ಅಗಲಿದ ಕ್ರೀಡಾ ತಾರೆಗೆ ನಮನ: ಸಕಲ ಸರ್ಕಾರಿ ಗೌರವಗಳೊಂದಿಗೆ ಮಿಲ್ಕಾ ಸಿಂಗ್ ಅಂತ್ಯಕ್ರಿಯೆ
ನಿನ್ನೆ ತಡರಾತ್ರಿ ನಿಧನರಾದ ದಿಗ್ಗಜ ಅಥ್ಲೀಟ್ ಮಿಲ್ಖಾ ಸಿಂಗ್ ಅವರ ಅಂತ್ಯಕ್ರಿಯೆ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿದೆ.

ಚಂಡೀಘರ್: ನಿನ್ನೆ ತಡರಾತ್ರಿ ನಿಧನರಾದ ದಿಗ್ಗಜ ಅಥ್ಲೀಟ್ ಮಿಲ್ಖಾ ಸಿಂಗ್ ಅವರ ಅಂತ್ಯಕ್ರಿಯೆ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿದೆ.
91 ರ ಹರೆಯದ ಮಿಲ್ಖಾ ಅವರ ಕುಟುಂಬ ಸದಸ್ಯರು ಮತ್ತು ಕ್ರೀಡಾ ಸಚಿವ ಕಿರೆನ್ ರಿಜಿಜು ಸೇರಿದಂತೆ ಹಲವಾರು ಗಣ್ಯರ ಸಮ್ಮುಖದಲ್ಲಿ ಚಂಡೀಘರ್ ನಲ್ಲಿ ಅಂತ್ಯಕ್ರಿಯೆ ವಿಧಿ ವಿಧಾನಗಳು ನೆರವೇರಿದೆ. 'ಫ್ಲೈಯಿಂಗ್ ಸಿಖ್' ಎಂದು ಎಲ್ಲರಿಂದ ಕರೆಸಿಕೊಳ್ಳುತ್ತಿದ್ದ ಮಿಲ್ಕಾ ಸಿಂಗ್ ಕೊರೋನಾ ಸಂಬಂಧಿತ ಸೋಂಕಿನಿಂದ ನಿಧನರಾಗಿದ್ದಾರೆ.
ಅವರ ಮಗ ಮತ್ತು ಶ್ರೇಷ್ಠ ಗಾಲ್ಫ್ ಆಟಗಾರ ಜೀವ್ ಮಿಲ್ಖಾ ಸಿಂಗ್ ತಂದೆಯ ಅಂತಿಮ ವಿಧಿ ವಿಧಾನಗಳನ್ನು ನೆರವೇರಿಸಿದ್ದಾರೆ.
ಪಂಜಾಬ್ ರಾಜ್ಯಪಾಲರು ಮತ್ತು ಚಂಡೀಘರ್ ಆಡಳಿತಾಧಿಕಾರಿ ವಿ ಪಿ ಸಿಂಗ್ ಬದ್ನೋರ್, ಪಂಜಾಬ್ ಹಣಕಾಸು ಸಚಿವ ಮನ್‌ಪ್ರೀತ್ ಸಿಂಗ್ ಬಾದಲ್, ಹರಿಯಾಣದ ಕ್ರೀಡಾ ಸಚಿವ ಸಂದೀಪ್ ಸಿಂಗ್ ಅವರು ಈ ವೇಳೆ ಹಾಜರಿದ್ದರು.
ಕ್ರೀಡಾಪಟುವನ್ನು ಗೌರವಿಸುವ ಸಂಕೇತವಾಗಿ ಪಂಜಾಬ್ ಸರ್ಕಾರ ಒಂದು ದಿನದ ಶೋಕಾಚರಣೆ ಮತ್ತು ರಜಾದಿನವನ್ನು ಘೋಷಿಸಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


