧ ವಿಭಾಗದ ಪೊಲೀಸರು ಬುಧವಾರ ಬಂಧಿಸಿದ್ದಾರೆ.
ಒಲಿಂಪಿಯನ್ ಸುಶೀಲ್ ಕುಮಾರ್ ಅವರಿಗೆ ಸುಭಾಷ್ ಜೂಡೋ ಕೋಚ್ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಸಾಗರ್ ರಾಣಾ ಕೊಲೆ ಪ್ರಕರಣದಲ್ಲಿ ಸುಶೀಲ್ ಕುಮಾರ್, ಆತನ ಹಲವು ಸಹಚರರು ಈಗಾಗಲೇ ಪೊಲೀಸ್ ಕಸ್ಟಡಿಯಲ್ಲಿದ್ದಾರೆ.
ಇತ್ತೀಚೆಗೆ ಸುಶೀಲ್ ಕುಮಾರ್ ಅವರ ಕಸ್ಟಡಿಯನ್ನು ಜೂನ್ 25ರವರೆಗೆ ವಿಸ್ತರಿಸಿ ದೆಹಲಿ ಮೆಟ್ರೋಪಾಲಿಟನ್ ಕೋರ್ಟ್ ಮ್ಯಾಜಿಸ್ಟ್ರೇಟ್ ರೀಟಾ ಜೈನ್ ಆದೇಶಿಸಿದ್ದರು. ಒಂಬತ್ತು ದಿನಗಳ ಕಸ್ಟಡಿ ಮುಗಿದ ನಂತರ ಪೊಲೀಸರು ಸುಶೀಲ್ ಕುಮಾರ್ ಅವರನ್ನು ಶುಕ್ರವಾರ ಕೋರ್ಟ್ ಮುಂದೆ ಹಾಜರುಪಡಿಸಿದಾಗ, ಬಂಧನವನ್ನು ಜೂನ್ 25 ರವರೆಗೆ ವಿಸ್ತರಿಸಿ ಆದೇಶಿಸಿದ್ದರು. ಸಾಗರ್ ರಾಣಾ ಹತ್ಯೆಗೆ ಸಂಬಂಧಿಸಿದಂತೆ ಸುಶೀಲ್ ಸೇರಿದಂತೆ ಒಟ್ಟು ಹತ್ತು ಮಂದಿಯನ್ನು ಪೊಲೀಸರು ಈವರೆಗೆ ಬಂಧಿಸಿದ್ದಾರೆ.
ಕಳೆದ ಮೇ 4 ರಂದು ದೆಹಲಿಯ ಛತ್ರಸಾಲ್ ಕ್ರೀಡಾಂಗಣದಲ್ಲಿ ಕಿರಿಯ ಕುಸ್ತಿಪಟುವನ್ನು ಭೀಕರವಾಗಿ ಹತ್ಯೆ ಮಾಡಲಾಗಿತ್ತು. ಸುಶೀಲ್ ಹಾಗೂ ಸಾಗರ್ ನಡುವಣ ನಡೆದ ಘರ್ಷಣೆಯಲ್ಲಿ ಸಾಗರ್ ನನ್ನು ಕೊಲೆ ಮಾಡಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.
Related Article
ಹತ್ಯೆ ಪ್ರಕರಣ: ಸುಶೀಲ್ ಕುಮಾರ್ ನ್ಯಾಯಾಂಗ ಬಂಧನ ಜೂನ್ 25 ರವರೆಗೆ ವಿಸ್ತರಣೆ
ಕೋರ್ಟ್ ಆದೇಶಕ್ಕೂ ಮುನ್ನವೇ ಜೈಲಿನಲ್ಲಿ ವಿಶೇಷ ಆಹಾರಕ್ಕೆ ಕುಸ್ತಿಪಟು ಸುಶೀಲ್ ಕುಮಾರ್ ಪಟ್ಟು!
ಪೊಲೀಸರ ಮನವಿ ತಿರಸ್ಕರಿಸಿ ಸುಶೀಲ್ ಕುಮಾರ್ ಗೆ ನ್ಯಾಯಾಂಗ ಬಂಧನಕ್ಕೆ ಕೋರ್ಟ್ ಆದೇಶ
ಸುಶೀಲ್ ಕುಮಾರ್ ಪೊಲೀಸ್ ಕಸ್ಟಡಿ ವಿಸ್ತರಣೆ
ಹತ್ಯೆ ಪ್ರಕರಣ: ಕುಸ್ತಿಪಟು ಸುಶೀಲ್ ಕುಮಾರ್ ಬಂಧನ
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


