ಸುಶೀಲ್ ಕುಮಾರ್ ಪೊಲೀಸ್ ಕಸ್ಟಡಿ ವಿಸ್ತರಣೆ
ಛತ್ರಾಸಲ್ ಕ್ರೀಡಾಂಗಣದಲ್ಲಿ ಕುಸ್ತಿಪಟು ಸಾಗರ್ ಧಂಖರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ನ್ಯಾಯಾಲಯವು ಎರಡು ಬಾರಿ ಒಲಿಂಪಿಕ್ ಪದಕ ವಿಜೇತ ಕುಸ್ತಿಪಟು ಸುಶೀಲ್ ಕುಮಾರ್ ಮತ್ತು ಅವರ ಸಹೋದ್ಯೋಗಿ ಅಜಯ್ ಬಕ್ಕರ್ವಾಲಾ ಅವರಿಗೆ ನಾಲ್ಕು ದಿನಗಳ ಕಾಲ ಪೊಲೀಸ್ ಕಸ್ಟಡಿ ನೀಡಿದೆ.

ನವದೆಹಲಿ: ಛತ್ರಾಸಲ್ ಕ್ರೀಡಾಂಗಣದಲ್ಲಿ ಕುಸ್ತಿಪಟು ಸಾಗರ್ ಧಂಖರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ನ್ಯಾಯಾಲಯವು ಎರಡು ಬಾರಿ ಒಲಿಂಪಿಕ್ ಪದಕ ವಿಜೇತ ಕುಸ್ತಿಪಟು ಸುಶೀಲ್ ಕುಮಾರ್ ಮತ್ತು ಅವರ ಸಹೋದ್ಯೋಗಿ ಅಜಯ್ ಬಕ್ಕರ್ವಾಲಾ ಅವರಿಗೆ ನಾಲ್ಕು ದಿನಗಳ ಕಾಲ ಪೊಲೀಸ್ ಕಸ್ಟಡಿ ನೀಡಿದೆ.
ಪೊಲೀಸರು ಇನ್ನೂ ಏಳು ದಿನಗಳ ನೀಡುವಂತೆ ಕೋರಿದ್ದರು. ನ್ಯಾಯಾಧೀಶ ಮಾಯಾಂಕ್ ಗೋಯಲ್ ಉಲ್ಲೇಖಿಸಿ, "ನ್ಯಾಯದ ಹಿತದೃಷ್ಟಿಯಿಂದ, ಪೊಲೀಸರಿಗೆ ಇನ್ನೂ ನಾಲ್ಕು ದಿನಗಳ ಕಸ್ಟಡಿ ನೀಡಬಹುದು ಎಂದು ನಾನು ಭಾವಿಸುತ್ತೇನೆ" ಎಂದು ಹೇಳಿದ್ದಾರೆ.
ಮೇ 4 ರ ರಾತ್ರಿ ನಡೆದ ಘಟನೆಯ ನಂತರ 38 ವರ್ಷದ ಕುಸ್ತಿಪಟು ಸುಶೀಲ್ ಪರಾರಿಯಾಗಿದ್ದ. ಅವರನ್ನು ಮೇ 23 ರ ಬೆಳಿಗ್ಗೆ ರಾಜಧಾನಿಯ ಮುಂಡ್ಕಾ ಪ್ರದೇಶದಿಂದ ದೆಹಲಿ ಪೊಲೀಸರು ಬಂಧಿಸಿದ್ದಾರೆ. ಆತನ ವಿರುದ್ಧ ಜಾಮೀನು ರಹಿತ ವಾರಂಟ್ ಹೊರಡಿಸಲಾಗಿತ್ತು. ರೋಹಿಣಿ ನ್ಯಾಯಾಲಯವು ಅವರಿಗೆ ಆರು ದಿನಗಳ ಪೊಲೀಸ್ ಕಸ್ಟಡಿ ನೀಡಿತು, ಅದನ್ನು ಈಗ ಇನ್ನೂ ನಾಲ್ಕು ದಿನಗಳವರೆಗೆ ವಿಸ್ತರಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


